Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 133:1 - ಕನ್ನಡ ಸತ್ಯವೇದವು C.L. Bible (BSI)

1 ಸೋದರರು ಒಂದಾಗಿ ಬಾಳ್ವುದು I ಅದೆಷ್ಟು ಚೆನ್ನ, ಅದೆಷ್ಟು ರಮ್ಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಹಾ, ಸಹೋದರರು ಒಂದಾಗಿರುವದು ಎಷ್ಟೋ ಒಳ್ಳೇದು, ಎಷ್ಟೋ ರಮ್ಯವಾದದ್ದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಹೋದರರು ಒಂದಾಗಿ ಬಾಳುವುದು ಎಷ್ಟೋ ಒಳ್ಳೆಯದು! ಎಷ್ಟೋ ರಮ್ಯವಾದದ್ದು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 133:1
20 ತಿಳಿವುಗಳ ಹೋಲಿಕೆ  

ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.


ನಿಮ್ಮ ಈ ಪರಸ್ಪರ ಪ್ರೀತಿಯನ್ನು ಕಂಡು ನೀವು ನನ್ನ ಶಿಷ್ಯರೆಂದು ಜನರೆಲ್ಲರೂ ಅರಿತುಕೊಳ್ಳುವರು.


ಸೋದರ ಪ್ರೀತಿಯಲ್ಲಿ ನೆಲೆಯಾಗಿ ನಿಲ್ಲಿರಿ.


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ಆದುದರಿಂದ ಅಬ್ರಾಮನು ಲೋಟನಿಗೆ ಹೀಗೆಂದನು: “ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು. ನಾವು ಬಳಗದವರು.


ತನ್ನ ಅಣ್ಣತಮ್ಮಂದಿರಿಗೆ, “ದಾರಿಯಲ್ಲಿ ಜಗಳವಾಡಬೇಡಿ” ಎಂದು ಬುದ್ಧಿ ಹೇಳಿ, ಅವರನ್ನು ಬೀಳ್ಕೊಟ್ಟನು. ಅವರು ಹೊರಟುಹೋದರು.


ಬಾಳುವುವು ತೋಳಕುರಿಮರಿಗಳು ಒಂದಿಗೆ ಮಲಗುವುವು ಮೇಕೆಚಿರತೆಗಳು ಜೊತೆಗೆ ಮೊಲೆಯುಣ್ಣುವುವು ಕರುಕೇಸರಿಗಳು ಒಟ್ಟಿಗೆ ನಡೆಸುವುದವುಗಳನು ಚಿಕ್ಕಮಗು ಮೇಯಿಸುವುದಕೆ.


ಹಮ್ಮಿಲ್ಲ ಪ್ರಭು, ನನ್ನೆದೆಯೊಳು I ನನಗಿಲ್ಲ ಸೊಕ್ಕಿನ ಕಣ್ಣುಗಳು II ಶಕ್ತಿಮೀರಿದ ಕಾರ್ಯಕೆ ನಾ ಕೈ ಹಾಕಿಲ್ಲ I ಅಸಾಧ್ಯವಾದುದನು ನಾ ಕೈಗೊಂಡಿಲ್ಲ II


ತೊಲಗುವುದು ಎಫ್ರಯಿಮಿನ ಹೊಟ್ಟೆಕಿಚ್ಚು, ನಿರ್ಮೂಲವಾಗುವುದು ಜುದೇಯದ ವೈರಿಗಳ ಒಳಸಂಚು. ಎಫ್ರಯಿಮ್, ಜುದೇಯವನ್ನು ಮತ್ಸರಿಸದು; ಜುದೇಯ, ಎಫ್ರಯಿಮನ್ನು ವಿರೋಧಿಸದು.


ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I ಆಯಿತೆನಗೆ ಆನಂದ, ಜನರೆನ್ನ ಕರೆದಾಗ II


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು? I ಇಸ್ರಯೇಲರೇ ಹೇಳಲಿ ಆ ದುರ್ಗತಿಯನ್ನು ಕುರಿತು II


ಒಂದು ಕುಟುಂಬದ ಸದಸ್ಯರು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ಕುಟುಂಬ ಬಾಳದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು