Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 121:3 - ಕನ್ನಡ ಸತ್ಯವೇದವು C.L. Bible (BSI)

3 ನಿನ್ನ ಕಾಲೆಡವದಂತೆ ನೋಡುವನಾತ I ತೂಕಡಿಸಲಾರನು ನಿನ್ನ ಕಾಯುವಾತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ನಿನ್ನ ಪಾದಗಳನ್ನು ಕದಲಗೊಡಿಸದಿರಲಿ; ನಿನ್ನನ್ನು ಕಾಯುವವನು ತೂಕಡಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆತನು ನಿನ್ನನ್ನು ಬೀಳಗೊಡಿಸುವುದಿಲ್ಲ; ನಿನ್ನ ಸಂರಕ್ಷಕನು ನಿದ್ರೆಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರು ನಿಮ್ಮ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿಮ್ಮನ್ನು ಕಾಪಾಡುವ ದೇವರು ತೂಕಡಿಸುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 121:3
11 ತಿಳಿವುಗಳ ಹೋಲಿಕೆ  

ಸರ್ವೇಶ್ವರನೇ ನಿನಗೆ ಆಧಾರವಾಗಿರುವನು, ನಿನ್ನ ಕಾಲು ಉರುಲಿಗೆ ಸಿಕ್ಕದಂತೆ ಕಾಪಾಡುವನು.


ಹೀಗೆ ನೀನು ಎಡವದೆ ನಡೆಯುವೆ, ನಿನ್ನ ಮಾರ್ಗದೊಳು ಭಯವಿಲ್ಲದೆ ಸಾಗುವೆ.


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ಸರ್ವೇಶ್ವರನಾದ ನಾನೇ ಇದರ ತೋಟಗಾರ, ಕ್ಷಣಕ್ಷಣಕ್ಕೂ ಇದಕೆ ಹೊಯ್ಯುವೆ ನೀರ, ಇದನ್ನಾದರೂ ಮುಟ್ಟದಂತೆ ಕಾಯುವೆ ನಿರಂತರ.


ನಿನ್ನ ಕಾಲು ಕಲ್ಲಿಗೆ ತಾಗದಂತೆ I ನಿನ್ನನೆತ್ತಿಕೊಳ್ವರವರು ಕೈಗಳಲೆ II


ಪ್ರಭುವೇ ಮನೆಮಠವನು ಕಟ್ಟದ ಹೊರತು I ಅದನು ಕಟ್ಟುವವರ ಪ್ರಯಾಸ ವ್ಯರ್ಥ II ಪ್ರಭುವೇ ಪಟ್ಟಣವನು ಕಟ್ಟಿದ ಹೊರತು I ಕಾವಲುಗಾರನು ಅದನು ಕಾಯುವುದು ವ್ಯರ್ಥ II


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ನಮ್ಮ ಪ್ರಾಣವನ್ನಾತ ಉಳಿಸಿದನಯ್ಯಾ I ಕಾಲೆಡವದಂತೆ ಕಾಪಾಡಿದನಯ್ಯಾ II


ನ್ಯಾಯಮಾರ್ಗವನ್ನು ಕಾಯುವನಾತ, ಭಕ್ತರ ಹಾದಿಯನ್ನು ಭದ್ರವಾಗಿಸುವನಾತ.


ಅಂಥವನನು ಪ್ರಭು ಜೀವದಿಂದಿರಿಸುವನು, ಸುರಕ್ಷಿತವಾಗಿಡುವನು I ನಾಡಿನಲ್ಲವನನು ಧನ್ಯನಾಗಿಸುವನು, ಶತ್ರುಗಳಿಗಧೀನನಾಗಿಸನು II


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು