Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 137:6 - ಕನ್ನಡ ಸತ್ಯವೇದವು C.L. Bible (BSI)

6 ಜೆರುಸಲೇಮನು ನಾ ಸ್ಮರಣೆಮಾಡದಿದ್ದಲ್ಲಿ I ಆ ಸ್ಮರಣೆ ಸರ್ವೋತ್ತಮ ನಲಿವು ನನಗಾಗದಿದ್ದಲ್ಲಿ I ಸೇದಿಹೋಗಲಿ ನಾಲಿಗೆ ನನ್ನ ಬಾಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆರೂಸಲೇಮೇ, ನಾನು ನಿನ್ನನ್ನು ನೆನಸದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡಲು ಶಕ್ತನಾಗದಂತಾಗಲಿ. ಜೆರುಸಲೇಮೇ, ನಿನ್ನ ವಿಷಯದಲ್ಲೇ ನಾನು ಅತ್ಯಾನಂದಪಡುವೆನೆಂದು ಪ್ರಮಾಣ ಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದಿದ್ದರೆ, ಯೆರೂಸಲೇಮನ್ನು ನನ್ನ ಎಲ್ಲಾ ಸಂತೋಷಕ್ಕಿಂತಲೂ ಹೆಚ್ಚಾಗಿಡದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 137:6
11 ತಿಳಿವುಗಳ ಹೋಲಿಕೆ  

ಇದಲ್ಲದೆ, ನಿನ್ನ ನಾಲಿಗೆ ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ದ್ರೋಹಿವಂಶದವರಾದ ಅವರನ್ನು ನೀನು ಖಂಡಿಸಲು ಸಾಧ್ಯವಾಗದು.


ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II


ಗಣ್ಯ ವ್ಯಕ್ತಿಗಳೂ ನಿಶ್ಯಬ್ದವಾಗುತ್ತಿದ್ದರು ಅವರ ನಾಲಿಗೆ ಅಂಗುಳಕ್ಕೆ ಅಂಟಿರುತ್ತಿತ್ತು.


ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ದಾಹದಿಂದ ಸೇದುಹೋಗಿದೆ ಮೊಲೆಕೂಸಿನ ನಾಲಿಗೆ ಅನ್ನವಿಕ್ಕುವರಾರೂ ಇಲ್ಲ, ಹಂಬಲಿಸುವ ಆ ಹಸುಳೆಗಳಿಗೆ.


ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?


ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II


ನನ್ನ ಹೆಗಲಿನ ಕೀಲು ತಪ್ಪಿಹೋಗಲಿ ನನ್ನ ತೋಳು ಅದರ ಸಂದಿನಿಂದ ಕಳಚಿಬೀಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು