Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:6 - ಕನ್ನಡ ಸತ್ಯವೇದವು C.L. Bible (BSI)

6 ಜಲರಾಶಿಯ ಮೇಲೆ ಭೂಮಿಯನು ಹಾಸಿದವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ಭೂವಿುಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ. ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀರಿನ ಮೇಲೆ ಭೂಮಿಯನ್ನು ವಿಸ್ತರಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:6
11 ತಿಳಿವುಗಳ ಹೋಲಿಕೆ  

ಕಡಲನು ತಳಪಾಯವನಾಗಿಸಿದವನು ಆತನೆ I ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೆ II


ಸರ್ವೇಶ್ವರ ಭೂಮಿಯನ್ನು ನಿರ್ಮಿಸಿದ್ದಾರೆ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ್ದಾರೆ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ್ದಾರೆ ವಿವೇಕದಿಂದ.


ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲ ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ; ಒಣನೆಲವು ಕಾಣಿಸಿಕೊಳ್ಳಲಿ,” ಎಂದರು. ಹಾಗೆಯೇ ಆಯಿತು.


ತಾಯ ಗರ್ಭದಿಂದ ರೂಪಿಸಿ ನಿನ್ನನು ಹೊರತಂದ ಸರ್ವೇಶ್ವರ ಹೇಳಿಹನು ಇದನ್ನು : “ಸರ್ವವನು ಸೃಷ್ಟಿಸಿದ ಸರ್ವೇಶ್ವರನು ನಾನೆ ಗಗನಮಂಡಲವನು ವಿಸ್ತರಿಸಿದವನು ನಾನೆ ಭೂಮಂಡಲವನು ಹರಡಿದವನು ನಾನೆ ನನಗಾಗ ನೆರವಾಗಲು ಯಾರಾದರೂ ಇದ್ದರೆ?


ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದುದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು :


ಉತ್ತರ ದಿಕ್ಕನ್ನು ವಿಸ್ತರಿಸಿಹನು ಶೂನ್ಯದ ಮೇಲೆ ಭೂಮಂಡಲವನ್ನು ತೂಗುಹಾಕಿಹನು ಏನೂ ಇಲ್ಲದರ ಮೇಲೆ.


ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:


ಆಸೀನನಾಗಿಹನು ಆತ ಭೂಮಂಡಲಕ್ಕಿಂತ ಮೇಲೆ ಭೂನಿವಾಸಿಗಳು ಕಾಣುತಿಹರು ಆತನಿಗೆ ಮಿಡತೆಗಳಂತೆ ಹರಡಿಹನು ಆಕಾಶಮಂಡಲವನು ನವಿರು ಬಟ್ಟೆಯಂತೆ ಮೇಲೆತ್ತಿಕಟ್ಟಿಹನು ಅದನ್ನು ನಿವಾಸದ ಗುಡಾರದಂತೆ.


ದೇವರಂತೆ ಆಕಾಶಮಂಡಲವನು ನಿನ್ನಿಂದ ನಿರ್ಮಿಸಲಾದೀತೆ? ಎರಕ ಹೊಯ್ದು ಕನ್ನಡಿಯಂತೆ ಅದನು ಗಟ್ಟಿಮಾಡಲಾದೀತೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು