Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 125:3 - ಕನ್ನಡ ಸತ್ಯವೇದವು C.L. Bible (BSI)

3 ಸಜ್ಜನರ ನಾಡಿನಲಿ ಉಳಿಯದು ದುರ್ಜನರ ದಬ್ಬಾಳಿಕೆ I ಉಳಿಯಿತಾದರೆ ಸಜ್ಜನರೂ ಕೈಹಚ್ಚಬಹುದು ಅಕ್ರಮಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದುಷ್ಟರ ದಂಡಾಧಿಕಾರವು ನೀತಿವಂತರ ಸ್ವಾಸ್ತ್ಯದಲ್ಲಿ ಉಳಿಯುವದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಚ್ಚಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದುಷ್ಟರು ನೀತಿವಂತರನ್ನು ಶಾಶ್ವತವಾಗಿ ಆಳುವುದಿಲ್ಲ. ಅವರು ಶಾಶ್ವತವಾಗಿ ಆಳಿದರೆ ನೀತಿವಂತರೂ ದುಷ್ಕೃತ್ಯಗಳನ್ನು ಮಾಡತೊಡಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 125:3
11 ತಿಳಿವುಗಳ ಹೋಲಿಕೆ  

ಕೆಟ್ಟತನವನ್ನು ಬಿತ್ತುವವನು ಕೇಡನ್ನೆ ಕೊಯ್ಯುವನು; ಅವನ ಸಿಟ್ಟು ಅವನನ್ನೆ ಸುಟ್ಟುಬಿಡುವುದು.


ಸಿಗನು ಶತ್ರುವಿನ ಕುತಂತ್ರಕೆ I ಕುಗ್ಗನು ಕೆಡುಕರಾ ದರ್ಪಕೆ II


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.


ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.


ಇಂದು ಈ ಗವಿಯಲ್ಲಿ ಸರ್ವೇಶ್ವರ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೆಂಬುದು ಈಗ ನಿಮಗೆ ಗೊತ್ತಾಗಿರಬೇಕು. ನಿಮ್ಮನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಸರ್ವೇಶ್ವರನಿಂದ ಅಭಿಷಿಕ್ತರಾದ ನನ್ನ ಒಡೆಯರ ಮೇಲೆ ಕೈಯೆತ್ತುವುದಿಲ್ಲ,’ ಎಂದು ಹೇಳಿ ನಿಮ್ಮನ್ನು ಉಳಿಸಿದೆ.


ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.


ಆತನು ಸದಾ ತಪ್ಪು ಹುಡುಕುವವನಲ್ಲ I ನಿತ್ಯಕು ಕೋಪ ಇಟ್ಟುಕೊಳ್ಳುವವನಲ್ಲ II


ಏಕೆನೆ, ನಮ್ಮ ಸ್ವಭಾವವನು ಆತನು ಬಲ್ಲ I ನಾವು ಹುಡಿಮಣ್ಣೆಂದವನಿಗೆ ತಿಳಿದಿದೆಯಲ್ಲಾ II


ಮಿತ್ರರ ಮೇಲೆ ಕೈಯೆತ್ತಿರುವನು ಆ ನನ್ನ ಗೆಳೆಯನು I ತಾನು ಮಾಡಿದ ಒಪ್ಪಂದವನು ತಾನೆ ಮೀರಿ ನಡೆದಿಹನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು