Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 14:2 - ಕನ್ನಡ ಸತ್ಯವೇದವು C.L. Bible (BSI)

2 ಮಾನವರನು ಪ್ರಭು ಸ್ವರ್ಗದಿಂದ ಸಮೀಕ್ಷಿಸುತಿಹನು I ದೇವರನು ಅರಸುವ ಸನ್ಮತಿಗಳಾರೆಂದು ವೀಕ್ಷಿಸುತಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ಯೆಹೋವ ದೇವರು ಸ್ವರ್ಗದಿಂದ, ಮನುಷ್ಯರ ಮೇಲೆ ದೃಷ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 14:2
29 ತಿಳಿವುಗಳ ಹೋಲಿಕೆ  

ದೇವರೊಡನೆ ಸತ್ಸಂಬಂಧಿತರಾರೂ ಇಲ್ಲ ಸನ್ಮತಿಗಳು ಒರ್ವರೂ ಇಲ್ಲ ಆತನನ್ನು ಅರಸುವವರಂತೂ ಇಲ್ಲವೇ ಇಲ್ಲ.


ವಿಶ್ವಾಸವಿಲ್ಲದೆ ದೇವರ ಮೆಚ್ಚುಗೆಗೆ ಪಾತ್ರರಾಗಲು ಯಾರಿಂದಲೂ ಸಾಧ್ಯವಿಲ್ಲ. ದೇವರ ಬಳಿಗೆ ಸಾಗುವವರು, ಅವರ ಅಸ್ತಿತ್ವವನ್ನು ವಿಶ್ವಾಸಿಸಬೇಕು; ಅವರನ್ನು ಅರಸುವವರಿಗೆ ತಕ್ಕ ಪ್ರತಿಫಲ ಸಿಗುವದೆಂದು ನಂಬಬೇಕು.


ಭೂನಿವಾಸಿಗಳೆಲ್ಲರು ತಮ್ಮ ನಡತೆಯನ್ನು ಕೆಡಿಸಿಕೊಂಡಿದ್ದರು.


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ದುಷ್ಟರು ದುಷ್ಟರಾಗಿಯೇ ನಡೆಯುವರು. ಅವರಲ್ಲಿ ಯಾರಿಗೂ ವಿವೇಕವಿರದು. ಬುದ್ಧಿವಂತರಿಗೆ ವಿವೇಕವಿರುವುದು.


ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’


ಆದರೂ ನೀವು ನಾಡಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದುಹಾಕಿದ್ದೀರಿ. ಸರ್ವೇಶ್ವರನ ಭಕ್ತಿ ನಿಮ್ಮಲ್ಲಿ ಬೇರೂರಿದೆ, ನಿಮ್ಮಲ್ಲಿ ಸುಶೀಲತೆ ಉಂಟೆಂದು ತಿಳಿದುಬಂದಿದೆ,” ಎಂಬುದಾಗಿ ಹೇಳಿದನು.


“ಮುಗ್ಧಜೀವಿಗಳು ಯಾರಾದರೂ ಇದ್ದರೆ ಬರಲಿ ಇತ್ತ” ಎಂದು ಕರೆವಳು.


ಬುದ್ಧಿಹೀನರು, ಮಂದಮತಿಗಳು, ಕತ್ತಲಲಿ ನಡೆವವರು ನೀವು I ಇದರಿಂದಲೆ ಕದಲುತ್ತಿರುವುವು ಧರೆಯ ಅಸ್ತಿವಾರಗಳು II


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ಅರಸಿರಿ ಸರ್ವೇಶ್ವರನನು ಆತ ದೊರಕುವ ವೇಳೆಯಲಿ ವಿನಂತಿಸಿರಿ ಆತನಿರುವಾಗಲೆ ಸಮೀಪದಲಿ.


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.


ಮೂಢರೇ, ಕಲಿತುಕೊಳ್ಳಿ ಜಾಣತನವನ್ನು ಬುದ್ಧಿಹೀನರೇ, ಗ್ರಹಿಸಿರಿ ಸನ್ಮತಿಯನ್ನು.


ಆಗ ನೀತಿನ್ಯಾಯಗಳನ್ನು ನೀನರಿತುಕೊಳ್ಳುವೆ, ಸಕಲ ಸನ್ಮಾರ್ಗಸತ್ಯತೆಗಳನ್ನೂ ತಿಳಿದುಕೊಳ್ಳುವೆ.


ಇದನರಿಯನು ಪಶುಪ್ರಾಯನು I ಇದ ತಿಳಿಯನು ಬುದ್ಧಿಹೀನನು II


ಹರಿಯುತ್ತಿರುವುದು ನಿರಂತರವಾಗಿ ನನ್ನ ಕಣ್ಣೀರು.


“ಮುಗ್ಧಮನಸ್ಕರು ಯಾರಾದರೂ ಇದ್ದರೆ ಇತ್ತ ಬರಲಿ” ಎಂದು ಪ್ರಕಟಿಸುತ್ತಾಳೆ.


ಪರ್ಯಾಲೋಚಿಸಲಿವುಗಳನು ಬುದ್ಧಿವಂತರು I ಗ್ರಹಿಸಲಿ ಪ್ರಭುವಿನಚಲ ಪ್ರೀತಿಯನಾ ಜನರು II


ನನಗೆ ಮುಟ್ಟಿರುವ ದೂರಂತೆ ಅವರು ಮಾಡಿದರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ,” ಎಂದುಕೊಂಡರು.


ನರಮಾನವರು ಕಟ್ಟುತ್ತಿದ್ದ ಆ ಪಟ್ಟಣವನ್ನು ಹಾಗೂ ಗೋಪುರವನ್ನು ನೋಡಲು ಸರ್ವೇಶ್ವರ ಸ್ವಾಮಿ ಇಳಿದು ಬಂದರು.


(ಸ್ವಾಮೀ) ಆಕಾಶವನ್ನು ಸೀಳಿ ಇಳಿದು ಬರಲಾರಿರಾ? ನಿಮ್ಮ ದರ್ಶನವನ್ನು ಕಂಡು ಬೆಟ್ಟಗುಡ್ಡಗಳು ಗಡಗಡನೆ ನಡುಗಬಾರದೆ?


ಇದನರಿತು ದೀನದಲಿತರು ಆನಂದಗೊಳ್ಳಲಿ I ದೇವನನು ಅರಸುವವರು ಪುನಶ್ಚೇತನಗೊಳ್ಳಲಿ II


ಆದರೂ ಪಿತೃಗಳ ದೇವರಾದ ನಿಮ್ಮನ್ನು ಅರಸುವ ಮನಸ್ಸಿನಿಂದ ಬಂದಿರುವವರಿಗೆಲ್ಲಾ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.


ನರನು ಎಷ್ಟರವನು? ಅವನು ಪರಿಶುದ್ಧನಿರಲು ಸಾಧ್ಯವೆ? ಸ್ತ್ರೀಯರಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೆ?


ಪ್ರಭು ಪ್ರಸನ್ನವಿರುವನು ಪವಿತ್ರಾಲಯದಲಿ I ಸ್ಥಾಪಿಸಿಹನು ಸಿಂಹಾಸನವನು ಪರದಲಿ I ನರಮಾನವರನು ನೋಡುತಿಹನು ನೇತ್ರಗಳಲಿ I ಪರೀಕ್ಷಿಸುತಿಹನು ಅವರನು ಸೂಕ್ಷ್ಮರೀತಿಯಲಿ II


ಜೆರುಸಲೇಮಿನ ಜನರೇ, ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನೋಡಿ ಅಲ್ಲಿನ ಚೌಕಗಳಲ್ಲಿ ಹುಡುಕಾಡಿ ನೋಡಿ. ನೀತಿಯನ್ನು ಕೈಗೊಂಡು ಸತ್ಯವನ್ನರಸುವವನು ಒಬ್ಬನಾದರೂ ಇದ್ದಾನೆಯೇ? ಅಂಥ ಸತ್ಪುರುಷ ಸಿಕ್ಕುತ್ತಾನೆಯೆ ಎಂಬುದನ್ನು ನೀವೇ ನಿಶ್ಚಯಿಸಿರಿ; ಸಿಕ್ಕಿದ್ದೇ ಆದರೆ ಸರ್ವೇಶ್ವರ ಸ್ವಾಮಿ ಆ ನಗರವನ್ನು ಕ್ಷಮಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು