Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 137:8 - ಕನ್ನಡ ಸತ್ಯವೇದವು C.L. Bible (BSI)

8-9 ಬಾಬಿಲೋನ್ ನಗರವೇ ಕೇಳು : ಅಳಿವು ಕಾದಿದೆ ನಿನಗೆ I ಭಲೆ, ನೀನೆಮಗೆ ಮಾಡಿದ್ದಕ್ಕೆ ಮುಯ್ ತೀರಿಸುವವಗೆ I ನಿನ್ನ ಮಕ್ಕಳನೆತ್ತಿ ಬಂಡೆಗಪ್ಪಳಿಸುವವನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹಾಳಾಗುವದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನಮಗೆ ಮಾಡಿದ್ದಕ್ಕೆ ಮುಯ್ಯಿಸಲ್ಲಿಸುವವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಾಬಿಲೋನೇ, ನೀನು ನಾಶವಾಗುವೆ! ನಿನಗೆ ತಕ್ಕ ದಂಡನೆಯನ್ನು ಕೊಡುವವನು ಧನ್ಯನು. ನೀನು ನಮ್ಮನ್ನು ನೋಯಿಸಿದಂತೆ ನಿನ್ನನ್ನೂ ನೋಯಿಸುವವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹಾಳಾಗಲಿಕ್ಕಿರುವ ಬಾಬಿಲೋನ್ ನಗರವೇ, ನೀನು ನಮಗೆ ಮಾಡಿದ್ದಕ್ಕೆ ಪ್ರತೀಕಾರವನ್ನು ನಿನಗೆ ಸಲ್ಲಿಸುವವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 137:8
14 ತಿಳಿವುಗಳ ಹೋಲಿಕೆ  

ಅವಳು ಅಳೆದ ಅಳತೆಯಲ್ಲೇ ನೀವು ಅವಳಿಗೆ ಅಳೆಯಿರಿ; ಅವಳ ಕೃತ್ಯಗಳಿಗೆ ಇಮ್ಮಡಿಯಾಗಿ ಹಿಂದಿರುಗಿಸಿರಿ ಬೆರೆಸಿಕೊಡಿ ದ್ವಿಗುಣದಿ ಅವಳೇ ಬೆರೆಸಿದ ಮದ್ಯದ ಬಟ್ಟಲಲಿ.


ಕಡಲಡವಿಯ ಕುರಿತು ದೈವೋಕ್ತಿ : ದಕ್ಷಿಣ ಸೀಮೆಯ ನಾಡನ್ನು ಕಸದಂತೆ ಗುಡಿಸುವ ಸುಂಟರಗಾಳಿಯ ಹಾಗೆ, ಅರಣ್ಯದ ಕಡೆಯ ಭಯಂಕರ ನಾಡಿನಿಂದ ಗಂಡಾಂತರ ಬರಲಿದೆ.


ಕೋರೆಷನಿಗೆ ಇಂತೆನ್ನುವೆನು ನಾನು : ನನ್ನ ಮಂದೆ ಕಾಯುವವನು ನೀನು ನನ್ನ ಇಷ್ಟಾರ್ಥವನು ನೆರವೇರಿಸುವವನು ನೀನು; 'ಪುನಃ ನಿರ್ಮಾಣವಾಗುವೆ' ಎನ್ನುವೆ ಜೆರುಸಲೇಮಿಗೆ, ನೀನು; ‘ಪುನಃ ನಿನಗೆ ಅಸ್ತಿವಾರ ಹಾಕಿಸುವೆ’ ಎನ್ನುವೆ ಆ ದೇವಾಲಯಕೆ ನೀನು.”


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಬಾಬಿಲೋನಿಯರ ದೇಶವಾದ ಬಾಬಿಲೋನಿಯದ ಕುರಿತು ಪ್ರವಾದಿ ಯೆರೆಮೀಯನಿಂದ ಸರ್ವೇಶ್ವರ ಸ್ವಾಮಿ ನುಡಿಸಿದ ವಾಕ್ಯ ಇದು:


“ಬಿಲ್ಲುಬಾಣಗಾರರನ್ನೆಲ್ಲ ಬಾಬಿಲೋನಿಗೆ ಕರೆಯಿರಿ. ಅದರ ಸುತ್ತಲು ದಂಡಿಳಿಸಿರಿ. ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಗರ್ವದಿಂದ ಅದು ಇಸ್ರಯೇಲರ ಪರಮ ಪಾವನನಾದ ಸರ್ವೇಶ್ವರನನ್ನು ಅಸಡ್ಡೆಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು