Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 140:2 - ಕನ್ನಡ ಸತ್ಯವೇದವು C.L. Bible (BSI)

2 ಕೇಡನು ಕಲ್ಪಿಸುತ್ತಾರವರು ಮನದೊಳು I ಕಲಹವೆಬ್ಬಿಸುತ್ತಾರೆ ಯಾವಾಗಲೂ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ಕೇಡು ಕಲ್ಪಿಸುತ್ತಾರೆ, ಯಾವಾಗಲೂ ಜಗಳವೆಬ್ಬಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರು ಕೇಡು ಕಲ್ಪಿಸುತ್ತಾರೆ; ಯಾವಾಗಲೂ ಜಗಳವೆಬ್ಬಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರು ಕೇಡುಮಾಡಬೇಕೆಂದಿದ್ದಾರೆ. ಅವರು ಯಾವಾಗಲೂ ಜಗಳವೆಬ್ಬಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಹೃದಯದಲ್ಲಿ ಕೇಡನ್ನು ಕಲ್ಪಿಸುತ್ತಾರೆ; ಅವರು ಪ್ರತಿದಿನ ಕಲಹವೆಬ್ಬಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 140:2
16 ತಿಳಿವುಗಳ ಹೋಲಿಕೆ  

ಒಟ್ಟುಗೂಡಿ ಹೊಂಚುಹಾಕುತಿಹರು I ಹೆಜ್ಜೆಹಿಡಿದು ಕೊಲ್ಲ ಬರುತಿಹರು II


ಆಲೋಚಿಸುತ್ತಿಹನು ಅಕ್ರಮವನು ಹಾಸಿಗೆಯಿಂದಲೆ I ಹೇಸನು ದುಷ್ಕೃತ್ಯಕ್ಕೆ, ಮುನ್ನುಗ್ಗುವನು ದುರ್ಮಾರ್ಗದಲೆ II


ನಿನೆವೆಯೇ, ಸರ್ವೇಶ್ವರಸ್ವಾಮಿಗೆ ವಿರುದ್ಧವಾಗಿ ಕುಯುಕ್ತಿಯನ್ನು ಕಲ್ಪಿಸುವವನು ನಿನ್ನಿಂದಲೆ ಹೊರಟಿದ್ದಾನೆ.


ಒಳಸಂಚಿನಿಂದ ಕೂಡಿದ ಅವರ ಹೃದಯ ಒಲೆಯಂತೆ ಉರಿಯುತ್ತದೆ. ಅವರ ಕೋಪಾಗ್ನಿ ರಾತ್ರಿಯೆಲ್ಲ ಹೊತ್ತಿಕೊಂಡೇ ಇರುತ್ತದೆ. ಬೆಳಗಾದದ್ದೇ ಧಗಧಗನೆ ಭುಗಿಲೇರುತ್ತದೆ.


ಕೇಡನ್ನು ಕಲ್ಪಿಸುವವರ ಮನದಲ್ಲಿ ಮೋಸ; ಒಳಿತನ್ನು ಬಯಸುವವರ ಮನದಲ್ಲಿ ಉಲ್ಲಾಸ.


ಶಾಂತಿಪರ ಮಾತು ನನ್ನದು I ಸಮರದ ಕಾತರ ಅವರದು II


ಎನಿತುಕಾಲ ದಾಳಿ ಮಾಡುವಿರಿ ಒಬ್ಬನ ಮೇಲೆ ನೀವೆಲ್ಲಾ? I ಕೆಡವಲು ಯತ್ನಿಸುವಿರಾ ಬಾಗಿದಾ ಗೋಡೆಯ, ಕುಸಿದಾ ಪೌಳಿಯ? II


ಉರಲನೊಡ್ಡಿಹರು ನನ್ನ ಪ್ರಾಣಹಂತಕರು I ನಿರ್ಧರಿಸಿಹರು ವಿನಾಶವನ್ನು ಕೇಡು ಬಗೆವವರು I ಕುತಂತ್ರವ ಮಾಡುವರು ಸತತ ಮೋಸಗಾರರು II


ತಂತ್ರೋಪಾಯಗಳ ಕಲ್ಪಿಸಿದರೂ ನಡೆಯದು I ಕೇಡನು ನಿನಗೆ ಬಗೆದರೂ ಅದು ಕೈಗೂಡದು II


ಇಗೋ ನನ್ನ ಪ್ರಾಣಕ್ಕವರು ಹೂಡಿರುವ ಹೊಂಚು I ನನ್ನ ಮೇಲೆರಗಲು ಹೂಡಿರುವ ಕ್ರೂರಿಗಳ ಸಂಚು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು