Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 122:1 - ಕನ್ನಡ ಸತ್ಯವೇದವು C.L. Bible (BSI)

1 ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I ಆಯಿತೆನಗೆ ಆನಂದ, ಜನರೆನ್ನ ಕರೆದಾಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನ ಮಂದಿರಕ್ಕೆ ಹೋಗೋಣ, ಬಾ ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಯೆಹೋವನ ಆಲಯಕ್ಕೆ ಹೋಗೋಣ” ಎಂದು ಜನರು ಹೇಳಿದಾಗ ನನಗೆ ಬಹು ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಯೆಹೋವ ದೇವರ ಆಲಯಕ್ಕೆ ಹೋಗೋಣ,” ಎಂದು ಜನರು ನನ್ನನ್ನು ಕರೆದಾಗ, ನನಗೆ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 122:1
27 ತಿಳಿವುಗಳ ಹೋಲಿಕೆ  

ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II


ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ಭಜಿಸಿರಿ ಪ್ರಭುವನು ಆತನ ಸಕಲ ಸೇವಕರೇ I ಆತನ ಮಂದಿರದಲಿ ರಾತ್ರಿ ಕಾವಲಿರುವವರೇ II


ಸಂಕಟದಲಿ ಮೊರೆಯಿಟ್ಟೆನು ಪ್ರಭುವಿಗೆ I ಕೊಟ್ಟನು ಸದುತ್ತರವನು ಆತನೆನಗೆ II


ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II


ಕಣ್ಣೆತ್ತಿ ನಾ ನೋಡುವೆ ಪರ್ವತದತ್ತ I ಕೇಳುವೆ : “ನನಗೆ ಒತ್ತಾಸೆ ಎತ್ತಣಿಂದ?” II


ಪರಲೋಕದಲಿ ಆಸೀನನಾಗಿರುವ ಪ್ರಭುವೆ I ನನ್ನ ಕಣ್ಣುಗಳನು ನಿನ್ನ ಕಡೆಗೆ ಎತ್ತಿರುವೆ II


ತೆರಳಲಿಲ್ಲವೆ ನಾವೀರ್ವರು ದೇವಾಲಯಕೆ I ಭಕ್ತರೊಂದಿಗೆ ಮಧುರ ಸಂಭಾಷಣೆಯೊಂದಿಗೆ? II


ಹೌದು, ದಿನ ಬರುವುದು. ಆಗ ಕಾವಲುಗಾರರು ಎಫ್ರಯಿಮಿನ ಗುಡ್ಡಗಳ ಮೇಲೆ ನಿಂತು, ‘ಎದ್ದೇಳಿ, ಹೋಗೋಣ. ಬನ್ನಿ ಸಿಯೋನಿಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಾನಕ್ಕೆ’ ಎಂದು ಕೂಗಿ ಕರೆ ನೀಡುವರು.”


ಸೋದರರು ಒಂದಾಗಿ ಬಾಳ್ವುದು I ಅದೆಷ್ಟು ಚೆನ್ನ, ಅದೆಷ್ಟು ರಮ್ಯ II


ಹಮ್ಮಿಲ್ಲ ಪ್ರಭು, ನನ್ನೆದೆಯೊಳು I ನನಗಿಲ್ಲ ಸೊಕ್ಕಿನ ಕಣ್ಣುಗಳು II ಶಕ್ತಿಮೀರಿದ ಕಾರ್ಯಕೆ ನಾ ಕೈ ಹಾಕಿಲ್ಲ I ಅಸಾಧ್ಯವಾದುದನು ನಾ ಕೈಗೊಂಡಿಲ್ಲ II


ಅಂತರಾಳದಿಂದ ಪ್ರಭು, ಮೊರೆಯಿಡುತ್ತಿರುವೆ ನಿನಗೆ I


ಪ್ರಭುವೇ ಮನೆಮಠವನು ಕಟ್ಟದ ಹೊರತು I ಅದನು ಕಟ್ಟುವವರ ಪ್ರಯಾಸ ವ್ಯರ್ಥ II ಪ್ರಭುವೇ ಪಟ್ಟಣವನು ಕಟ್ಟಿದ ಹೊರತು I ಕಾವಲುಗಾರನು ಅದನು ಕಾಯುವುದು ವ್ಯರ್ಥ II


ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II


ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು? I ಇಸ್ರಯೇಲರೇ ಹೇಳಲಿ ಆ ದುರ್ಗತಿಯನ್ನು ಕುರಿತು II


ಹೃದಯಾನಂದಕರ ನಿನ್ನ ಕಟ್ಟಳೆಗಳು I ನನಗಮರ ಸ್ವಾಸ್ತ್ಯವಾದುವುವು ಅವುಗಳು II


ಯೌವನಾರಭ್ಯ ಶತ್ರುಕಾಡಿದ್ದು ಎಂತೆಂದು I ಇಸ್ರಯೇಲ್ ಜನಾಂಗ ವರದಿ ಮಾಡಲಿ ನಮಗಿಂದು II


ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ I ಅದೊಂದು ಕನಸು ಕಂಡಂತಿತ್ತು ನಮಗೆ ಆವಾಗ II


ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II


ನೆನಸಿಕೋ ಹೇ ಪ್ರಭೂ, ದಾವೀದನನು I ಆತ ಸಹಿಸಿದ ಕಷ್ಟದುಃಖಗಳನು II


ಪ್ರಿಯವಾದುದೆನಗೆ ನಿನ್ನ ನಿವಾಸದ ಮಂದಿರ I ಸುಪ್ರೀತವಾದುದು ನಿನ್ನ ಮಹಿಮೆಯ ಆಗರ II


ಜನರು ಪ್ರವೇಶಿಸುವಾಗ ರಾಜನು ಅವರ ಮಧ್ಯೆ ಪ್ರವೇಶಿಸಲಿ ಅವರು ಹೊರಡುವಾಗ ಅವನೂ ಹೊರಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು