Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 126:1 - ಕನ್ನಡ ಸತ್ಯವೇದವು C.L. Bible (BSI)

1 ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ I ಅದೊಂದು ಕನಸು ಕಂಡಂತಿತ್ತು ನಮಗೆ ಆವಾಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸುಕಂಡವರಂತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ನಮ್ಮನ್ನು ಸೆರೆಯಿಂದ ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸು ಕಂಡವರಂತಿದ್ದೆವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡವರ ಹಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 126:1
24 ತಿಳಿವುಗಳ ಹೋಲಿಕೆ  

“ಜುದೇಯವೇ, ನೀನು ಮಾಡುವ ದುಷ್ಕೃತ್ಯಗಳಿಗೆ ತಕ್ಕ ಸುಗ್ಗಿ ಕಾದಿದೆ.


ಸರ್ವೇಶ್ವರಸ್ವಾಮಿಯ ನುಡಿಯಿದು: “ಆ ದಿನಗಳಲ್ಲಿ ಜುದೇಯ ಹಾಗೂ ಜೆರುಸಲೇಮಿನ ಸಿರಿಸಂಪತ್ತನ್ನು ಮರಳಿ ಕೊಡುವೆನು.


ಪ್ರಭೂ, ತೋರಿಸಿದೆ ಕರುಣೆ ನಿನ್ನ ನಾಡಿಗೆ I ಮರಳಿಸಿದೆ ಸುಕ್ಷೇಮವನು ಯಕೋಬ್ಯರಿಗೆ II


ಪೇತ್ರನು ಸೆರೆಮನೆಯ ಹೊರಕ್ಕೆ ಅವನನ್ನು ಹಿಂಬಾಲಿಸಿ ಹೋದನು. ಅಷ್ಟಾದರೂ ದೂತನು ಮಾಡುತ್ತಿರುವುದು ನಿಜವೆಂದು ಅವನಿಗೆ ಅರಿವಾಗಲಿಲ್ಲ; ತನಗೇನೋ ದರ್ಶನವಾಗುತ್ತಿದೆಯೆಂದೆ ಭಾವಿಸಿದನು.


ಸಂಕಟದಲಿ ಮೊರೆಯಿಟ್ಟೆನು ಪ್ರಭುವಿಗೆ I ಕೊಟ್ಟನು ಸದುತ್ತರವನು ಆತನೆನಗೆ II


ಪರಲೋಕದಲಿ ಆಸೀನನಾಗಿರುವ ಪ್ರಭುವೆ I ನನ್ನ ಕಣ್ಣುಗಳನು ನಿನ್ನ ಕಡೆಗೆ ಎತ್ತಿರುವೆ II


ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ದೇವರು ತನ್ನ ಪ್ರಜೆಗೆ ಮರಳಿ ಸಿರಿಸಂಪದ I ನೀಡಲಿ ಯಕೋಬ ಮೇಣ್ ಇಸ್ರಯೇಲ ಜನತೆಗೆ ಹರ್ಷಾನಂದ II


ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II


ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು? I ಇಸ್ರಯೇಲರೇ ಹೇಳಲಿ ಆ ದುರ್ಗತಿಯನ್ನು ಕುರಿತು II


ಯೋಬನು ತನ್ನ ಮಿತ್ರರಿಗೋಸ್ಕರ ಪ್ರಾರ್ಥಿಸಿದ ಬಳಿಕ ಸರ್ವೇಶ್ವರಸ್ವಾಮಿ ಅವನ ದುಸ್ಥಿತಿಯನ್ನು ಹೋಗಲಾಡಿಸಿದರು. ಅವನ ಆಸ್ತಿಪಾಸ್ತಿಯನ್ನು ಮೊದಲಿಗಿಂತ ಇಮ್ಮಡಿಯಾಗಿಸಿದರು.


ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I ಆಯಿತೆನಗೆ ಆನಂದ, ಜನರೆನ್ನ ಕರೆದಾಗ II


ಕಣ್ಣೆತ್ತಿ ನಾ ನೋಡುವೆ ಪರ್ವತದತ್ತ I ಕೇಳುವೆ : “ನನಗೆ ಒತ್ತಾಸೆ ಎತ್ತಣಿಂದ?” II


ಶಿಷ್ಯರು ಇನ್ನೂ ನಂಬದೆ, ಆನಂದಾಶ್ಚರ್ಯಭರಿತರಾಗಿದ್ದರು. ಆಗ ಯೇಸು, “ನಿಮ್ಮಲ್ಲಿ ತಿನ್ನಲು ಏನಾದರೂ ಇದೆಯೇ?’ ಎಂದು ಕೇಳಿದರು.


ನಾನು ಕರೆದಾಗ ಓಗೊಟ್ಟಿದ್ದರೂ ನನ್ನ ವಿಜ್ಞಾಪನೆಯನ್ನು ಆಲಿಸುವನೆಂದು ನಂಬುತ್ತಿರಲಿಲ್ಲ.


ಪ್ರೇಷಿತರಾದರೋ ಇದೆಲ್ಲ ಕಟ್ಟುಕತೆಯೆಂದು ಭಾವಿಸಿ ನಂಬದೆಹೋದರು.


ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ ಅವರು ಅದನ್ನು ನಂಬಲೇ ಇಲ್ಲ.


ಆಗ, ನಿಮ್ಮ ದೇವರಾದ ಸರ್ವೇಶ್ವರ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ನಿಮ್ಮನ್ನು ಚದುರಿಸಿದ ಎಲ್ಲ ದೇಶಗಳಿಂದ ಮತ್ತೆ ಕೂಡಿಸುವರು.


ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ಪ್ರಭು ತನ್ನ ಪ್ರಜೆಗೆ ಮರಳಿ ಸಿರಿಸಂಪತ್ತ I ಸಿಗಲಿ ಯಕೋಬ - ಇಸ್ರಯೇಲ ಜನತೆಗೆ ಹರ್ಷಾನಂದ II


ಮನ್ನಿಸಿದೆ ನಿನ್ನ ಪ್ರಜೆಯ ದ್ರೋಹವನು I ಕ್ಷಮಿಸಿದೆ ನೀ ಅವರ ಪಾಪಗಳೆಲ್ಲವನು II


ಹೌದು, ನಾನು ನಿಮಗೆ ದೊರೆಯುವೆನು. ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಿಮ್ಮನ್ನು ಅಟ್ಟಲಾಗಿದ್ದ ಸಮಸ್ತ ದೇಶಗಳಿಂದಲೂ ಸಕಲ ರಾಷ್ಟ್ರಗಳ ಮಧ್ಯೆಯಿಂದಲೂ ಒಟ್ಟುಗೂಡಿಸಿ, ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.’


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು