Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:13 - ಕನ್ನಡ ಸತ್ಯವೇದವು C.L. Bible (BSI)

13 ನನ್ನ ಅಂತರಂಗವನು ಉಂಟುಮಾಡಿದಾತ ನೀನು I ತಾಯಗರ್ಭದಲೆ ನನ್ನ ರೂಪಿಸಿದಾತ ನೀನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ, ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಅಂತರೀಂದ್ರಿಯಗಳನ್ನು ಸೃಷ್ಟಿಮಾಡಿದವನೂ ನೀನೇ. ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ಅಂತರಾತ್ಮವನ್ನು ಉಂಟು ಮಾಡಿದವರು ನೀವೇ; ನನ್ನ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವರು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:13
10 ತಿಳಿವುಗಳ ಹೋಲಿಕೆ  

“ನಿನ್ನನ್ನು ತಾಯಿಯ ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆಯೇ ನಿನ್ನನ್ನು ನಾನು ತಿಳಿದಿದ್ದೇ; ನೀನು ಉದರದಿಂದ ಹೊರಬರುವುದಕ್ಕೆ ಮೊದಲೇ ನಿನ್ನನ್ನು ಪವಿತ್ರೀಕರಿಸಿದ್ದೇ; ನಿನ್ನನ್ನು ರಾಷ್ಟ್ರಗಳಿಗೆ ಪ್ರವಾದಿಯನ್ನಾಗಿ ನೇಮಿಸಿದ್ದೇನೆ.”


ನನ್ನನು ನಿರ್ಮಿಸಿ ರೂಪಿಸಿವೆ ನಿನ್ನ ಕೈಗಳು I ನೀಡು ಬುದ್ಧಿಯನು ನಿನ್ನಾಜ್ಞೆಗಳನು ಕಲಿಯಲು II


ನಿನ್ನನ್ನು ಸೃಷ್ಟಿಸಿದ ಸರ್ವೇಶ್ವರ ನಾನೆ ತಾಯ ಗರ್ಭದಿಂದ ನಿನ್ನನ್ನು ರೂಪಿಸಿದವನು ನಾನೆ ಅಂದಿನಿಂದ ನಿನಗೆ ನೆರವಾಗುತ್ತಾ ಬಂದವನು ನಾನೆ. ಭಯಪಡಬೇಡ, ನನ್ನ ದಾಸ ಯಕೋಬನೇ, ಅಂಜಬೇಡ, ನಾನು ಆರಿಸಿಕೊಂಡ ಯೆಶುರೂನೇ.


ತಾಯಗರ್ಭದಲ್ಲಿ ನನ್ನ ನಿರ್ಮಿಸಿದಾತನೆ ಅವರನೂ ನಿರ್ಮಿಸಲಿಲ್ಲವೆ? ತಾಯಗರ್ಭದಲ್ಲಿ ನಮ್ಮನು ರೂಪಿಸಿದಾತ ಅದೇ ದೇವರಲ್ಲವೆ?


“ಕಿವಿಗೊಡು, ಓ ಯಕೋಬ ಮನೆತನವೆ, ಅಳಿದುಳಿದಾ ಇಸ್ರಯೇಲಿನ ಮನೆತನವೆ, ಹೊರುತ್ತಿರುವೆ ನಿಮ್ಮನು ಗರ್ಭದಿಂದ ಸಾಕಿ ಸಲಹುತ್ತಿರುವೆ ಹುಟ್ಟಿದಂದಿನಿಂದ.


ಹುಟ್ಟಿನಿಂದಲೆ ನಾ ನಿನಗಂಟಿಕೊಂಡಿರುವೆನಯ್ಯಾ I ಗರ್ಭದಿಂದಲೆ ನೀ ಎನ್ನನು ಕರೆದುತಂದೆಯಯ್ಯಾ I ನಿರಂತರವೂ ನಿನ್ನನು ಕೊಂಡಾಡುತ್ತಿರುವೆನಯ್ಯಾ II


ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II


ದೇಹವಿಡೀ ಕಣ್ಣೇ ಆದರೆ ಅದು ಕೇಳುವ ಬಗೆ ಹೇಗೆ? ಅಥವಾ ಅದು ಇಡೀ ಕಿವಿಯೇ ಆದರೆ, ಮೂಸಲು ಮೂಗು ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು