Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 140:10 - ಕನ್ನಡ ಸತ್ಯವೇದವು C.L. Bible (BSI)

10 ಸುರಿಯಲಿ ಆ ಜನರ ಮೇಲೆ ಉರಿಉರಿವ ಬೆಂಕಿಕೆಂಡ I ಅವರೇಳದಂತೆ ಸೇರಲಿ ಪಾತಾಳದ ಅಗ್ನಿಕುಂಡ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರ ಮೇಲೆ ಕೆಂಡಗಳು ಸುರಿಯಲಿ, ಅವರು ಅಗ್ನಿಕುಂಡದೊಳಕ್ಕೂ, ಆಳವಾದ ತಗ್ಗಿನೊಳಕ್ಕೂ ದೊಬ್ಬಲ್ಪಟ್ಟು ತಿರುಗಿ ಏಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರ ಮೇಲೆ ಕೆಂಡಗಳು ಸುರಿಯಲಿ; ಅವರು ಅಗ್ನಿಕುಂಡದೊಳಕ್ಕೂ ದೊಡ್ಡ ಮಡುವಿನೊಳಕ್ಕೂ ದೊಬ್ಬಲ್ಪಟ್ಟು ತಿರಿಗಿ ಏಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರ ತಲೆಗಳ ಮೇಲೆ ಉರಿಯುವ ಕೆಂಡಗಳನ್ನು ಸುರಿದು ಬೆಂಕಿಯೊಳಗೆ ಎಸೆದುಬಿಡು; ಎಂದಿಗೂ ಹತ್ತಿ ಬರಲಾಗದ ಗುಂಡಿಯೊಳಗೆ ಅವರನ್ನು ಎಸೆದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ, ಇತರರು ಅವರನ್ನು ಕುಣಿಯಲ್ಲಿ ಕೆಡವಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 140:10
17 ತಿಳಿವುಗಳ ಹೋಲಿಕೆ  

ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.”


ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.


ನರಹತ್ಯಮಾಡಿದ ಪಾಪಾತ್ಮನು ಪಾತಾಳದತ್ತ ಓಡೋಡುತ್ತಿರುವನು; ಅವನನ್ನು ಯಾರೂ ತಡೆಯಬಾರದು.


ನೆಟ್ಟಗೆ ನಡೆವವರನ್ನು ಕೆಟ್ಟದಾರಿಗೆ ಎಳೆಯುವವನು ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ನಿರ್ದೋಷಿಗಳು ಸುಖಸಂತೋಷಕ್ಕೆ ಬಾಧ್ಯಸ್ಥರು.


ತಟ್ಟುವುವು ಶೂರನ ಹರಿತ ಬಾಣಗಳು I ಗಿಟ್ಟುವುವು ಉರಿಯುವ ಬೆಂಕಿ ಕೆಂಡಗಳು II


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಆಗ ಸರ್ವೇಶ್ವರ ಸ್ವಾಮಿ ಸೊದೋಮ್ - ಗೊಮೋರಗಳ ಮೇಲೆ ಅಗ್ನಿ ಉರಿಯುತ್ತಿರುವ ಗಂಧಕಮಳೆ ಸುರಿಸಿದರು.


ಸತ್ಯಸ್ವರೂಪನಾದ ಸ್ವಾಮಿಗೆ ನನ್ನ ವಂದನೆ I ಪರಾತ್ಪರ ಪ್ರಭುವಿನ ನಾಮಕ್ಕೆ ಸ್ತುತಿಸಂಕೀರ್ತನೆ II


ಜನರೆಲ್ಲರಾಗ ತಲ್ಲಣಗೊಳ್ಳುವರು I ದೇವಕಾರ್ಯವಿದು ಎಂದು ಧ್ಯಾನಿಪರು I ಆತನ ಸತ್ಕಾರ್ಯಗಳನು ಸಾರುವರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು