Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 132:10 - ಕನ್ನಡ ಸತ್ಯವೇದವು C.L. Bible (BSI)

10 ನಿನ್ನ ದಾಸ ದಾವೀದನ ಪ್ರಯುಕ್ತ I ತಳ್ಳಲ್ಪಡದಿರಲಿ ನಿನ್ನಾ ಅಭಿಷಿಕ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; ನೀನು ಅಭಿಷೇಕಿಸಿದವನನ್ನು ತಳ್ಳಿಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; ನಿನ್ನ ಅಭಿಷಿಕ್ತನನ್ನು ತಳ್ಳಿಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನ್ನ ಸೇವಕನಾದ ದಾವೀದನಿಗೆ ನೀನು ವಾಗ್ದಾನ ಮಾಡಿರುವೆ. ನೀನು ಅಭಿಷೇಕಿಸಿರುವ ರಾಜನನ್ನು ತಿರಸ್ಕರಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ಸೇವಕನಾದ ದಾವೀದನ ನಿಮಿತ್ತ, ನಿಮ್ಮ ಅಭಿಷಿಕ್ತನನ್ನು ತಿರಸ್ಕರಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 132:10
11 ತಿಳಿವುಗಳ ಹೋಲಿಕೆ  

ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ನಿನ್ನ ಮಂದಿರದಲಿ ಕಳೆದ ದಿನವೊಂದು I ತಿಳಿವೆನು ಸಾವಿರ ದಿನಕೂ ಮೇಲೆಂದು II


ದೇವರಾದ ಸರ್ವೇಶ್ವರಾ, ನಿಮ್ಮಿಂದ ಅಭಿಷೇಕ ಆದವನನ್ನು ತಳ್ಳಿಬಿಡಬೇಡಿ. ನಿಮ್ಮ ದಾಸ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೊಳ್ಳಿ.”


ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು,’ ಎಂದಿದ್ದಾರೆ".


ಆದರೂ ನಾನು ಸೊಲೊಮೋನನಿಂದ ಸಾಮ್ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ; ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ ನಾನು ಆರಿಸಿಕೊಂಡ ದಾಸನೂ ಆದ ದಾವೀದನ ನಿಮಿತ್ತ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.


ಆದರೂ ಸರ್ವೇಶ್ವರ ಜುದೇಯದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನನ್ನು ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸ ದಾವೀದನಿಗೆ ಮಾಡಿದ ಪ್ರಮಾಣವನ್ನು ಸ್ಮರಿಸಿ ಅದನ್ನು ಉಳಿಸಿದರು.


ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II


ನೀನೇ ಅರಸುಗಳಿಗೆ ಜಯಪ್ರದನು I ದಾಸ ದಾವೀದನನು ಬಿಡಿಸಿದವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು