Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 140:6 - ಕನ್ನಡ ಸತ್ಯವೇದವು C.L. Bible (BSI)

6 “ನೀನೆ ನನ್ನ ದೇವರು” ಎಂದೆ ಪ್ರಭುವಿಗೆ I ಕಿವಿಗೊಡೆಂದು ಕೇಳಿದೆ, ನನ್ನ ವಿಜ್ಞಾಪನೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಯೆಹೋವನಿಗೆ, “ನೀನೇ ನನ್ನ ದೇವರು, ಯೆಹೋವನೇ, ನನ್ನ ವಿಜ್ಞಾಪನೆಗೆ ಕಿವಿಗೊಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಯೆಹೋವನಿಗೆ - ನೀನೇ ನನ್ನ ದೇವರು; ಯೆಹೋವನೇ, ನನ್ನ ವಿಜ್ಞಾಪನೆಗೆ ಕಿವಿಗೊಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನೇ, ನನ್ನ ದೇವರು ನೀನೇ. ನನ್ನ ಪ್ರಾರ್ಥನೆಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಯೆಹೋವ ದೇವರಿಗೆ ಹೀಗೆ ಹೇಳಿದೆನು, “ನೀವು ನನ್ನ ದೇವರಾಗಿದ್ದೀರಿ; ಯೆಹೋವ ದೇವರೇ, ಕರುಣೆಗಾಗಿ ಬೇಡುವ ನನ್ನ ಮೊರೆಗೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 140:6
18 ತಿಳಿವುಗಳ ಹೋಲಿಕೆ  

ನಾನಾದರೋ ಪ್ರಭೂ, ನಿನ್ನಲೆ ಭರವಸೆಯಿಟ್ಟಿರುವೆ I ನೀನೆ ನನ್ನ ದೇವರೆಂದು ಪ್ರಭು ಸಾರುವೆ II


“ನೀನೇ ನನ್ನೊಡೆಯ"ನೆಂದು ನಾ ನುಡಿದೆ I ನಿನ್ನ ಹೊರತು ನನಗಿಲ್ಲ ಒಳಿತು” ಎಂದೇ II


ಪ್ರಭುವೇ, ನನಗಾಶ್ರಯ ನೀನೇ I ನನ್ನ ಬಾಳಿನ ಸೊತ್ತು ನೀನೇ I ಕೂಗಿ ನಿನಗೆ ಮೊರೆಯಿಡುತ್ತೇನೆ II


ಹೇ ಪ್ರಭು, ನೀನೇ ನನ್ನ ಪಾಲಿನ ಸ್ವಾಸ್ತ್ಯ I ನಿನ್ನ ವಾಕ್ಯದ ಪಾಲನೆಯೆ ನಾಗೈದ ನಿರ್ಣಯ II


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


“ನನ್ನ ಪಾಲಿನ ಸೊತ್ತು ಸರ್ವೇಶ್ವರನೇ, ನಿರೀಕ್ಷಿಸುತ್ತಿರುವೆನು ನಾನು ಆತನನ್ನೇ” ಇಂತೆಂದುಕೊಳ್ಳುತ್ತದೆ ನನ್ನ ಅಂತರಾತ್ಮ.


ಆಲಿಸು ಪ್ರಭು ನನ್ನ ಪ್ರಾರ್ಥನೆ ಸೇರಲಿ ನಿನಗೀ ಬಿನ್ನಹ I ನಿನ್ನ ನೀತಿಸತ್ಯತೆಗಳನುಸಾರ ಪಾಲಿಸೆನಗೆ ಸದುತ್ತರ II


ಆಲಿಸು, ಕಿವಿಗೊಡು ಪ್ರಭೂ, ನನ್ನಾರ್ತ ವಿಜ್ಞಾಪನೆಗೆ II


ನನಗಿದೆ ಪ್ರಭುವಿನಲ್ಲಿ ಪ್ರೀತಿ I ಆಲಿಸಿಹನಾತ ನನ್ನ ವಿನಂತಿ II


ನಾನಾತನಿಗೆ, ‘ನೀನೇ ನನ್ನ ರಕ್ಷಕನೂ I ದುರ್ಗವೂ ನಾ ನಂಬಿದ ದೇವನು’ ಎನ್ನುವೆನು II


ಕಿವಿಗೊಡು ದೇವಾ, ನನ್ನಾತ್ಮದ ಮೊರೆಗೆ I ಕಾಪಾಡು, ಶತ್ರುಗಳ ಭಯವಿದೆ ನನಗೆ II


ಸ್ಥಿರವಿದೆ ದೇವಾ, ಸುಸ್ಥಿರವಿದೆ ನನ್ನ ಮನ I ಹಾಡುತ ಪಾಡುತ ನಾ ರಚಿಸುವೆ ಗಾಯನ II


ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II


ಕಳ್ಳಕಾಕರ ಗುಂಪು ಫಕ್ಕನೆ ಅವರ ಮೇಲೆ ಬೀಳಲಿ. ಅವರ ಮನೆಮಠಗಳಿಂದ ಕಿರಿಚಾಟ ಕೇಳಿಬರಲಿ. ಅವರು ನನ್ನನ್ನು ಕೆಡವಲು ಗುಂಡಿಯನ್ನು ತೋಡಿದ್ದಾರೆ. ನನ್ನ ಕಾಲುಗಳಿಗೆ ಉರುಲನ್ನು ಗುಟ್ಟಾಗಿ ಒಡ್ಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು