Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:18 - ಕನ್ನಡ ಸತ್ಯವೇದವು C.L. Bible (BSI)

18 ಎಣಿಕೆಗೆ ಅವುಗಳ ಸಂಖ್ಯೆ ಸಮುದ್ರತೀರದ ಮರಳಿನಂತೆ I ಎಚ್ಚತ್ತು ಎಣಿಸಲೆತ್ನಿಸೆ ನಿನ್ನ ಮುಂದಿರುವೆ ಮುಂಚಿನಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ, ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವುಗಳನ್ನು ಲೆಕ್ಕಿಸುವದಾದರೆ [ಸಮುದ್ರದ] ಮರಳಿಗಿಂತ ಹೆಚ್ಚಾಗಿವೆ. ನಾನು ಎಚ್ಚರವಾಗಲು ಮುಂಚಿನಂತೆಯೇ ನಿನ್ನ ಬಳಿಯಲ್ಲಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವುಗಳನ್ನು ಎಣಿಸುವುದಾದರೆ, ಸಮುದ್ರದ ಮರಳಿಗಿಂತಲೂ ಹೆಚ್ಚಾಗಿವೆ. ನಾನು ಎಚ್ಚರಗೊಂಡಾಗ ಮುಂಚಿನಂತೆ ನಿನ್ನೊಂದಿಗೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ಅವುಗಳನ್ನು ಎಣಿಸಿದರೆ, ಅವು ಮರಳಿಗಿಂತಲೂ ಹೆಚ್ಚಾಗಿವೆ! ನಾನು ಎಚ್ಚರವಾಗುವಾಗ, ನಿಶ್ಚಯವಾಗಿಯೂ ನಿಮ್ಮ ಸಂಗಡ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:18
11 ತಿಳಿವುಗಳ ಹೋಲಿಕೆ  

ಹಾಯಾಗಿ ಮಲಗಿ ನಿದ್ರಿಸುವೆನು I ಸುಖಿಯಾಗಿ ಮರಳಿ ಎದ್ದೇಳುವೆನು I ಕಾಯ್ದು ಕಾಪಾಡುವನು ಪ್ರಭು ನನ್ನನು II


ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ I ನನ್ನ ನಡತೆಯೆಲ್ಲವು ನಿನಗೆ ಸುಪರಿಚಿತ II


ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


ಯೇಸುಕ್ರಿಸ್ತರು ಮರಳಿ ಬರುವಾಗ, ನಾವು ಮೃತರಾಗಿದ್ದರೂ ಜೀವಂತವಾಗಿದ್ದರೂ ಅವರೊಡನೆಯೇ ನಾವು ಜೀವಿಸಬೇಕೆಂದೆ ನಮಗಾಗಿ ಅವರು ಸಾವನ್ನಪ್ಪಿದರು.


ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ಲೆಕ್ಕವಿಲ್ಲದಾಪತ್ತುಗಳು ನನ್ನನು ಸುತ್ತಿಕೊಂಡಿವೆ I ದಿಕ್ಕು ತೋಚದಂತೆನ್ನ ಪಾಪಗಳು ನನಗಂಟಿಕೊಂಡಿವೆ I ಸಿಲುಕವು ಎಣಿಕೆಗೆ ತಲೆಗೂದಲಂತೆ, ನಾನೆದೆಗುಂದಿರುವೆ II


ಬೇಡವಾದವು ನಿನಗೆ ಯಜ್ಞಾರ್ಪಣೆ, ಬಲಿಕಾಣಿಕೆ I ಬಯಸಿಲ್ಲ ನೀ ಹೋಮವನೆ, ಪರಿಹಾರಕ ಬಲಿಯನೆ I ಶ್ರವಣಶಕ್ತಿಯನು ಅನುಗ್ರಹಿಸಿದೆ ನೀನು ನನಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು