Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:3 - ಕನ್ನಡ ಸತ್ಯವೇದವು C.L. Bible (BSI)

3 ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ I ನನ್ನ ನಡತೆಯೆಲ್ಲವು ನಿನಗೆ ಸುಪರಿಚಿತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ನಡೆಯುವದನ್ನೂ ಮಲಗುವದನ್ನೂ ಶೋಧಿಸಿ ಗ್ರಹಿಸಿಕೊಳ್ಳುತ್ತೀ; ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಎಲ್ಲಿಗೇ ಹೋಗುತ್ತಿದ್ದರೂ ಎಲ್ಲೇ ಮಲಗಿದ್ದರೂ ನಿನಗೆ ತಿಳಿದಿರುತ್ತದೆ. ನನ್ನ ಕಾರ್ಯಗಳೆಲ್ಲಾ ನಿನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ನಡೆಯುವುದನ್ನೂ, ನಾನು ಮಲಗುವುದನ್ನೂ ನೀವು ವಿವೇಚಿಸಿದ್ದೀರಿ; ನನ್ನ ಮಾರ್ಗಗಳೆಲ್ಲಾ ನಿಮಗೆ ಸುಪರಿಚಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:3
21 ತಿಳಿವುಗಳ ಹೋಲಿಕೆ  

ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ಆತ ನನ್ನ ನಡತೆಯನ್ನೂ ನೋಡುತ್ತಾನೆ; ನನ್ನ ಹೆಜ್ಜೆಗಳನ್ನೂ ಎಣಿಸುತ್ತಾನಲ್ಲವೆ?


ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ಎಣಿಕೆಗೆ ಅವುಗಳ ಸಂಖ್ಯೆ ಸಮುದ್ರತೀರದ ಮರಳಿನಂತೆ I ಎಚ್ಚತ್ತು ಎಣಿಸಲೆತ್ನಿಸೆ ನಿನ್ನ ಮುಂದಿರುವೆ ಮುಂಚಿನಂತೆ II


ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.


ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರೆಯಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆ ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು.


ಇದೆಲ್ಲವನ್ನೂ ಹೇಳಿಯಾದ ಮೇಲೆ ಯೇಸು ಸ್ವಾಮಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಅವರು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನಿಮ್ಮಲ್ಲೊಬ್ಬನು ದ್ರೋಹ ಬಗೆದು ನನ್ನನ್ನು ಹಿಡಿದೊಪ್ಪಿಸುವನು,” ಎಂದು ಸ್ಪಷ್ಟವಾಗಿ ಹೇಳಿದರು.


(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).


ಎದೋಮಿನಲ್ಲೆಲ್ಲಾ ಅವನು ಕಾವಲು ದಂಡುಗಳನ್ನಿರಿಸಿದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿಹೋದರೂ ಜಯ ಉಂಟಾಯಿತು.


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


ಅನುಸರಿಸಿದೆ ನಿನ್ನ ನೇಮನಿಯಮಗಳನೆಲ್ಲ I ನಿನಗೆ ಬಟ್ಟಬಯಲು ನನ್ನ ನಡತೆಯೆಲ್ಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು