Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:17 - ಕನ್ನಡ ಸತ್ಯವೇದವು C.L. Bible (BSI)

17 ಕಿವಿಯಿದ್ದರೂ ಅವು ಕೇಳುವುದಿಲ್ಲ I ಅವುಗಳ ಬಾಯಲ್ಲಿ ಉಸಿರೇ ಇಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕಿವಿಯಿದ್ದರೂ ಕೇಳುವುದಿಲ್ಲ, ಇದಲ್ಲದೆ ಅವುಗಳ ಬಾಯಲ್ಲಿ ಶ್ವಾಸವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕಿವಿಯಿದ್ದರೂ ಕೇಳುವದಿಲ್ಲ; ಇದಲ್ಲದೆ ಅವುಗಳ ಬಾಯಲ್ಲಿ ಶ್ವಾಸವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಪ್ರತಿಮೆಗಳಿಗೆ ಕಿವಿಗಳಿದ್ದರೂ ಕೇಳಲಾಗಲಿಲ್ಲ; ಮೂಗುಗಳಿದ್ದರೂ ಮೂಸಿನೋಡಲಾಗಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕಿವಿಗಳಿವೆ, ಕೇಳಿಸಿಕೊಳ್ಳುವುದಿಲ್ಲ; ಅವುಗಳ ಬಾಯಲ್ಲಿ ಶ್ವಾಸ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:17
4 ತಿಳಿವುಗಳ ಹೋಲಿಕೆ  

ಆಕಾಶದಲ್ಲಿ ನೀರು ಭೋರ್ಗರೆಯುವಂತೆ ಭುವಿಯ ಕಟ್ಟಕಡೆಯಿಂದ ಮೋಡಗಳು ಏರುವಂತೆ ಮಳೆಗಾಗಿ ಮಿಂಚು ಹೊಳೆಯುವಂತೆ ತಮ್ಮ ಭಂಡಾರದಿಂದ ಗಾಳಿ ಬೀಸುವಂತೆ - ಮಾಡುತ್ತದೆ ಸರ್ವೇಶ್ವರನಾ ಗರ್ಜನೆ.


ಇದರ ಮುಂದೆ ಜನರು ತಿಳುವಳಿಕೆಯಿಲ್ಲದ ಪಶುಪ್ರಾಯರು ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಪೊಳ್ಳು, ಶ್ವಾಸವಿಲ್ಲದವುಗಳು, ಅವನು ಎರಕಹೊಯ್ದ ಪುತ್ತಳಿಗಳು.


ಈಗ ಎಫ್ರಯಿಮರ ಪಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರು ಬೆಳ್ಳಿಬಂಗಾರವನ್ನು ಕರಗಿಸಿ ಇಷ್ಟಬಂದಂತೆ ಬೊಂಬೆಗಳನ್ನು ಮಾಡಿಕೊಂಡಿದ್ದಾರೆ. ಅವೆಲ್ಲವು ಶಿಲ್ಪಿಗಳ ಕೈಕೆಲಸವೇ ಹೊರತು ಮತ್ತೇನು ಅಲ್ಲ. ಇಂಥ ವಿಗ್ರಹಗಳನ್ನು ಪೂಜೆಗಾಗಿ ಪ್ರತಿಷ್ಠಾಪನೆಮಾಡುತ್ತಾರೆ. ಬುದ್ಧಿಜೀವಿಗಳಾದ ಇವರು ಬಸವನಿಗೆ ಮುದ್ದಿಡುತ್ತಾರೆ.


ಮರದ ತುಂಡಿಗೆ, ‘ಎಚ್ಚೆತ್ತುಕೊ’; ಜಡಕಲ್ಲಿಗೆ, ‘ಎದ್ದೇಳು’ ಎಂದು ಆಜ್ಞಾಪಿಸುವವನು ನಿಜಕ್ಕೂ ಬುದ್ಧಿಹೀನನು. ಬೊಂಬೆಯು ಬೋಧಿಸಬಲ್ಲದೇ? ಬೆಳ್ಳಿಬಂಗಾರವನ್ನು ಅದಕ್ಕೆ ಹೊದಿಸಿರುವುದೇನೋ ನಿಜ. ಆದರೆ ಅದಕ್ಕೆ ಉಸಿರೋ ಇಲ್ಲವೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು