Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:19 - ಕನ್ನಡ ಸತ್ಯವೇದವು C.L. Bible (BSI)

19 ದೇವಾ, ದುಷ್ಟರನು ಸಂಹರಿಸಿಬಿಟ್ಟರೆ ಎಷ್ಟೋ ಉಚಿತ I ಕೊಲೆಪಾತಕರು ನನ್ನಿಂದ ತೊಲಗಿಹೋದರೆ ಎಷ್ಟೋ ಹಿತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ, ಎಷ್ಟೋ ಒಳ್ಳೆಯದು. ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ ಎಷ್ಟೋ ಒಳ್ಳೇದು. ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನೇ, ದುಷ್ಟರನ್ನು ಸಂಹರಿಸು. ಆ ಕೊಲೆಗಾರರನ್ನು ನನ್ನಿಂದ ದೂರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರೇ, ಒಂದು ವೇಳೆ ನೀವು ದುಷ್ಟರೆಲ್ಲರನ್ನು ದಂಡಿಸಿಬಿಟ್ಟರೆ ಎಷ್ಟೋ ಒಳ್ಳೆಯದಾಗಿರುವುದು! ಕೊಲೆಪಾತಕರೇ, ನೀವು ನನ್ನಿಂದ ತೊಲಗಿ ಹೋದರೆ ಎಷ್ಟೋ ಹಿತ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:19
12 ತಿಳಿವುಗಳ ಹೋಲಿಕೆ  

ಹುಸಿ ನುಡಿವವರನು ಪ್ರಭು, ನೀ ನಾಶಮಾಡುವೆ I ಹಿಂಸಕರನು, ವಂಚಕರನು ನೀ ಹೇಸಿಬಿಡುವೆ II


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ತೊಲಗು ನನ್ನಿಂದ ದುರುಳ ಜನಾಂಗವೆ I ದೈವಾಜ್ಞೆಗಳನು ನಾನು ಪಾಲಿಸುವೆ II


ದುರ್ಜನರೇ ತೊಲಗಿರಿ ನನ್ನಿಂದ ದೂರ I ಪ್ರಭುವಿನ ಕಿವಿಮುಟ್ಟಿದೆ ನನ್ನಾರ್ತ ಸ್ವರ II


ಆದರೆ ಎಸೆವನು ಬಾಣವನು ದೇವನೆ I ಪಡೆವರು ಅಪಘಾತವನು ಫಕ್ಕನೆ II


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಕೆಳ ಪಾತಾಳವೊಂದೇ ಗತಿ ದುಷ್ಟರಿಗೆ I ದೇವರನು ಕೈಬಿಟ್ಟಾ ರಾಷ್ಟ್ರಗಳಿಗೆ II


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ದಂಡಿಸುವನಾ ಕೆಡುಕರನು ಅವರ ಕೆಟ್ಟತನಕ್ಕಾಗಿ I ನಿರ್ಮೂಲ ಮಾಡುವನಾ ಜನರ ದುಷ್ಟತನಕ್ಕಾಗಿ I ನಮ್ಮೊಡೆಯ ದೇವನು ಸಂಹರಿಸಿಬಿಡುವನು ಈ ಕಾರಣಕ್ಕಾಗಿ II


ಆಗ ನಾನು ಅವರಿಗೆ ‘ಇಂದಿಗೂ ನಿಮ್ಮ ಗುರುತೇ ನನಗಿಲ್ಲ. ಅಧರ್ಮಿಗಳೇ, ನನ್ನಿಂದ ತೊಲಗಿರಿ,’ ಎಂದು ಬಹಿರಂಗವಾಗಿ ಹೇಳಿಬಿಡುವೆನು.”


ದರಿದ್ರರನು ದೇವರು ಎಂದಿಗು ಮರೆಯುವುದಿಲ್ಲ I ನಿರ್ಗತಿಕರ ನಿರೀಕ್ಷೆ ಕೈಗೂಡದೆ ಇರುವುದಿಲ್ಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು