Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 138:2 - ಕನ್ನಡ ಸತ್ಯವೇದವು C.L. Bible (BSI)

2 ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡ ಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ವಾಗ್ದಾನವನ್ನು ವಿಶೇಷರೀತಿಯಿಂದ ನೆರವೇರಿಸಿ ನಿನ್ನ ನಾಮಮಹತ್ತನ್ನು ಹೆಚ್ಚಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು. ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು. ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ಪರಿಶುದ್ಧ ಮಂದಿರದ ಕಡೆಗೆ ಅಡ್ಡಬಿದ್ದು, ನಿಮ್ಮ ಒಡಂಬಡಿಕೆಯ ಪ್ರೀತಿ, ನಿಮ್ಮ ಸತ್ಯತೆಯ ನಿಮಿತ್ತ ನಿಮ್ಮ ಹೆಸರನ್ನು ಕೊಂಡಾಡುವೆನು; ನೀವು ನಿಮ್ಮ ವಾಕ್ಯವನ್ನು ನಿಮ್ಮ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 138:2
27 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಸರ್ವೇಶ್ವರ ಮುಕ್ತಿದಾತನಾದುದರಿಂದ ಧರ್ಮಶಾಸ್ತ್ರಕ್ಕೆ ಮಹಿಮೆಯಿತ್ತು ಅದನ್ನು ಮಹತ್ತಾಗಿಸಿದ.


ನಾ ಹೆಮ್ಮೆಪಡುವುದು ದೇವನಲಿ, ಆತನ ವಾಗ್ದಾನದಲಿ I ನಾ ಹೆಮ್ಮೆಪಡುವುದು ಪ್ರಭುವಿನಲಿ, ಆತನ ವಾಗ್ದಾನದಲಿ II


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ನಿನ್ನ ಮಂದಿರಕೆ ಬರುವೆ ನಿನ್ನಪಾರ ಪ್ರೀತಿಯ ನಿಮಿತ್ತ I ಭಕುತಿಯಿಂದ ಅಡ್ಡಬೀಳುವೆ ನಿನ್ನ ಪವಿತ್ರಾಲಯದತ್ತ II


ನಿನ್ನ ಪರಿಶುದ್ಧಾಲಯದತ್ತ ಕೈಯೆತ್ತಿ ಮುಗಿವೆನು I ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು II


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ಹೆಮ್ಮೆ ಪಡುವೆನು ಆತನಿತ್ತ ವಾಗ್ದಾನಕೆ I ನರಮಾನವರು ಏನು ಮಾಡಿಯಾರೆನಗೆ? II


ನಮಗಲ್ಲ ಹೇ ಪ್ರಭು, ನಮಗಲ್ಲ ಮಹಿಮೆ I ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ I ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ II


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ಘನಪಡಿಸಿರೆಮ್ಮ ಸ್ವಾಮಿ ದೇವನನು I ಶ್ರೀಪರ್ವತದಲಿ ವಂದಿಸಿ ಆತನನು I ಪರಮಪವಿತ್ರನು ಆ ನಮ್ಮ ದೇವನು II


ಪರಮ ಪಾವನನು ನಮ್ಮೀ ಸ್ವಾಮಿ ದೇವನು I ಹೊಗಳಿರಿ, ಆತನ ಪಾದಪೀಠಕೆ ಅಡ್ಡಬೀಳಿರಿ ನೀವೆಲ್ಲರು II


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ಪ್ರೀತಿಯೂ ಸತ್ಯವೂ ಒಂದನ್ನೊಂದು ಕೂಡಿರುವುವು I ನೀತಿಯೂ ಶಾಂತಿಯೂ ಒಂದನ್ನೊಂದು ಚುಂಬಿಸುವುವು II


ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಕರೆಯಲಾಗಿದೆ. ಹೀಗೆ ಪವಿತ್ರಗ್ರಂಥದಲ್ಲೇ ಲಿಖಿತವಾಗಿರುವುದು ನಿರರ್ಥಕವೇನೂ ಅಲ್ಲ.


“ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನ ತಂದೆ ದಾವೀದನಿಗೆ ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.


ಸರ್ವೇಶ್ವರ ತಾವು ಕೊಟ್ಟ ಮಾತನ್ನು ನೆರವೇರಿಸಿದ್ದಾರೆ. ಅವರ ವಾಗ್ದಾನದಂತೆ ನಾನು ನನ್ನ ತಂದೆ ದಾವೀದರ ಸ್ಥಾನದಲ್ಲಿ ಇಸ್ರಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡಿದ್ದೇನೆ; ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ;


ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ಈಡೇರಿಸಿದ್ದೀರಿ; ನಿಮ್ಮ ಬಾಯಿ ನುಡಿದದ್ದನ್ನು ನಿಮ್ಮ ಕೈ ಈಗ ನೆರವೇರಿಸಿತು.


ಶತ್ರುಗಳು ಮುತ್ತಿಹರು, ಸತ್ಯ ಪಥದಲಿ ನಡೆಸೆನ್ನನು I ನೇರಮಾಡೆನಗೆ ದೇವಾ, ನಿನ್ನ ಸಿರಿಮಾರ್ಗವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು