Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 141:8 - ಕನ್ನಡ ಸತ್ಯವೇದವು C.L. Bible (BSI)

8 ಹೇ ಪ್ರಭೂ, ದೇವಾ, ನನ್ನ ದೃಷ್ಟಿ ನಿನ್ನ ಮೇಲಿದೆ I ವಿನಾಶಕೊಪ್ಪಿಸಬೇಡೆನ್ನ, ನಿನ್ನಾಶ್ರಯ ಕೋರಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ, ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನ ಒಡೆಯನಾದ ಯೆಹೋವನೇ, ಸಹಾಯಕ್ಕಾಗಿ ನಿನ್ನನ್ನೇ ಎದುರುನೋಡುವೆನು. ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. ದಯವಿಟ್ಟು ನನ್ನನ್ನು ಮರಣಕ್ಕೀಡು ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಸಾರ್ವಭೌಮ ಯೆಹೋವ ದೇವರೇ, ನನ್ನ ಕಣ್ಣುಗಳು ನಿಮ್ಮ ಕಡೆ ಇವೆ; ನಿಮ್ಮನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 141:8
9 ತಿಳಿವುಗಳ ಹೋಲಿಕೆ  

ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿರೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂದೂ ತಿಳಿಯದು; ನಮ್ಮ ಕಣ್ಣುಗಳು ನಿಮ್ಮನ್ನೇ ನೋಡುತ್ತಿವೆ,” ಎಂದು ಪ್ರಾರ್ಥಿಸಿದನು.


ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?


ನಾನು ನಿಮ್ಮನ್ನು ಅನಾಥರನ್ನಾಗಿ ಬಿಟ್ಟುಹೋಗುವುದಿಲ್ಲ. ನಿಮ್ಮ ಬಳಿಗೆ ಪುನಃ ಬರುತ್ತೇನೆ.


ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I ನೆರವೇರಿಸದೆ ಬಿಡನು ಅವರ ಕೋರಿಕೆಯನು II


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ನಾನು ಆಶ್ರಯಿಸಿಕೊಂಡಿರಲು ಪ್ರಭುವನು I ನೀವು ಹೇಳುವುದೆಂತು ನನಗೀ ಮಾತನು: II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು