Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 140:12 - ಕನ್ನಡ ಸತ್ಯವೇದವು C.L. Bible (BSI)

12 ಪ್ರಭು ನೀ ದೀನದಲಿತರ ವಕೀಲನೆಂದು ನಾ ಬಲ್ಲೆ I ಬಡವರಿಗೆ ನ್ಯಾಯ ದೊರಕಿಸುವವ ನೀ ಅಲ್ಲವೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ, ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ದೀನರ ವ್ಯಾಜ್ಯವನ್ನು ನಡಿಸುವನೆಂತಲೂ ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ದೀನರಿಗೆ ನ್ಯಾಯವಾದ ತೀರ್ಪನ್ನು ಪಾಲಿಸುತ್ತಾನೆಂದು ನನಗೆ ಗೊತ್ತಿದೆ. ದೇವರು ಅಸಹಾಯಕರಿಗೆ ಸಹಾಯಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ಬಡವನಿಗೆ ವ್ಯಾಜ್ಯವನ್ನು, ಬಲಹೀನರಿಗೆ ನ್ಯಾಯವನ್ನೂ ತೀರಿಸುವರೆಂದೂ ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 140:12
16 ತಿಳಿವುಗಳ ಹೋಲಿಕೆ  

ನ್ಯಾಯಪೀಠದಲಿ ಕುಳಿತೆನ್ನ ವ್ಯಾಜ್ಯ ತೀರಿಸಿದೆ I ನೀತಿಗನುಸಾರವಾಗಿ ನ್ಯಾಯ ಸ್ಥಾಪಿಸಿದೆ II


ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಆಲಿಸಿರಿ; ಅವರಿಗೆ ದಯೆಯನ್ನು ತೋರಿಸಿರಿ.


ಪರಲೋಕದಲ್ಲಿರುವ ನೀವು ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಕೇಳಿ ಅವರಿಗೆ ಜಯವನ್ನು ನೀಡಿರಿ.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ಆತ ದೀನದಲಿತರಿಗೆ ನ್ಯಾಯ ದೊರಕಿಸುತ್ತಿದ್ದ ಆಗ ಅವನಿಗೆ ಎಲ್ಲವು ಸುಗಮವಾಗಿತ್ತು. ನನ್ನನ್ನು ಅರಿಯುವುದು ಎಂದರೆ ಇದುವೇ. ಇದು ಸರ್ವೇಶ್ವರನಾದ ನನ್ನ ನುಡಿ.


ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I ನೆರವೇರಿಸದೆ ಬಿಡನು ಅವರ ಕೋರಿಕೆಯನು II


“ಬಿಡಿಸಿದೆ ಬಡವನನು ದರೋಡೆಗಾರರಿಂದ I ರಕ್ಷಿಸಿದೆ ದುರ್ಬಲನನು ಬಲಾಢ್ಯರಿಂದ I ಹೇ ಪ್ರಭು, ನಿನಗೆ ಸಮಾನರಾರೆಂದು” I ಹೊಗಳುವುವು ನನ್ನೆಲುಬುಗಳೊಂದೊಂದು II


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ಬಡವರಿಗೆ ದಿಕ್ಕಿಲ್ಲವೆಂದು ಅವರನ್ನು ಶೋಷಣೆಗೆ ಗುರಿಮಾಡಬೇಡ; ನ್ಯಾಯಾಲಯದಲ್ಲಿ ಆ ದಟ್ಟದರಿದ್ರರನ್ನು ಬಾಧಿಸಬೇಡ;


ದೀನದಲಿತರನಾತ ಉದ್ಧರಿಸಲಿ I ಬಡಬಗ್ಗರಿಗೆ ನ್ಯಾಯ ದೊರಕಿಸಲಿ I ಪ್ರಜಾಹಿಂಸಕರನು ಸದೆಬಡಿಯಲಿ II


ತೃಣೀಕರಿಸನು, ತಿರಸ್ಕರಿಸನು ದಲಿತನನು I ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು II


ಕಪಟವಾಡುವ ತುಟಿಗಳನು ಪ್ರಭು ಕಡಿದುಬಿಡಲಿ I ಬಡಾಯಿಕೊಚ್ಚುವ ಜಿಹ್ವೆಯನು ಕತ್ತರಿಸಿಬಿಡಲಿ II


“ನಮ್ಮ ತುಟಿಗೆ ಹತೋಟಿ ಬೇಕಿಲ್ಲ; ನಾಲಗೆಯೇ ಗೆಲುವಿನ ಮೂಲ I ನಮಗೊಡೆಯನ ಅವಶ್ಯವಿಲ್ಲ” ಎಂದವರಾಡುವುದು ಸಲ್ಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು