Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 130:7 - ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲೇ, ನಂಬಿಕೊಂಡಿರು ಪ್ರಭುವನೆ I ಆತನಲ್ಲಿದೆ ಕರುಣೆ, ಪೂರ್ಣವಿಮೋಚನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲೇ, ಯೆಹೋವನನ್ನು ಮುಂಗಾದಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ. ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇಸ್ರಾಯೇಲು ಯೆಹೋವ ದೇವರಲ್ಲಿ ನಿರೀಕ್ಷಿಸಲಿ, ಏಕೆಂದರೆ ಯೆಹೋವ ದೇವರ ಬಳಿಯಲ್ಲಿ ಒಂಡಬಡಿಕೆಯ ಪ್ರೀತಿ ಇರುತ್ತದೆ, ಸಂಪೂರ್ಣ ವಿಮೋಚನೆಯೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 130:7
18 ತಿಳಿವುಗಳ ಹೋಲಿಕೆ  

ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ಇಸ್ರಯೇಲೆ, ಪ್ರಭುವಿನಲಿ ನಂಬಿಕೆಯಿಂದಿರು I ಇಂದಿಗೂ ಎಂದೆಂದಿಗೂ ಭರವಸೆಯಿಂದಿರು II


ನಾವು ಜೀವೋದ್ಧಾರ ಹೊಂದಿದ್ದರೂ ಇನ್ನೂ ನಿರೀಕ್ಷಿಸುವವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಸ್ವಾಮಿ ದೇವಾ, ನೀನೇ ನನ್ನ ಭರವಸೆ I ಬಾಲ್ಯದಿಂದಲೂ ನೀನೇ ನನ್ನ ನಂಬಿಕೆ II


ಆ ದೃಢ ನಂಬಿಕೆಯನ್ನು ಕಳೆದುಕೊಳ್ಳಬೇಡಿ; ಅದರ ಪ್ರತಿಫಲ ಮಹತ್ತಾದುದು.


ದೀನರೂ ನಮ್ರರೂ ಆದ ಜನರನ್ನು ನಿನ್ನಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿಯಿಂದಿರುವರು.


ಹಮ್ಮಿಲ್ಲ ಪ್ರಭು, ನನ್ನೆದೆಯೊಳು I ನನಗಿಲ್ಲ ಸೊಕ್ಕಿನ ಕಣ್ಣುಗಳು II ಶಕ್ತಿಮೀರಿದ ಕಾರ್ಯಕೆ ನಾ ಕೈ ಹಾಕಿಲ್ಲ I ಅಸಾಧ್ಯವಾದುದನು ನಾ ಕೈಗೊಂಡಿಲ್ಲ II


ಪಾಪವನು ಕ್ಷಮಿಸುವವನು ನೀನು I ಎಂತಲೆ ಭಯಭಕ್ತಿಗೆ ಪಾತ್ರನು II


ಇದನ್ನು ಕೇಳಿ ಯಜಮಾನನಿಗೆ ರೋಷಬಂದಿತು. ಅವನು ಸೇವಕನಿಗೆ, ‘ಪಟ್ಟಣದ ಹಾದಿಬೀದಿಗಳಿಗೂ ಸಂದುಗೊಂದುಗಳಿಗೂ ಹೋಗಿ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆದುಕೊಂಡು ಬಾ,’ ಎಂದು ಆಜ್ಞೆಮಾಡಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು