Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:6 - ಕನ್ನಡ ಸತ್ಯವೇದವು C.L. Bible (BSI)

6 ಮಾಡುವನು ಪ್ರಭು ತನಗಿಷ್ಟ ಬಂದುದನು I ಭೂಮ್ಯಾಕಾಶ, ಸಮುದ್ರ ಸಾಗರದೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ, ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಭೂವಿುಯಲ್ಲಿಯೂ ಆಕಾಶದಲ್ಲಿಯೂ ಸಮುದ್ರಗಳಲ್ಲಿಯೂ ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರಗಳಲ್ಲಿಯೂ ಆಳವಾದ ಸಾಗರಗಳಲ್ಲಿಯೂ ತನ್ನ ಇಷ್ಟಾನುಸಾರವಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಆಕಾಶದಲ್ಲಿಯೂ, ಭೂಮಿಯಲ್ಲಿಯೂ, ಸಮುದ್ರದಲ್ಲಿಯೂ, ಎಲ್ಲಾ ಅಗಾಧಗಳಲ್ಲಿಯೂ ತಾವು ಅಪೇಕ್ಷಿಸುವುದನ್ನೆಲ್ಲಾ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:6
13 ತಿಳಿವುಗಳ ಹೋಲಿಕೆ  

ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ಪರದಲ್ಲಿಹನು ನಮ್ಮ ದೇವನು I ಗೈವನು ತನಗಿಷ್ಟ ಬಂದುದನು II


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


ಪ್ರಭುವಿನ ಯೋಜನೆ ಶಾಶ್ವತ I ಅವನ ಸಂಕಲ್ಪ ಅನವರತ II


ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II


ಉನ್ನತದಲ್ಲಿ ಹಲವು ಉಪ್ಪರಿಗೆಗಳನ್ನು ನಿರ್ಮಿಸುವವ ಆತನೆ ಭುವಿಯಲ್ಲಿ ಗುಮ್ಮಟವನ್ನು ಸ್ಥಾಪಿಸಿಕೊಂಡವನು ಆತನೆ ಸಾಗರದ ನೀರನ್ನು ಸೇದಿ ಧರೆಯ ಮೇಲೆ ಸುರಿಯುವವ ಆತನೆ ಆತನ ನಾಮಧೇಯ ಸರ್ವೇಶ್ವರಸ್ವಾಮಿ ಎಂಬುದೇ.


ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.


ಆಗ ರಾತ್ರಿಯ ಕಡೇ ಜಾವದ ಸಮಯ. ಯೇಸು ಸರೋವರದ ಮೇಲೆ ನಡೆದುಕೊಂಡೇ ಶಿಷ್ಯರ ಬಳಿಗೆ ಬಂದರು.


“ತಾವು ಎಲ್ಲಾ ಕಾರ್ಯಗಳನು ನಡೆಸಲು‍ ಶಕ್ತರೆಂದು ನಾನು ಬಲ್ಲೆ ಯಾವ ಯೋಜನೆಯು ನಿಮಗೆ ಅಸಾಧ್ಯವಿಲ್ಲವೆಂದು ನಾನು ಅರಿತಿರುವೆ.


‘ಈ ರಾಜ್ಯ ನಿನ್ನನ್ನು ಬಿಟ್ಟು ತೊಲಗಿದೆ. ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ದನಗಳಂತೆ ಹುಲ್ಲು ಮೇಯುವ ಗತಿ ನಿನ್ನದಾಗುವುದು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಆ ರಾಜ್ಯವನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದನ್ನು ನೀನು ಗ್ರಹಿಸುವುದರೊಳಗೆ ಏಳು ವರ್ಷ ಕಳೆಯುವುದು,” ಎಂದು ದೈವವಾಣಿಯಾಯಿತು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು