Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 140:3 - ಕನ್ನಡ ಸತ್ಯವೇದವು C.L. Bible (BSI)

3 ಅವರ ನಾಲಗೆಯು ಸರ್ಪದಂತೆ I ಹಾವಿನ ವಿಷ ಅವರ ತುಟಿ ಹಿಂದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ, ಅವರ ತುಟಿಗಳ ಹಿಂದೆ ಹಾವಿನ ವಿಷವಿದೆ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ; ಅವರ ತುಟಿಗಳ ಹಿಂದೆ ಹಾವಿನ ವಿಷವದೆ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರ ನಾಲಿಗೆಗಳು ಸರ್ಪಗಳಂತಿವೆ. ಅವರ ನಾಲಿಗೆಯ ಕೆಳಗೆ ಹಾವಿನ ವಿಷವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 140:3
18 ತಿಳಿವುಗಳ ಹೋಲಿಕೆ  

ಸರ್ಪಗಳಂತಾ ಜನ ವಿಷಭರಿತ I ನಾಗರದಂತೆ ಅವರ ಕಿವಿ ಮಂದ II


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಕುಡಿದಾದ ಮೇಲೆ ಅದು ಹಾವಿನಂತೆ ಕಚ್ಚುವುದು; ಹೌದು, ವಿಷಸರ್ಪದಂತೆ ಕಡಿಯುವುದು.


ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ.


ಎಲ್ಲರು ತಂತಮ್ಮ ಗೆಳೆಯರಿಗೆ ಮೋಸಮಾಡುತ್ತಾರೆ ಸತ್ಯವನ್ನು ನುಡಿವುದೇ ಇಲ್ಲ; ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ ಆಯಾಸವಾಗುವ ಮಟ್ಟಿಗೂ ಕೆಡಕನ್ನು ಮಾಡುತ್ತಿದ್ದಾರೆ.


ಸರ್ವೇಶ್ವರ : “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”


ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು.


ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.


ಸರ್ವೇಶ್ವರನಾದ ದೇವರು ಆ ಮಹಿಳೆಯನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಆಕೆ, “ಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆ ಮಾಡಿತು,” ಎಂದು ಉತ್ತರಕೊಟ್ಟಳು.


ಅವರ ಬಾಯಿ ಬೊಗಳುವ ಮಾತುಗಳನು ಕೇಳು I ಅವರ ತುಟಿಗಳು ಹರಿತ ಕತ್ತಿಕಠಾರಿಗಳು I ನಮಗಾರು ಕಿವಿಗೊಡರೆಂಬುದೆ ಅವರ ಗೋಳು II


ಅವನ ಮನದಲ್ಲಿರುವುದು ಮೂರ್ಖತನ; ಅವನು ಸತತ ಕಲ್ಪಿಸುವುದು ಕೆಡುಕುತನ. ಅವನು ಬಿತ್ತನೆ ಮಾಡುವುದು ಕಾಳಗ, ಕದನ.


ನನ್ನ ಹಾನಿಗಾಗಿ ನಿತ್ಯವೂ ಮಾಡುತ್ತಿರುವ ನಿಂದೆ ಅವಮಾನ, ತಂತ್ರೋಪಾಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು