Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 120:1 - ಕನ್ನಡ ಸತ್ಯವೇದವು C.L. Bible (BSI)

1 ಸಂಕಟದಲಿ ಮೊರೆಯಿಟ್ಟೆನು ಪ್ರಭುವಿಗೆ I ಕೊಟ್ಟನು ಸದುತ್ತರವನು ಆತನೆನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಇಕ್ಕಟ್ಟಿನಲ್ಲಿ ನಾನು ಯೆಹೋವ ದೇವರಿಗೆ ಕೂಗಿದೆನು; ಅವರು ನನಗೆ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 120:1
31 ತಿಳಿವುಗಳ ಹೋಲಿಕೆ  

ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ I ಪ್ರಾರ್ಥನೆ ಮಾಡಿದೆ ಆ ನನ್ನ ದೇವನಲಿ I ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ II


“ಸಂಕಟದಲಿ, ಸರ್ವೇಶ್ವರಾ, ನಾ ನಿನಗೆ ಮೊರೆಯಿಟ್ಟೆ ನೀನೆನ್ನ ಮೊರೆಗೆ ಕಿವಿಗೊಟ್ಟೆ. ಪಾತಾಳದಂತರಾಳದಿಂದ ನಿನ್ನ ನೆರವನ್ನು ಬೇಡಿದೆ ನೀನೆನ್ನ ಪ್ರಾರ್ಥನೆಯನ್ನಾಲಿಸಿದೆ.


ಇಕ್ಕಟ್ಟಿನಲ್ಲಿ ಮೊರೆಯಿಟ್ಟೆನು ಪ್ರಭುವಿಗೆ I ಕಿವಿಗೊಟ್ಟು ಬಿಡುಗಡೆಯಿತ್ತನು ಆತನೆನಗೆ II


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಅಂತರಾಳದಿಂದ ಪ್ರಭು, ಮೊರೆಯಿಡುತ್ತಿರುವೆ ನಿನಗೆ I


ಕಡುಯಾತನೆಯಲ್ಲಿದ್ದ ಅವರು ಇನ್ನೂ ಶ್ರದ್ಧೆಯಿಂದ ಪ್ರಾರ್ಥಿಸಿದರು. ಅವರ ಬೆವರು ರಕ್ತದ ಹನಿಯಂತೆ ತೊಟ್ಟುತೊಟ್ಟಾಗಿ ನೆಲದ ಮೇಲೆ ಬೀಳುತ್ತಿತ್ತು.


ಹಮ್ಮಿಲ್ಲ ಪ್ರಭು, ನನ್ನೆದೆಯೊಳು I ನನಗಿಲ್ಲ ಸೊಕ್ಕಿನ ಕಣ್ಣುಗಳು II ಶಕ್ತಿಮೀರಿದ ಕಾರ್ಯಕೆ ನಾ ಕೈ ಹಾಕಿಲ್ಲ I ಅಸಾಧ್ಯವಾದುದನು ನಾ ಕೈಗೊಂಡಿಲ್ಲ II


ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II


ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿನಿಂದ ಬಿಡುಗಡೆಯಿತ್ತನು ಅವರಿಗೆ II


ಭಜಿಸಿರಿ ಪ್ರಭುವನು ಆತನ ಸಕಲ ಸೇವಕರೇ I ಆತನ ಮಂದಿರದಲಿ ರಾತ್ರಿ ಕಾವಲಿರುವವರೇ II


ಸೋದರರು ಒಂದಾಗಿ ಬಾಳ್ವುದು I ಅದೆಷ್ಟು ಚೆನ್ನ, ಅದೆಷ್ಟು ರಮ್ಯ II


ನೆನಸಿಕೋ ಹೇ ಪ್ರಭೂ, ದಾವೀದನನು I ಆತ ಸಹಿಸಿದ ಕಷ್ಟದುಃಖಗಳನು II


ಪ್ರಭುವೇ ಮನೆಮಠವನು ಕಟ್ಟದ ಹೊರತು I ಅದನು ಕಟ್ಟುವವರ ಪ್ರಯಾಸ ವ್ಯರ್ಥ II ಪ್ರಭುವೇ ಪಟ್ಟಣವನು ಕಟ್ಟಿದ ಹೊರತು I ಕಾವಲುಗಾರನು ಅದನು ಕಾಯುವುದು ವ್ಯರ್ಥ II


ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು? I ಇಸ್ರಯೇಲರೇ ಹೇಳಲಿ ಆ ದುರ್ಗತಿಯನ್ನು ಕುರಿತು II


ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I ಆಯಿತೆನಗೆ ಆನಂದ, ಜನರೆನ್ನ ಕರೆದಾಗ II


ಕಣ್ಣೆತ್ತಿ ನಾ ನೋಡುವೆ ಪರ್ವತದತ್ತ I ಕೇಳುವೆ : “ನನಗೆ ಒತ್ತಾಸೆ ಎತ್ತಣಿಂದ?” II


ಕಷ್ಟಕಾಲದೊಳು ವಿಮುಖನಾಗಬೇಡ ನೀನೆನಗೆ I ಕಿವಿಗೊಡು, ಮೊರೆಯಿಡುವಾಗಲೆ, ಸದುತ್ತರಿಸು ಬೇಗನೆ II


ಯೌವನಾರಭ್ಯ ಶತ್ರುಕಾಡಿದ್ದು ಎಂತೆಂದು I ಇಸ್ರಯೇಲ್ ಜನಾಂಗ ವರದಿ ಮಾಡಲಿ ನಮಗಿಂದು II


ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II


ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ I ಅದೊಂದು ಕನಸು ಕಂಡಂತಿತ್ತು ನಮಗೆ ಆವಾಗ II


ಪರಲೋಕದಲಿ ಆಸೀನನಾಗಿರುವ ಪ್ರಭುವೆ I ನನ್ನ ಕಣ್ಣುಗಳನು ನಿನ್ನ ಕಡೆಗೆ ಎತ್ತಿರುವೆ II


ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. “ನಾನು ಇವನನ್ನು ಸರ್ವೇಶ್ವರನಿಂದ ಬೇಡಿ ಪಡೆದೆ,” ಎಂದು ಹೇಳಿ ಆ ಮಗುವಿಗೆ ‘ಸಮುವೇಲ’ ಎಂದು ಹೆಸರಿಟ್ಟಳು.


ಸರ್ವೇಶ್ವರ ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ.


ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


ಸಾಗರದ ಉದರಕೆ ನೀನೆನ್ನ ತಳ್ಳಿರುವೆ ಅಗಾಧ ಜಲದೊಳಗೆ ದೂಡಿರುವೆ. ಸುತ್ತಮುತ್ತಲಿದೆ ಪ್ರವಾಹದ ಹೊಡೆತ ಮೇಲ್ಗಡೆ ಅಬ್ಬರಿಪ ಅಲೆಗಳ ಭೋರ್ಗರೆತ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು