Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 138:8 - ಕನ್ನಡ ಸತ್ಯವೇದವು C.L. Bible (BSI)

8 ಸಿದ್ಧಿಗೆ ತರುವೆ ನೀ ಪ್ರಭು, ನನ್ನ ಕಾರ್ಯವನು I ಶಾಶ್ವತವಾಗಿಸು ನಿನ್ನ ಅಚಲ ಪ್ರಿತಿಯನು I ಮರೆತುಬಿಡಬೇಡ ನಿನ್ನಯ ಕೈ ಕೃತಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಕೃಪೆಯು ಶಾಶ್ವತವಾದದ್ದು; ನೀನು ಕೈಹಚ್ಚಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು. ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ನನ್ನ ನ್ಯಾಯವನ್ನು ಸಿದ್ಧಿಗೆ ತರುತ್ತಾರೆ; ಯೆಹೋವ ದೇವರೇ, ನಿಮ್ಮ ಪ್ರೀತಿಯು ಎಂದೆಂದಿಗೂ ಇರುವುದು; ನಿಮ್ಮ ಕೈಕೆಲಸಗಳನ್ನು ನೆರವೇರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 138:8
23 ತಿಳಿವುಗಳ ಹೋಲಿಕೆ  

ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರೆಸುತ್ತಾ, ಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು ಎಂಬುದೇ ನನ್ನ ದೃಢ ನಂಬಿಕೆ.


ನನ್ನ ಕಾರ್ಯವನು ಕೈಗೂಡಿಸುವ ದೇವನಿಗೆ I ನಾ ಮೊರೆಯಿಡುವೆ ಪರಾತ್ಪರನಾದಾ ಕರ್ತನಿಗೆ II


ನಿಮ್ಮನ್ನು ಕರೆದ ದೇವರು ಇದನ್ನು ಈಡೇರಿಸುವರು; ಏಕೆಂದರೆ, ದೇವರು ನಂಬಿಕಸ್ಥರು.


ಸರ್ವೇಶ್ವರಾ, ನೀಡೆಮಗೆ ಶಾಂತಿ ಸಮಾಧಾನ ನಮ್ಮ ಸತ್ಕಾರ್ಯಗಳೆಲ್ಲವೂ ನಿನ್ನ ಕೃಪಾಸಾಧನ.


ಒಳ್ಳೆಯವನಾದ ಪ್ರಭುವಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ಆದ್ದರಿಂದ, ದೇವರ ಚಿತ್ತಾನುಸಾರ ಹಿಂಸೆಬಾಧೆಯನ್ನು ಅನುಭವಿಸುವವರು ತಮ್ಮ ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಸೃಷ್ಟಿಕರ್ತನಿಗೆ ಶರಣಾಗಲಿ. ಆತ ಅವರನ್ನೆಂದಿಗೂ ಕೈಬಿಡನು.


ನಾ ಸೃಷ್ಟಿಸಿದ ಆಪ್ತ ಜನಕೆ ನೀಡುವೆನು ಜಲಪಾನವನು; ಎಂದೇ ಸ್ತುತಿಸಿಕೊಂಡಾಡುವರು ನನ್ನನು.”


ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.


ಹೌದು, ಪ್ರಭುವೆನಿತೋ ಒಳ್ಳೆಯವನು I ಇರುವುದಾತನ ಪ್ರೀತಿ ಯುಗಯುಗಕು I ಆತನ ಸತ್ಯತೆ ತಲತಲಾಂತರಕು II


ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II


ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು. ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೆ?


ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.


ಆಗ ನೀನು ಕರೆದರೆ ನಾನು ಉತ್ತರಕೊಡುವೆ ನಿನ್ನ ಈ ಸೃಷ್ಟಿಯ ಮೇಲೆ ಹುಟ್ಟೀತು ನಿನಗೆ ಮಮತೆ!


ನನ್ನನ್ನು ನಿರ್ಮಿಸಿ ರೂಪಿಸಿದಾತ ನೀನು ಆದರೆ ಈಗ ಮುಗಿಸಿಬಿಡುವಿಯೋ ಮಾನಸಾಂತರಗೊಂಡು?


ದುರುಳರ ಯೋಜನೆಯನು ನೀನು ಪುರಸ್ಕರಿಸಬಹುದೆ? ನಿನ್ನ ಕೈಕೃತಿಯಾದ ನನ್ನನು ತಿರಸ್ಕರಿಸಿ ಬಾಧಿಸುವುದು ಸರಿಯೆ?


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ಆತ ನೆರವಾಗುವನೆನಗೆ ಪರಲೋಕದಿಂದ I ತಪ್ಪಿಸುವನು ನನ್ನನು ಬೆನ್ನಟ್ಟಿ ಬರುವವರಿಂದ II ತೋರ್ಪಡಿಸುವನು ಸತ್ಯತೆಯನು I ತನ್ನ ಅಚಲ ಪ್ರೀತಿಯನಾ ದೇವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು