Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 122:7 - ಕನ್ನಡ ಸತ್ಯವೇದವು C.L. Bible (BSI)

7 ಶುಭವಿರಲೀ ನಿನ್ನೀ - ಪೌಳಿಗೋಡೆಗಳೊಳಗೆ” II ಸಂರಕ್ಷಣೆ ಇರಲಿ ನಿನ್ನ ಅರಮನೆಗಳೊಳಗೆ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿನ್ನ ಕೋಟೆಗಳೊಳಗೆ ಶಾಂತಿ ನೆಲಸಿರಲಿ ನಿನ್ನ ಮಹಾ ಕಟ್ಟಡಗಳಲ್ಲಿ ಸುರಕ್ಷತೆಯಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿನ್ನ ಪ್ರಾಕಾರದಲ್ಲಿ ಸಮಾಧಾನವಿರಲಿ, ನಿನ್ನ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 122:7
7 ತಿಳಿವುಗಳ ಹೋಲಿಕೆ  

ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ಸಮಾಧಾನಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ದೇವರೊಡನೆ ಸತ್ಸಂಬಂಧವೆಂಬ ಫಲವನ್ನು ಕೊಯ್ಯುತ್ತಾರೆ.


ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.


ಅದರ ಕೋಟೆಕೊತ್ತಲಗಳ ನಡುವೆ ದೇವನು I ತಾನೇ ಸುಭದ್ರ ದುರ್ಗವೆಂದು ತೋರಿಹನು II


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಕಣ್ಣಿಟ್ಟು ನೋಡಿರಿ ಅದರ ಕೋಟೆಗಳನು I ಚೆನ್ನಾಗಿ ಗಮನಿಸಿರಿ ಅದರ ಪ್ರಾಕಾರಗಳನು II


ಆಗ ‘ಮೂವತ್ತು ಪ್ರಮುಖ’ರ ಪಡೆಯಲ್ಲಿ ಮುಖ್ಯಸ್ಥನಾದ ಅಮಾಸೈ ಆತ್ಮಾವೇಶವುಳ್ಳವನಾಗಿ ಹೀಗೆ ಕೂಗಿ ಹೇಳಿದನು: “ಜೆಸ್ಸೆಯ ಮಗ ದಾವೀದನಿಗೆ ಶುಭವಾಗಲಿ! ನಾವೆಲ್ಲರು ನಿಮ್ಮವರು; ನಿಮಗೂ ನಿಮ್ಮ ಸಹಾಯಕರಿಗೂ ಶುಭವಾಗಲಿ! ದೇವರು ನಿಮಗೆ ಜಯಪ್ರದರಾಗಿದ್ದಾರೆ.” ದಾವೀದ ಅವರನ್ನು ಸ್ವಾಗತಿಸಿ ತನ್ನ ಸೈನ್ಯದಲ್ಲಿ ಮುಖ್ಯಾಧಿಕಾರಿಗಳನ್ನಾಗಿ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು