Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 140:5 - ಕನ್ನಡ ಸತ್ಯವೇದವು C.L. Bible (BSI)

5 ಒಡ್ಡಿದರು ಗರ್ವಿಗಳು ಗುಪ್ತವಾಗಿ I ಉರುಲನು, ಪಾಶಗಳನು ನನಗಾಗಿ I ಬಲೆಹಾಸಿದರು ದಾರಿಗೆ ಅಡ್ಡವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ, ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ, ನನಗಾಗಿ ಬಲೆಬೀಸಿಟ್ಟಿದ್ದಾರೆ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ ಪಾಶಗಳನ್ನೂ ಒಡ್ಡಿದ್ದಾರೆ; ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ; ನನಗಾಗಿ ಬೋನಿಟ್ಟಿದ್ದಾರೆ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಗರ್ವಿಷ್ಠರು ನನಗೆ ಉರುಲನ್ನು ಒಡ್ಡಿದ್ದಾರೆ; ನನ್ನನ್ನು ಹಿಡಿಯಲು ಬಲೆಯನ್ನು ಹಾಸಿದ್ದಾರೆ; ನನ್ನ ದಾರಿಯಲ್ಲಿ ಬೋನನ್ನು ಇಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಗರ್ವಿಷ್ಠರು ನನಗೆ ಉರುಲನ್ನೂ, ಪಾಶಗಳನ್ನೂ ರಹಸ್ಯವಾಗಿ ಇಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನನಗೆ ಬೋನಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 140:5
21 ತಿಳಿವುಗಳ ಹೋಲಿಕೆ  

ಉರುಲೊಡ್ಡಿಹರು ನಾ ನಡೆಯುವ ಮಾರ್ಗದಲೆ I ನಾ ಮನಗುಂದಿರೆ, ಪರಿಹಾರವನು ನೀ ಬಲ್ಲೆ II


ನಿಷ್ಕಾರಣ ಕೊಲೆಮಾಡಲೆನ್ನ ಬಲೆಯೊಡ್ಡಿಹರು I ಆ ಕಾರಣ ಪ್ರಾಣ ತೆಗೆಯಲು ಗುಂಡಿ ತೋಡಿಹರು II


ಕಳ್ಳಕಾಕರ ಗುಂಪು ಫಕ್ಕನೆ ಅವರ ಮೇಲೆ ಬೀಳಲಿ. ಅವರ ಮನೆಮಠಗಳಿಂದ ಕಿರಿಚಾಟ ಕೇಳಿಬರಲಿ. ಅವರು ನನ್ನನ್ನು ಕೆಡವಲು ಗುಂಡಿಯನ್ನು ತೋಡಿದ್ದಾರೆ. ನನ್ನ ಕಾಲುಗಳಿಗೆ ಉರುಲನ್ನು ಗುಟ್ಟಾಗಿ ಒಡ್ಡಿದ್ದಾರೆ.


ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ಕಂಟಕ ಬಂದಿದೆ ನನ್ನ ಪ್ರಾಣಕೆ I ಹಾಕಿಹರು ಕಾಲಿಗೆ ಜೀರುಗುಣಿಕೆ II ತೋಡಿಹರು ಗುಂಡಿಯನು ನಾ ನಡೆವ ದಾರಿಯಲೆ I ತಾವೆ ತಟಕ್ಕನೆ ಬಿದ್ದುಹೋದರು ಅದರಲೆ II


ನೆರೆಯವನನ್ನು ಅಳತೆಮೀರಿ ಹೊಗಳುವವನು ಅವನ ಕಾಲಿಗೆ ಬಲೆಯನ್ನು ಒಡ್ಡುವನು.


ಒಡ್ಡಿಹರು ಎನಗೆ ಆ ದುರುಳ ಜನರು ಬಲೆಯನು I ಆದರೂ ಮೀರಿಲ್ಲ ನಾನು ನಿನ್ನ ನಿಯಮಗಳನು II


ಗುಂಡಿ ಅಗೆದಿಹರು ಎನಗೆ ಗರ್ವಿಷ್ಠರು I ಧರ್ಮಶಾಸ್ತ್ರ ಪಾಲಿಸದ ಆ ದುರುಳರು II


ಸುಳ್ಳು ಕಲ್ಪಿಸಿಹರಾ ಗರ್ವಿಗಳು ನಿನಗೆ ವಿರುದ್ಧವಾಗಿ I ನಾನೋ ಪಾಲಿಪೆ ನಿನ್ನ ನಿಯಮಗಳನು ಹೃತ್ಪೂರ್ವಕವಾಗಿ II


ಗರ್ವಿಗಳ ಕಾಲಿಗೆ ನಾ ಬೀಳುವುದು ಬೇಡ I ದುರುಳರ ಕೈ ನನ್ನ ಹೊರದೂಡುವುದು ಬೇಡ II


ವೈರಿಗಳ ಉರುಲುಬಂಡೆಯಿಂದೆನ್ನನು ರಕ್ಷಿಸು I ಅದರಲಿ ನಾ ಸಿಕ್ಕಿ ಬೀಳುವುದನು ತಪ್ಪಿಸು II


ಕತ್ತರಿಬೋನು ಅವನ ಹಿಮ್ಮಡಿಯನ್ನು ಕಚ್ಚುವುದು ಆ ಕಳ್ಳ ಉರುಲು ಅವನನ್ನು ಸಿಕ್ಕಿಸಿಕೊಳ್ಳುವುದು.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II


ದುಷ್ಟನೇ, ನೀತಿವಂತನ ಮನೆಗೆ ಕನ್ನಹಾಕಬೇಡ; ಅವನು ಕೂಡಿಸಿದ್ದನ್ನು ಕೊಳ್ಳೆಹೊಡೆಯಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು