Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:7 - ಕನ್ನಡ ಸತ್ಯವೇದವು C.L. Bible (BSI)

7 ಏಳಮಾಡುವನು ದಿಗಂತದೊಳು ಮೋಡವನು I ಹೊಳೆಯಮಾಡುವನು ಮಳೆಗೋಸ್ಕರ ಮಿಂಚನು I ಬೀಸಮಾಡುವನು ಉಗ್ರಾಣದಿಂದ ಗಾಳಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏಳಮಾಡುವನು; ಮಿಂಚನ್ನೂ ಮಳೆಯನ್ನೂ ಬರಮಾಡುವನು; ಗಾಳಿಯನ್ನು ಬೀಸಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಭೂಮಿಯ ಎಲ್ಲಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಯನ್ನೂ ಮಿಂಚನ್ನೂ ಕಳುಹಿಸುತ್ತಾರೆ. ಗಾಳಿಯನ್ನು ತಮ್ಮ ಉಗ್ರಾಣಗಳಿಂದ ಬೀಸುವಂತೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:7
15 ತಿಳಿವುಗಳ ಹೋಲಿಕೆ  

ಆಕಾಶದಲ್ಲಿ ನೀರು ಭೋರ್ಗರೆಯುವಂತೆ ಭುವಿಯ ಕಟ್ಟಕಡೆಯಿಂದ ಮೋಡಗಳು ಏರುವಂತೆ ಮಳೆಗಾಗಿ ಮಿಂಚು ಹೊಳೆಯುವಂತೆ ತಮ್ಮ ಭಂಡಾರದಿಂದ ಗಾಳಿ ಬೀಸುವಂತೆ - ಮಾಡುತ್ತದೆ ಸರ್ವೇಶ್ವರನಾ ಗರ್ಜನೆ.


ವಸಂತಕಾಲದಲ್ಲಿ ಮಳೆಗಾಗಿ ಸರ್ವೇಶ್ವರಸ್ವಾಮಿಗೆ ಪ್ರಾರ್ಥನೆ ಮಾಡಿರಿ. ಮೋಡ ಮಿಂಚುಗಳನ್ನು ಗಾಳಿಮಳೆಯನ್ನು ಉಂಟುಮಾಡುವವರು ಅವರೇ. ಸರ್ವರಿಗೂ ಹೊಲಗದ್ದೆಗಳಲ್ಲಿ ಪೈರುಪಚ್ಚೆಗಳನ್ನು ನೀಡುವವರು ಅವರೇ.


ಆತನ ಘರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ ಭುವಿಯ ಕಟ್ಟಕಡೆಯಿಂದ ಮೋಡ ಮೇಲೇರುತ್ತದೆ ಮಳೆಗೋಸ್ಕರ ಮಿಂಚು ಹೊಳೆಯುತ್ತದೆ ಆತನ ಭಂಡಾರದಿಂದ ಗಾಳಿ ಬೀಸುತ್ತದೆ.


ಗಾಳಿ ತನಗೆ ತೋಚಿದ ಕಡೆ ಬೀಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು. ದೇವರ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬನೂ ಅದರಂತೆಯೇ,” ಎಂದು ಹೇಳಿದರು.


ಕಿಚ್ಚು, ಕಲ್ಮಳೆ, ಹಿಮ, ಹಬೆ ಇವುಗಳೆಲ್ಲವೂ I ಆತ ಹೇಳಿದಂತೆ ಕೇಳುವ ಬಿರುಗಾಳಿಯೂ, II


ಆದರೆ ಸರ್ವೇಶ್ವರ ಸಮುದ್ರದಲ್ಲಿ ಬಿರುಗಾಳಿಯೊಂದನ್ನು ಬರಮಾಡಿದರು. ಅಲೆಗಳ ಹೊಡೆತಕ್ಕೆ ಹಡಗು ನುಚ್ಚುನೂರಾಗಿ ಒಡೆದುಹೋಗುವುದರಲ್ಲಿತ್ತು. ದಿಗ್ಭ್ರಾಂತರಾದ ನಾವಿಕರು ಪ್ರಾಣರಕ್ಷಣೆಗಾಗಿ ತಮ್ಮ ದೇವದೇವತೆಗಳ ಮೊರೆ ಹೊಕ್ಕರು. ಪ್ರಾಣಾಪಾಯದಿಂದ ಪಾರಾಗಲು ತಮ್ಮಲ್ಲಿದ್ದ ಸರಕುಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆದರು.


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ಬಿರುಗಾಳಿಯೆದ್ದಿತು ಆತನಾಜ್ಞೆಯೊಂದಕ್ಕೆ I ತರಂಗಗಳು ಭೊರ್ಗರೆದವು ಅದರೊಂದಿಗೆ II


ಮಳೆಗರೆಯುತ್ತಾನೆ ಭೂಮಿಯ ಮೇಲೆ ನೀರೊದಗಿಸುತ್ತಾನೆ ಹೊಲಗದ್ದೆಗಳಿಗೆ.


ಅನೇಕ ದಿವಸಗಳಾದನಂತರ ಎಲೀಯನಿಗೆ ಸರ್ವೇಶ್ವರನ ವಾಣಿ ಉಂಟಾಯಿತು. ಬರಗಾಲದ ಮೂರನೆಯವರ್ಷದಲ್ಲಿ ಸರ್ವೇಶ್ವರ ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು; ನಾನು ನಾಡಿಗೆ ಮಳೆಕೊಡುತ್ತೇನೆ,” ಎಂದರು.


ಆಕಾಶದಲೆಬ್ಬಿಸಿದನು ಮೂಡಣ ಗಾಳಿಯನು I ಒಲುಮೆಯಿಂದ ಹೊರಡಿಸಿದನು ತೆಂಕಣ ಗಾಳಿಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು