Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:16 - ಕನ್ನಡ ಸತ್ಯವೇದವು C.L. Bible (BSI)

16 ನಾನಿನ್ನೂ ಭ್ರೂಣವಾಗಿದ್ದಾಗ ನೋಡಿದವು ನಿನ್ನ ಕಣ್ಣುಗಳು I ಪ್ರಾರಂಭವಾಗುವುದಕ್ಕೆ ಮುನ್ನ ನನ್ನ ಆಯುಷ್ಕಾಲದ ದಿನಗಳು I ಲಿಖಿತವಾದವು ಅವುಗಳಲೊಂದೂ ತಪ್ಪದೆ ನಿನ್ನ ಪುಸ್ತಕದೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಇನ್ನೂ ಕೇವಲ ಪಿಂಡವಾಗಿರುವಾಗ, ನಿನ್ನ ಕಣ್ಣುಗಳು ನನ್ನನ್ನು ನೋಡಿದವು, ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ, ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಇನ್ನೂ ಕೇವಲ ಪಿಂಡವಾಗಿರುವಾಗ ನಿನ್ನ ಕಣ್ಣುಗಳು ನನ್ನನ್ನು ನೋಡಿದವು; ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ದೇಹದ ಅಂಗಾಂಗಗಳು ಬೆಳೆಯುವುದನ್ನೂ ನೀನು ಗಮನಿಸಿದೆ. ನನ್ನ ಆಯುಷ್ಕಾಲದ ಮೊದಲನೆ ದಿನ ಆರಂಭವಾಗುವುದಕ್ಕಿಂತ ಮೊದಲೇ ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಇನ್ನೂ ಭ್ರೂಣವಾಗಿರುವಾಗಲೇ ನಿಮ್ಮ ಕಣ್ಣುಗಳು ನನ್ನನ್ನು ನೋಡಿದವು; ನೀವು ನನಗೆ ಅನುಮತಿಸಿರುವ ಪ್ರಥಮ ದಿನದಿಂದ ಕೊನೆಯದಿನದವರೆಗೆ ನನ್ನ ಎಲ್ಲಾ ದಿನಗಳೂ ನಿಮ್ಮ ಪುಸ್ತಕದಲ್ಲಿ ಬರೆಯಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:16
3 ತಿಳಿವುಗಳ ಹೋಲಿಕೆ  

ನನ್ನ ಅಲೆಮಾರಿತನದ ಲೆಕ್ಕವಿಟ್ಟಿರುವೆ ನಿನ್ನಲಿ I ನನ್ನ ಕಣ್ಣೀರನು ತುಂಬಿಡು ನಿನ್ನ ಬುದ್ದಲಿಯಲಿ I ಅದರ ಕತೆ ಬರೆದಿದೆಯಲ್ಲವೆ ನಿನ್ನ ಪುಸ್ತಕದಲಿ? II


ಇಂಥ ಮಾತುಗಳನ್ನು ಕೇಳಿ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಸರ್ವೇಶ್ವರ ಅವರಿಗೆ ಕಿವಿಗೊಟ್ಟು ಆಲಿಸಿದರು. ಭಯಭಕ್ತಿಯಿಂದ ತಮ್ಮ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತಮ್ಮ ಮುಂದಿದ್ದ ದಾಖಲೆ ಪುಸ್ತಕದಲ್ಲಿ ಬರೆಸಿದರು.


ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು