Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:5 - ಕನ್ನಡ ಸತ್ಯವೇದವು C.L. Bible (BSI)

5 ಜ್ಞಾನದಿಂದ ಜಗವನು ನಿರ್ಮಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜ್ಞಾನದಿಂದ ಆಕಾಶವನ್ನು ನಿರ್ಮಿಸಿದ ಆತನೊಬ್ಬನನ್ನೇ ಸ್ತುತಿಸಿರಿ! ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತಮ್ಮ ಜ್ಞಾನದಿಂದ ಪರಲೋಕಗಳನ್ನು ನಿರ್ಮಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:5
11 ತಿಳಿವುಗಳ ಹೋಲಿಕೆ  

ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು.


ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II


ಆತ ಭೂಮಿಯನ್ನು ನಿರ್ಮಿಸಿದ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ ವಿವೇಕದಿಂದ.


ಸೃಷ್ಟಿಯಾಯಿತು ಗಗನ ಮಂಡಲ ಆತನ ನುಡಿಯೊಂದಕೆ I ರೂಪುಗೊಂಡಿತು ತಾರಾ ಮಂಡಲ ಅವನುಸಿರು ಮಾತ್ರಕೆ II


ಸರ್ವೇಶ್ವರ ಭೂಮಿಯನ್ನು ನಿರ್ಮಿಸಿದ್ದಾರೆ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ್ದಾರೆ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ್ದಾರೆ ವಿವೇಕದಿಂದ.


ಹೀಗೆ ದೇವರು ವಿಸ್ತಾರವಾದ ಗುಮ್ಮಟವೊಂದನ್ನು ಮಾಡಿ ಕೆಳಗಿದ್ದ ನೀರನ್ನು ಮೇಲಿದ್ದ ನೀರಿನಿಂದ ವಿಂಗಡಿಸಿದರು.


ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟರು. ಹೀಗೆ ಬೈಗೂ ಬೆಳಗೂ ಆಗಿ ಎರಡನೆಯ ದಿನ ಆಯಿತು.


ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು? I ಏತರದವನು ನರಮಾನವನು ನೀನವನನು ಪರಾಮರಿಸಲು? II


ಹರಸಲಿ ಸಿಯೋನಿನಿಂದ ನಿಮ್ಮನು I ಭೂಮ್ಯಾಕಾಶಗಳ ಸೃಜಿಸಿದಾತನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು