Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 124:7 - ಕನ್ನಡ ಸತ್ಯವೇದವು C.L. Bible (BSI)

7 ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು I ಹರಿದುಹೋಯಿತಿದೊ ಬಲೆಯು, ಹಾರಿಹೋದೆವು ನಾವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾವು ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದ್ದೇವೆ. ಬಲೆಯು ಹರಿದುಹೋದದ್ದರಿಂದ ನಾವು ತಪ್ಪಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾವು ಬೇಟೆಗಾರರ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತೆ ಇದ್ದೇವೆ. ನಾವು ಹರಿದುಹೋದ ಬಲೆಯಿಂದ ತಪ್ಪಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 124:7
13 ತಿಳಿವುಗಳ ಹೋಲಿಕೆ  

ತಪ್ಪಿಸುವನಾತನು ಬೇಟೆಗಾರನ ಬಲೆಯಿಂದ I ರಕ್ಷಿಸುವನು ಮಾರಕವಾದ ವ್ಯಾಧಿಯಿಂದ II


ಬೇಡನಿಂದ ಓಡುವ ಜಿಂಕೆಯಂತೆ, ಬೇಟೆಗಾರನ ಕೈಯಿಂದ ಹಾರಿಹೋಗುವ ಹಕ್ಕಿಯಂತೆ, ಆ ಬಲೆಯಿಂದ ತಪ್ಪಿಸಿಕೊ.


ಸೈತಾನನ ಬಲೆಯಲ್ಲಿ ಸಿಕ್ಕಿಕೊಂಡು ಅವನ ಇಚ್ಛಾನುಸಾರ ನಡೆಯುವವರು ಹೀಗೆ ಬಿಡುಗಡೆಹೊಂದಲು ಸಾಧ್ಯವಾಗಬಹುದು.


ತಿರುಗಿದೆ ಎನ್ನ ನಯನ ಪ್ರಭುವಿನತ್ತ I ಉರುಲಿಂದ ಕಾಲನು ಕಳಚಿದನಾತ II


ಯಾವನಾದರೂ ನನ್ನ ಒಡೆಯರಾದ ನಿಮ್ಮನ್ನು ಹಿಂಸಿಸಿ ಜೀವತೆಗೆಯಬೇಕೆಂದು ಇರುವಾಗ, ಆ ನಿಮ್ಮ ಜೀವ, ತಮ್ಮ ದೇವರಾದ ಸರ್ವೇಶ್ವರನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಸುಭದ್ರವಾಗಿರಲಿ; ಆದರೆ ನಿಮ್ಮ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.


ಕಳ್ಳಕಾಕರ ಗುಂಪು ಫಕ್ಕನೆ ಅವರ ಮೇಲೆ ಬೀಳಲಿ. ಅವರ ಮನೆಮಠಗಳಿಂದ ಕಿರಿಚಾಟ ಕೇಳಿಬರಲಿ. ಅವರು ನನ್ನನ್ನು ಕೆಡವಲು ಗುಂಡಿಯನ್ನು ತೋಡಿದ್ದಾರೆ. ನನ್ನ ಕಾಲುಗಳಿಗೆ ಉರುಲನ್ನು ಗುಟ್ಟಾಗಿ ಒಡ್ಡಿದ್ದಾರೆ.


“ನನ್ನ ಜನರ ನಡುವೆ ಕೆಟ್ಟವರು ಕಂಡುಬಂದಿದ್ದಾರೆ. ಬೇಡರು ಹೊಂಚುಹಾಕುವ ಹಾಗೆ ಅವರು ಹೊಂಚುಹಾಕುತ್ತಾರೆ. ಬೋನೊಡ್ಡಿ ಜನರನ್ನು ಹಿಡಿಯುತ್ತಾರೆ.


ಅವನು ದಣಿದವನೂ ಧೈರ್ಯಗುಂದಿದವನೂ ಆಗಿರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು; ಅವನ ಜನರೆಲ್ಲರೂ ಓಡಿಹೋಗುವರು.


ಆದ್ದರಿಂದ ಅವನು ದಾವೀದನನ್ನು ಹಿಡಿಯುವ ಕೆಲಸವನ್ನು ಬಿಟ್ಟು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟನು. ಈ ಕಾರಣ ಆ ಬೆಟ್ಟಕ್ಕೆ’ಅಡ್ಡಬೆಟ್ಟ’ ಎಂದು ಹೆಸರಾಯಿತು.


ನಮ್ಮ ಪ್ರಭುವಾದರೋ ಸತ್ಯಸ್ವರೂಪನು I ಕಡಿದಿಹನು ದುರುಳರು ಹಾಕಿದ ಕಟ್ಟುಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು