Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 122:6 - ಕನ್ನಡ ಸತ್ಯವೇದವು C.L. Bible (BSI)

6 ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ I “ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆರೂಸಲೇವಿುನ ಶುಭಕ್ಕೋಸ್ಕರ ಪ್ರಾರ್ಥಿಸಿರಿ. [ಯೆರೂಸಲೇಮೇ,] ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜೆರುಸಲೇಮಿನ ಶಾಂತಿಗೋಸ್ಕರ ಪ್ರಾರ್ಥಿಸಿರಿ: “ನಿನ್ನನ್ನು ಪ್ರೀತಿಸುವ ಜನರು ಅಲ್ಲಿ ಶಾಂತಿಯನ್ನು ಕಂಡುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥನೆಮಾಡಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಅಭಿವೃದ್ಧಿಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 122:6
16 ತಿಳಿವುಗಳ ಹೋಲಿಕೆ  

ಸಿಯೋನಿಗೆ ದೇವಾ, ಶುಭವನು ಕರುಣಿಸು I ಜೆರುಸಲೇಮ್ ಕೋಟೆಯನು ಮರಳಿ ಎಬ್ಬಿಸು II


ನಾನು ಯಾವ ನಗರಕ್ಕೆ ನಿಮ್ಮನ್ನು ಸಾಗಿಸಿದ್ದೇನೋ ಅದರ ಕ್ಷೇಮವನ್ನು ಹಾರೈಸಿ, ಅದಕ್ಕಾಗಿ ಸರ್ವೇಶ್ವರನಾದ ನನ್ನನ್ನು ಪ್ರಾರ್ಥಿಸಿರಿ. ಅದರ ಕ್ಷೇಮವೇ ನಿಮ್ಮ ಕ್ಷೇಮ.


"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


“ಕತ್ತಿಯಿಂದ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ. ದೂರವಿರುವಾಗಲು ಸರ್ವೇಶ್ವರನನ್ನು ಸ್ಮರಿಸಿರಿ. ಜೆರುಸಲೇಮನ್ನು ಕುರಿತು ಮನಸ್ಸಾರೆ ಹಂಬಲಿಸಿರಿ.


ಕಾಲು ಮಡಚಿ ಹೊಂಚುಕೂತ ಸಿಂಹದಂತಿದೆ ಆ ಜನಾಂಗ; ಕೆಣಕಲು ಯಾರಿಂದಾದೀತು, ಅದು ಮೃಗೇಂದ್ರನಿಗೆ ಸಮಾನ!


ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.


ಪವಿತ್ರಾತ್ಮರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. ಅದು ನಿಮ್ಮನ್ನು ಸಮಾಧಾನದಲ್ಲಿ ಬಂಧಿಸುವುದು.


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ!


ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ.


ಇಸ್ರಯೇಲರ ಪ್ರಮುಖರು ಮಾತ್ರ ಜೆರುಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತುಹತ್ತು ಮಂದಿಯಲ್ಲಿ ಒಂಬತ್ತುಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಒಬ್ಬನು ಪವಿತ್ರ ನಗರವಾದ ಜೆರುಸಲೇಮಿನಲ್ಲಿ ವಾಸಿಸುವುದಕ್ಕಾಗಿ, ಅಲ್ಲಿಗೆ ಬರುವಂತೆ ಚೀಟುಹಾಕಿ ಗೊತ್ತುಮಾಡಿದರು.


ಮತ್ತು ಸ್ವಂತ ಇಚ್ಛೆಯಿಂದ ಜೆರುಸಲೇಮಿನಲ್ಲಿ ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಆಶೀರ್ವದಿಸಿದರು.


ಅಲ್ಲದೆ ಯೆಹೂದ್ಯರನ್ನೆಲ್ಲಾ ಸಂಹರಿಸಬಿಡುವುದಕ್ಕೋಸ್ಕರ ಶೂಷನ್ ನಗರದಲ್ಲಿ ಪ್ರಕಟಗೊಂಡ ರಾಜಶಾಸನದ ಒಂದು ಪ್ರತಿಯನ್ನು ಅವನ ಕೈಗಿತ್ತನು. ಅದನ್ನು ಎಸ್ತೇರಳಿಗೆ ತೋರಿಸಿ ವಿವರಿಸುವಂತೆಯೂ ಆಕೆ ಅರಸನ ಸಮ್ಮುಖಕ್ಕೆ ಹೋಗಿ, ಆತ ದಯೆತೋರುವಂತೆ ಆತನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹಮಾಡುವಂತೆ ಆಕೆಗೆ ತಿಳಿಸಬೇಕೆಂತಲೂ ಹೇಳಿಕಳುಹಿಸಿದನು.


ಜೆರುಸಲೇಮನ್ನು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನೆನಪಿಸುತ್ತಿರಬೇಕು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನಿಮಗಿರದಿರಲಿ ವಿಶ್ರಾಂತಿ, ಆತನಿಗೂ ಕೊಡದಿರಿ ವಿರಾಮ.


“ಜೆರುಸಲೇಮನ್ನು ಪ್ರೀತಿಸುವವರೇ, ನೀವೆಲ್ಲರೂ ಆನಂದಿಸಿರಿ ಆಕೆಯೊಂದಿಗೆ, ಹರ್ಷಗೊಳ್ಳಿರಿ ಆಕೆಯ ಬಗ್ಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು