Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 133:3 - ಕನ್ನಡ ಸತ್ಯವೇದವು C.L. Bible (BSI)

3 ರಮ್ಯ, ಹೆರ್ಮೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆ I ಸಿಯೋನ್ ಪರ್ವತದ ಮೇಲೆ ಬೀಳುವ ಇಬ್ಬನಿಯಂತೆ II ಆಶೀರ್ವಾದವು, ಅಮರ ಜೀವವು I ಅಲ್ಲೆ ಇರಬೇಕೆಂದು ಆಜ್ಞಾಪಿಸಿಹನು ಪ್ರಭುವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೆರ್ಮೋನ್‍ಪರ್ವತದಲ್ಲಿ ಹುಟ್ಟಿ ಚೀಯೋನ್‍ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ ಜೀವವೂ ಸದಾಕಾಲ ಇರಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು. ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆ ಒಂದಾಗಿರುವಿಕೆಯು ಹೆರ್ಮೋನ್ ಪರ್ವತದಿಂದ ಪ್ರಾರಂಭವಾಗಿ ಚೀಯೋನ್ ಪರ್ವತಗಳ ಮೇಲೆ ಬೀಳುವ ಮಂಜಿನ ಹಾಗೆಯೂ ಇದೆ. ಏಕೆಂದರೆ ಎಲ್ಲಿ ಒಂದಾಗಿರುವಿಕೆಯು ಇದೆಯೋ ಅಲ್ಲಿ ಯೆಹೋವ ದೇವರು ಆಶೀರ್ವಾದವನ್ನೂ, ಯುಗಯುಗಾಂತರಕ್ಕೂ ಜೀವವನ್ನೂ ಅನುಗ್ರಹಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 133:3
22 ತಿಳಿವುಗಳ ಹೋಲಿಕೆ  

“ನಿಮ್ಮ ಕಣಜಗಳು ಯಾವಾಗಲೂ ತುಂಬಿ ಇರುವಂತೆ ಹಾಗು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶುಭವನ್ನು ಅನುಗ್ರಹಿಸುವರು. ಅವರು ನಿಮಗೆ ಕೊಡುವ ನಾಡಿನಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವರು.


ಹಗಲಲಿ ಪ್ರೀತಿಯನುಗ್ರಹಿಸಲಿ ದೇವನೆನಗೆ I ಇರುಳಲಿ ಎನ್ನಯ ಬಾಯಲ್ಲಿರಲಿ ಆತನ ಗೀತೆ I ಪ್ರಾರ್ಥನೆ ಸಲ್ಲಲಿ ಎನ್ನ ಜೀವಾಧಾರ ದೇವಗೆ II


ಆರನೆಯ ವರ್ಷದ ಬೆಳೆ ನನ್ನ ಪೂರ್ಣಾನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.


ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮೊದಲ್ಗೊಂಡು ಹೆರ್ಮೋನ್ ಎಂಬ ಸೀಯೋನ್ ಪರ್ವತದವರೆಗೂ


ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಆ ಜೀವ ಅವರ ಪುತ್ರನಲ್ಲಿದೆ ಎಂಬುದೇ ಈ ಸಾಕ್ಷ್ಯ.


ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.


ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು.


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ.


ಹಾಗೆ ಕೇಳಿದವರೆಲ್ಲಾ ಸಮಾಧಿಯನ್ನು ಬಿಟ್ಟು ಎದ್ದುಬರುವರು; ಸಜ್ಜನರು ಸಜ್ಜೀವಕ್ಕಾಗಿ ಪುನರುತ್ಥಾನರಾಗುವರು, ದುರ್ಜನರು ದಂಡನಾ ತೀರ್ಪಿಗಾಗಿ ಪುನರುತ್ಥಾನ ಆಗುವರು.


ಗಿಲ್ಯಾದ್ ನಾಡು, ಗೆಷ್ಯೂರ ಮತ್ತು ಮಾಕತೀಯರ ಪ್ರಾಂತ್ಯಗಳು, ಹೆರ್ಮೋನ್ ಬೆಟ್ಟದ ಮೇಲಿನ ಪ್ರದೇಶ


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಕ್ರಿಸ್ತಯೇಸು ನಮಗೆ ವಾಗ್ದಾನಮಾಡಿರುವ ನಿತ್ಯಜೀವ ಇದೇ.


ರಾಜನ ರೋಷ ಸಿಂಹದ ಗರ್ಜನೆಯು; ಅವನ ದಯೆ ಹುಲ್ಲಿನ ಮೇಲಣ ಇಬ್ಬನಿಯು.


ಕೋರಿದನಾತನು ಜೀವಮಾನಕಾಲವನು I ನೀನಿತ್ತೆ ಯುಗಯುಗಾಂತರದಾಯುಷ್ಯವನು II


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ನಿನ್ನ ನೆರವಿಂದೇರಿತು ಆತನ ಘನತೆ I ಶೋಭೆ, ಪ್ರಭಾವಗಳ ನೀನವನಿಗಿತ್ತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು