Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:13 - ಕನ್ನಡ ಸತ್ಯವೇದವು C.L. Bible (BSI)

13 ನಿನ್ನ ನಾಮ ಪ್ರಭು ಶಾಶ್ವತ I ನಿನ್ನ ಸ್ಮರಣೆಯೂ ಅನವರತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲ್ಪಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನೇ, ನೀನು ಸದಾಕಾಲ ಪ್ರಸಿದ್ಧನಾಗಿರುವೆ! ಯೆಹೋವನೇ, ಜನರು ನಿನ್ನನ್ನು ಸದಾಕಾಲ ನೆನಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರೇ, ನಿಮ್ಮ ನಾಮವೂ, ನಿಮ್ಮ ಪ್ರಭಾವವೂ ತಲತಲಾಂತರಕ್ಕೂ ಸ್ಮರಣೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:13
12 ತಿಳಿವುಗಳ ಹೋಲಿಕೆ  

ನೀನಾದರೋ ಪ್ರಭು, ಸದಾ ಸಿಂಹಾಸನಾರೂಢ I ಮಾಳ್ಪರು ತಲತಲಾಂತರಕು ನಿನ್ನ ನಾಮಸ್ಮರಣ II


ದೇವರು ಮೋಶೆಗೆ ಮತ್ತೆ ಇಂತೆಂದರು: “ನೀನು ಇಸ್ರಯೇಲರಿಗೆ, ‘ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ’ ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೆ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು.


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ಪ್ರಭು, ಓ ಎಮ್ಮ ಪ್ರಭು, ನಿನ್ನ ನಾಮಾಮೃತ I ಬೆಳಗಿದೆ ತನ್ನ ಮಹಿಮೆಯನು ಭುವನ ಪರ್ಯಂತ II


ಆದುದರಿಂದ ಹೀಗೆಂದು ಪ್ರಾರ್ಥನೆಮಾಡಿ:


ಅವರೇ ಸರ್ವಶಕ್ತನಾದ ದೇವರು; ಸರ್ವೇಶ್ವರ ಎಂಬುದೇ ಅವರನ್ನು ಸ್ಮರಿಸುವ ನಾಮಧೇಯ.


ಹೀಗೆ ಪ್ರಭುವಿಗಾರಾಧನೆ ಸಲ್ಲಿಸಲು I ಜನಾಂಗಗಳೂ ರಾಜ್ಯಗಳೂ ಕೂಡಿರಲು


ಪ್ರಭು, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು I ಸಾರುವೆನು ತಲತಲಾಂತರಕು ನಿನ್ನ ಸತ್ಯತೆಯನು II


ಪ್ರಭು, ಓ ನಮ್ಮ ಪ್ರಭು, ಎನಿತು ಮಹಿಮಾನ್ವಿತ I ಹರಡಿವೆ ನಿನ್ನ ಸಿರಿನಾಮ ಜಗದಾದ್ಯಂತ I ಬೆಳಗಿದೆ ನಿನ್ನ ವೈಭವ ಗಗನಾದ್ಯಂತ II


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಎದ್ದು ಸಿಯೋನಿಗೆ ತೋರು ಸೌಜನ್ಯತೆ I ಅದಕ್ಕೆ ದಯೆತೋರಿಸುವ ಸಮಯವಿದೇ I ನಿಯಮಿತ ಕಾಲವಿದೋ ಬಂದುಬಿಟ್ಟಿದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು