ಕೀರ್ತನೆಗಳು 126:2 - ಕನ್ನಡ ಸತ್ಯವೇದವು C.L. Bible (BSI)2 ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ I “ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ” I ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ನಮ್ಮ ಬಾಯಿ ಬಲು ನಗೆಯಿಂದಲೂ ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು - ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆಂದು ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು. “ಯೆಹೋವನು ಇಸ್ರೇಲರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ಅನ್ಯ ಜನಾಂಗಗಳು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ನಮ್ಮ ಬಾಯಿ ನಗೆಯಿಂದಲೂ, ನಮ್ಮ ಬಾಯಿ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಜನಾಂಗಗಳು, “ಯೆಹೋವ ದೇವರು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |