Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 128:5 - ಕನ್ನಡ ಸತ್ಯವೇದವು C.L. Bible (BSI)

5 ಸಿಯೋನಿನಲ್ಲಿರುವ ಪ್ರಭು ನಿನ್ನನು ಆಶೀರ್ವದಿಸಲಿ I ಜೆರುಸಲೇಮಿನ ಏಳ್ಗೆಯನು ಕಾಣು ಇಡೀ ಜೀವಮಾನದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇವಿುನ ಸೌಭಾಗ್ಯವನ್ನು ನೋಡುವವನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ನಿನ್ನನ್ನು ಚೀಯೋನಿನಿಂದ ಆಶೀರ್ವದಿಸಲಿ. ನಿನ್ನ ಜೀವಮಾನವೆಲ್ಲಾ ನೀನು ಜೆರುಸಲೇಮಿನಲ್ಲಿ ಆಶೀರ್ವಾದಗಳನ್ನು ಅನುಭವಿಸುವಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ನಿನ್ನನ್ನು ಚೀಯೋನಿನೊಳಗಿಂದ ನಿನ್ನ ಜೀವಮಾನವೆಲ್ಲಾ ಆಶೀರ್ವದಿಸಲಿ; ನೀನು ಯೆರೂಸಲೇಮಿನ ಸಮೃದ್ಧಿಯನ್ನು ಕಾಣುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 128:5
9 ತಿಳಿವುಗಳ ಹೋಲಿಕೆ  

ಹರಸಲಿ ಸಿಯೋನಿನಿಂದ ನಿಮ್ಮನು I ಭೂಮ್ಯಾಕಾಶಗಳ ಸೃಜಿಸಿದಾತನು II


ನೆರವು ನೀಡಲಾತ ಪವಿತ್ರಾಲಯದಿಂದ I ನಿನಗೊತ್ತಾಸೆ ಬರಲಿ, ಸಿಯೋನ್ ಶಿಖರದಿಂದ II


ಪ್ರಭುವಿನ ನಾಮದಲಿ ಬರುವವನಿಗೆ ಜಯಮಂಗಳ I ಪ್ರಭುವಿನ ಮಂದಿರದಲ್ಲಿಹ ನಮ್ಮಿಂದ ಶುಭಮಂಗಳ II


ನಮ್ಮ ಹಬ್ಬ ಆಚರಣೆಗಳ ನಗರವಾದ ಸಿಯೋನನ್ನು ದೃಷ್ಟಿಸಿನೋಡಿ. ಆ ಜೆರುಸಲೇಮನ್ನು ಕಣ್ಣಿಟ್ಟು ನೋಡಿ. ಅದು ನೆಮ್ಮದಿಯ ನಿವಾಸವಾಗಿ, ಕೀಳಲಾಗದ, ಕೆಡವಲಾಗದ ದೃಢವಾದ ಗುಡಾರದಂತೆ ನಿಂತಿರುವುದನ್ನು ನೀವು ಕಣ್ಣಾರೆ ಕಾಣುವಿರಿ.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ I “ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ II


ಜೆರುಸಲೇಮಿನಲ್ಲಿ ವಾಸಿಸುವ ಪ್ರಭು ಘನಹೊಂದಲಿ I ಆತನ ಕೀರ್ತಿ ಸಿಯೋನಿನಿಂದ ಹಬ್ಬಿಹರಡಲಿ I ಅಲ್ಲೆಲೂಯ! II


ನೆನಸಿಕೊಳ್ಳಲಾತ ನೀನರ್ಪಿಸಿದ ಕಾಣಿಕೆಗಳನು I ಒಲಿದು ಸ್ವೀಕರಿಸಲಿ, ನೀನಿತ್ತಾ ಯಜ್ಞಬಲಿಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು