Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:11 - ಕನ್ನಡ ಸತ್ಯವೇದವು C.L. Bible (BSI)

11 ಇಸ್ರಯೇಲರನು ಅಲ್ಲಿಂದ ಹೊರತಂದವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಸ್ರಾಯೇಲರನ್ನು ಅವರ ಮಧ್ಯದಿಂದ ಹೊರಗೆ ತಂದನು, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಸ್ರಾಯೇಲ್ಯರನ್ನು ಅವರ ಮಧ್ಯದಿಂದ ಹೊರತಂದನು; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆತನು ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದನು. ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಸ್ರಾಯೇಲರನ್ನು ಈಜಪ್ಟಿನಿಂದ ಹೊರಗೆ ಬರಮಾಡಿದವರನ್ನು ಕೊಂಡಾಡಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:11
11 ತಿಳಿವುಗಳ ಹೋಲಿಕೆ  

ಆ ದಿನ ಸರ್ವೇಶ್ವರ ಇಸ್ರಯೇಲರನ್ನು ಪಡೆಪಡೆಯಾಗಿ ಈಜಿಪ್ಟ್ ದೇಶದಿಂದ ಹೊರಗೆ ಕರೆದೊಯ್ದರು.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಹೊರತಂದನು ಇಸ್ರಯೇಲರನು ಬೆಳ್ಳಿಬಂಗಾರ ಸಹಿತ I ಅವರಾ ಗೋತ್ರದೊಳಿರಲಿಲ್ಲ ಯಾರೊಬ್ಬನೂ ನಿಶ್ಯಕ್ತ II


ತನ್ನ ಜನರನ್ನೋ ಹೊರತಂದನು ಕುರಿಮಂದೆಯಂತೆ I ಅಡವಿಯೊಳು ಪರಿಪಾಲಿಸಿದನು ಕುರಿಗಾಹಿಯಂತೆ II


ಫರೋಹನು ಇಸ್ರಯೇಲರಿಗೆ ಹೋಗಲು ಅಪ್ಪಣೆಕೊಟ್ಟಾಗ ದೇವರು ಅವರನ್ನು ಹತ್ತಿರವಾಗಿದ್ದ ಫಿಲಿಷ್ಟಿಯರ ಪ್ರಾಂತ್ಯದ ಮಾರ್ಗವಾಗಿ ಕರೆದುತರಲಿಲ್ಲ. ಬದಲಿಗೆ ಕೆಂಪು ಸಮುದ್ರದ ಬಳಿಯಿರುವ ಮರುಳುಗಾಡಿನ ಬಳಸು ದಾರಿಯಲ್ಲೇ ನಡೆಸಿಕೊಂಡು ಬಂದರು. ಏಕೆಂದರೆ, “ಯುದ್ಧ ತೊಡಗಿದರೆ ಇವರು ಎದೆಗೆಟ್ಟು ಈಜಿಪ್ಟಿಗೆ ಹಿಂದಿರುಗಿಯಾರು” ಎಂದುಕೊಂಡರು ದೇವರು.


ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟುಬಂದವು.


ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ಬರಮಾಡಲು ಜಾಗರೂಕರಾಗಿದ್ದದ್ದು ಆ ರಾತ್ರಿಯೇ. ಆದುದರಿಂದಲೆ ಇಸ್ರಯೇಲರೆಲ್ಲರು ತಲತಲಾಂತರಕ್ಕೂ ಸರ್ವೇಶ್ವರನ ಗೌರವಾರ್ಥ ಈ ರಾತ್ರಿಯಲ್ಲೇ ಜಾಗರಣೆಯನ್ನು ಅನುಸರಿಸಬೇಕು.


ಇದಕ್ಕೆ ಈ ಆಚರಣೆಯು ನಮ್ಮ ಕೈಗೆ ಕಟ್ಟಿದ ಕಂಕಣದಂತೆ, ಹಣೆಗೆ ಕಟ್ಟಿದ ಜ್ಞಾಪಕ ಪಟ್ಟಿಯಂತೆ ಇರುತ್ತದೆ.


ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಈ ಸಂದೇಶವನ್ನು ನೀವು ನೆನಪಿನಲ್ಲಿಡಬೇಕು. ಇದಕ್ಕೆ ಈ ಪದ್ಧತಿಯು ನಿಮ್ಮ ಕೈಗೆ ಕಟ್ಟಿದ ಕಂಕಣದಂತಿರುತ್ತದೆ, ಹಣೆಗೆ ಕಟ್ಟಿದ ಜ್ಞಾಪಕಪಟ್ಟಿಯಂತಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು