Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 134:2 - ಕನ್ನಡ ಸತ್ಯವೇದವು C.L. Bible (BSI)

2 ಭಜಿಸಿರಿ ಪ್ರಭುವನು ಕರಗಳನೆತ್ತಿ I ಪವಿತ್ರಾಲಯದಲಿ ಕೈಗಳನೆತ್ತಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸೇವಕರೇ, ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದ ಕಡೆಗೆ ಎತ್ತಿ ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ, ಯೆಹೋವ ದೇವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 134:2
10 ತಿಳಿವುಗಳ ಹೋಲಿಕೆ  

ನಿನ್ನ ಪರಿಶುದ್ಧಾಲಯದತ್ತ ಕೈಯೆತ್ತಿ ಮುಗಿವೆನು I ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು II


ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.


ನಿನ್ನ ಸ್ತುತಿಸುವೆ ಜೀವಮಾನ ಪರಿಯಂತ I ಕೈ ಮುಗಿವೆ ನಿನ್ನ ನಾಮದ ಸ್ಮರಣಾರ್ಥ II


ಸಮರ್ಪಕವಾಗಲಿ ನನ್ನ ಪ್ರಾರ್ಥನೆ ಧೂಪಾರತಿಯಂತೆ I ಕೈಮುಗಿದು ಮಾಡುವ ವಂದನೆ ಸಂಧ್ಯಾಬಲಿಯರ್ಪಣೆಯಂತೆ II


ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕರಗಳನ್ನೂ ಹೃನ್ಮನಗಳನ್ನೂ ಎತ್ತೋಣ;


ರಾತ್ರಿಯ ಒಂದೊಂದು ಜಾವದಲ್ಲೂ ಎದ್ದು ಗೋಳಾಡಿರಿ. ನಿಮ್ಮ ಹೃದಯ ಕರಗಿ, ನೀರಾಗಿ ಸ್ವಾಮಿಯ ಮುಂದೆ ಹರಿಯಲಿ. ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈ ಮುಗಿದು ಪ್ರಾರ್ಥನೆಮಾಡಿ. ಹಸಿವಿನಿಂದ ಅವು ಮೂರ್ಛೆಹೋಗಿವೆ, ಬೀದಿಯ ಮೂಲೆಮೂಲೆಗಳಲ್ಲಿ.


ನಿನ್ನ ಮಂದಿರದಲಿ ನನಗಾದ ದರ್ಶನದಲಿ I ನಿನ್ನ ಶಕ್ತಿ ಪ್ರತಿಭೆಯನು ಕಂಡಿರುವೆನಲ್ಲಿ II


ನಿರ್ದೋಷಿ ನಾನೆಂದು ನೀರಿನಲ್ಲಿ ಕೈತೊಳೆವೆನಯ್ಯಾ I ಪ್ರಭು, ನಿನ್ನ ಬಲಿಪೀಠದ ಪ್ರದಕ್ಷಿಣೆ ಮಾಡುವೆನಯ್ಯಾ II


ಎಜ್ರನು ಪರಾತ್ಪರ ದೇವರಾದ ಸರ್ವೇಶ್ವರನನ್ನು ಸ್ತುತಿಸಿದಾಗ ಸರ್ವಜನರೂ ತಮ್ಮ ಕೈಗಳನ್ನೆತ್ತಿ ‘ಆಮೆನ್, ಆಮೆನ್’ ಎಂದು ಹೇಳಿ ನೆಲದಮಟ್ಟಿಗೂ ತಲೆಬಾಗಿ ಸರ್ವೇಶ್ವರನನ್ನು ಆರಾಧಿಸಿದರು.


ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ I ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು