Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:8 - ಕನ್ನಡ ಸತ್ಯವೇದವು C.L. Bible (BSI)

8 ಕೊಂದನು ಚೊಚ್ಚಲುಗಳನು ಈಜಿಪ್ಟಿನೊಳು I ಮನುಷ್ಯರೊಳು, ಪಶುಪ್ರಾಣಿಗಳೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ, ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರು ಈಜಿಪ್ಟ್ ಜನರನ್ನು ಮೊದಲುಗೊಂಡು ಪಶುಗಳವರೆಗೂ ಚೊಚ್ಚಲುಗಳನ್ನೆಲ್ಲಾ ದಂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:8
7 ತಿಳಿವುಗಳ ಹೋಲಿಕೆ  

ಸಂಹರಿಸಿದನು ಈಜಿಪ್ಟಿನ ಚೊಚ್ಚಲ ಮಕ್ಕಳನು I ಹಾಮನ ಮನೆತನದ ಮೊತ್ತಮೊದಲ ಸಂತಾನವನು II


ಆ ರಾತ್ರಿ ನಾನು ಈಜಿಪ್ಟ್ ದೇಶದ ನಡುವೆ ಹಾದುಹೋಗುವೆನು; ಮನುಷ್ಯರಾಗಲಿ, ಪ್ರಾಣಿಗಳಾಗಲಿ ಚೊಚ್ಚಲಾದುದೆಲ್ಲವನ್ನು ಸಂಹರಿಸುವೆನು. ಈಜಿಪ್ಟ್ ದೇಶದ ಸಮಸ್ತ ದೇವತೆಗಳನ್ನೂ ದಂಡಿಸುವೆನು. ನಾನೇ ಸರ್ವೇಶ್ವರ!


ಕೊಂದನು ನಾಡಿನ ಜ್ಯೇಷ್ಠರೆಲ್ಲರನು I ಗಂಡಸುತನದಾ ಪ್ರಥಮ ಫಲಗಳನು II


ಈಜಿಪ್ಟಿನ ಚೊಚ್ಚಲುಗಳನು ಸಂಹರಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಫರೋಹನು ಹಟಹಿಡಿದು ನಮ್ಮನ್ನು ಹೋಗಗೊಡಿಸದೆ ಇದ್ದಾಗ ಸರ್ವೇಶ್ವರ ಈಜಿಪ್ಟಿನಲ್ಲಿದ್ದ ಚೊಚ್ಚಲು ಮಕ್ಕಳನ್ನು ಹಾಗು ಪಶುಪ್ರಾಣಿಗಳ ಚೊಚ್ಚಲು ಮರಿಗಳನ್ನೂ ಅಂತೂ ಈ ದೇಶದಲ್ಲಿ ಚೊಚ್ಚಲಾಗಿದ್ದುದೆಲ್ಲವನ್ನು ಸಂಹಾರ ಮಾಡಿದರು. ಆದಕಾರಣ ಗಂಡಾದ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಸರ್ವೇಶ್ವರನಿಗೆ ಸಮರ್ಪಿಸುತ್ತೇವೆ. ಮನುಷ್ಯರಿಗೆ ಹುಟ್ಟಿದ ಪ್ರಥಮ ಗರ್ಭಫಲವನ್ನಾದರೋ ಬದಲು ಕೊಟ್ಟು ಬಿಡಿಸಿಕೊಳ್ಳುತ್ತೇವೆ,” ಎಂದು ಹೇಳಬೇಕು.


ಅವರಿಂದ ಗುಲಾಮಗಿರಿಯನ್ನು ಪಡೆಯುವ ಜನಾಂಗಕ್ಕೆ ನಾನು ದಂಡನೆ ವಿಧಿಸುವೆನು. ಅನಂತರ ಅವರು ಅಲ್ಲಿಂದ ಹೊರಬಂದು ನನ್ನನ್ನು ಈ ಸ್ಥಳದಲ್ಲೇ ಆರಾಧಿಸುವರು,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು