Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:5 - ಕನ್ನಡ ಸತ್ಯವೇದವು C.L. Bible (BSI)

5 ಗೊತ್ತೆನಗೆ ನಮ್ಮ ಪ್ರಭು ಘನವಂತನೆಂದು I ಸಕಲ ದೇವರುಗಳಿಗಿಂತಲು ಉನ್ನತನೆಂದು I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ದೊಡ್ಡವನೆಂದೂ, ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ದೊಡ್ಡವನೆಂದೂ ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಮಹೋನ್ನತನೆಂದೂ ನಮ್ಮ ಒಡೆಯನು ಬೇರೆಲ್ಲಾ ದೇವರುಗಳಿಗಿಂತ ಮಹೋನ್ನತನೆಂದೂ ನಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ದೊಡ್ಡವರು; ನಮ್ಮ ಯೆಹೋವ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವರೆಂದು ನಾನು ತಿಳಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:5
13 ತಿಳಿವುಗಳ ಹೋಲಿಕೆ  

ಸರ್ವಾಧಿಕಾರಿ ನೀನು ಲೋಕಕ್ಕೆಲ್ಲಾ I ಮಹೋನ್ನತನು ನೀನು ದೇವರುಗಳಿಗೆಲ್ಲಾ II


ಏಕೆಂದರೆ ಪ್ರಭು ದೇವಾಧಿದೇವನು I ದೇವರುಗಳಲೆಲ್ಲ ರಾಜಾಧಿರಾಜನು II


ಸರ್ವಸ್ತುತಿಗೆ ಪಾತ್ರ, ಪ್ರಭುವು ಪರಮೋನ್ನತ I ದೇವನಗರದಲಿ ಆತನ ಪವಿತ್ರ ಪರ್ವತ II


ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ.


ಸಕಲ ದೇಶ-ಕುಲ-ಭಾಷೆಗಳವರಲ್ಲಿ ಯಾರಾದರು ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರ ವಿಷಯದಲ್ಲಿ ಅಲ್ಲಸಲ್ಲದ ಮಾತನಾಡಿದರೆ ಅಂಥವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಗುಂಡಿಯನ್ನಾಗಿಸಬೇಕೆಂದು ಆಜ್ಞೆ ವಿಧಿಸುತ್ತೇನೆ. ಹೀಗೆ ರಕ್ಷಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವೇ ಇಲ್ಲ,” ಎಂದು ಹೇಳಿದನು.


“ಇಂತಿರಲು ನನ್ನನ್ನು ಯಾರಿಗೆ ಹೋಲಿಸಬಲ್ಲಿರಿ?” ಯಾರಿಗೆ ನನ್ನನ್ನು ಸರಿಸಮಾನ ಮಾಡಬಲ್ಲಿರಿ?” ಎಂದು ಕೇಳುತ್ತಿಹರು ಪರಮಪಾವನ ಸ್ವಾಮಿ.


ಆಸೀನನಾಗಿಹನು ಆತ ಭೂಮಂಡಲಕ್ಕಿಂತ ಮೇಲೆ ಭೂನಿವಾಸಿಗಳು ಕಾಣುತಿಹರು ಆತನಿಗೆ ಮಿಡತೆಗಳಂತೆ ಹರಡಿಹನು ಆಕಾಶಮಂಡಲವನು ನವಿರು ಬಟ್ಟೆಯಂತೆ ಮೇಲೆತ್ತಿಕಟ್ಟಿಹನು ಅದನ್ನು ನಿವಾಸದ ಗುಡಾರದಂತೆ.


ಮೇಘಮಂಡಲದಲಿ ಸಮಾನನಾರು ಪ್ರಭುವಿಗೆ I ದೇವದೂತರೊಳು ಹೋಲಿಕೆ ಯಾವುದು ಆತನಿಗೆ II


ನಮ್ಮ ಪ್ರಭು ಘನವಂತ, ಪರಾಕ್ರಮಿ I ಅಪರಿಮಿತವಾದುದು ಆತನ ಜ್ಞಾನನಿಧಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು