Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 137:7 - ಕನ್ನಡ ಸತ್ಯವೇದವು C.L. Bible (BSI)

7 ನೆನೆಸಿಕೊ ಪ್ರಭು, ಜೆರುಸಲೇಮಿನ ನಾಶನದಿನ ಅವರಾಡಿದ್ದನು: I “ಕೆಡವಿ ನೆಲಕೆ, ಬುಡಸಹಿತ ಕೆಡವಿ” ಎಂದಾ ಅಧಮ ಎದೋಮ್ಯರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನೇ, ಎದೋಮ್ಯರ ಹಾನಿಗಾಗಿ ಯೆರೂಸಲೇವಿುನ ನಾಶನದಿನವನ್ನು ನೆನಪುಮಾಡಿಕೋ. ಅವರು - ಅದನ್ನು ಹಾಳುಮಾಡಿರಿ, ಅಸ್ತಿವಾರಸಹಿತ ಹಾಳುಮಾಡಿರಿ ಎಂದು ಹೇಳಿದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆರೂಸಲೇಮು ಬಿದ್ದುಹೋದ ದಿವಸದಲ್ಲಿ, “ಹಾಳುಮಾಡಿರಿ, ಅದರ ಅಸ್ತಿವಾರದವರೆಗೆ ಹಾಳುಮಾಡಿರಿ,” ಎಂದು ಹೇಳಿದ ಎದೋಮಿನವರನ್ನು ಯೆಹೋವ ದೇವರೇ ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 137:7
17 ತಿಳಿವುಗಳ ಹೋಲಿಕೆ  

ಹೊರಟಿರುವೆ ನಿನ್ನ ಪ್ರಜೆಗಳ ರಕ್ಷಣೆಗೆ ನಿನ್ನ ಅಭಿಷಿಕ್ತನ ಜೀವೋದ್ಧಾರಕೆ. ಬಡಿದುಹಾಕಿರುವೆ ದುರುಳನ ಬುರುಡೆಯನು ನೆಲಸಮಮಾಡಿರುವೆ ಅವನ ಮನೆಯನು.


ಸರ್ವೇಶ್ವರ ಇಂತೆನ್ನುತ್ತಾರೆ: ಎದೋಮ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ಸೋದರ ನಾಡಿನವರಾದ ಇಸ್ರಯೇಲರನ್ನು ಓಡಿಸಿದರು. ಅವರಿಗೆ ಕರುಣೆತೋರದೆ, ಕೊನೆಯವರೆವಿಗೂ ರೋಷವನ್ನೇ ಸಾಧಿಸಿದರು.


“ನರಪುತ್ರನೇ, ನೀನು ಸೇಯೀರ ಬೆಟ್ಟದ ಸೀಮೆಗೆ ಅಭಿಮುಖನಾಗಿ ಅದಕ್ಕೆ ಈ ದೈವೋಕ್ತಿಯನ್ನು ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ : -


ಆದರೆ ಅವರ ದುಷ್ಕೃತ್ಯಗಳೆಲ್ಲ ಸರ್ವೇಶ್ವರಸ್ವಾಮಿಯ ಜ್ಞಾಪಕದಲ್ಲಿ ಇರುತ್ತವೆ ಎಂಬುದನ್ನು ಅವರು ಮನದಟ್ಟುಮಾಡಿಕೊಂಡಿಲ್ಲ. ಅವರ ನೀಚಕೃತ್ಯಗಳು ಅವರನ್ನು ಆವರಿಸಿಕೊಂಡಿವೆ; ನನ್ನ ಕಣ್ಮುಂದೆಯೇ ಇವೆ.


ನೆನಪಿರಲಿ ಪ್ರಭು, ಶತ್ರು ನಿನಗೆ ಮಾಡಿದಪಮಾನ I ನಿನ್ನ ಪೂಜ್ಯ ನಾಮಕೆ ದುರುಳರು ಕಕ್ಕಿದ ದೂಷಣ II


“ಇಸ್ರಯೇಲರು ಈಜಿಪ್ಟಿನಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದರು. ಆದ್ದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.


ಆಗ ಸರ್ವೇಶ್ವರ, “ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು ಎಂಬ ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ ಮತ್ತು ಯೆಹೋಶುವನಿಗೆ ಮನದಟ್ಟಾಗುವಂತೆ ಮಾಡು” ಎಂದು ಮೋಶೆಗೆ ಹೇಳಿದರು.


“ಓ ದೇವರೇ, ಟೋಬೀಯ-ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿಮ್ಮ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನು ಮರೆಯಬೇಡಿ,” ಎಂದು ನಾನು ಪ್ರಾರ್ಥಿಸಿದೆ.


ಇಸ್ರಯೇಲರ ಸೊತ್ತಿನ ನಾಶನಕ್ಕೆ ಜಗವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೆಯೀರ್ ಬೆಟ್ಟವೇ, ನೀನು ಹಾಳಾಗುವೆ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ವ್ಯಕ್ತವಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು