Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 142:3 - ಕನ್ನಡ ಸತ್ಯವೇದವು C.L. Bible (BSI)

3 ಉರುಲೊಡ್ಡಿಹರು ನಾ ನಡೆಯುವ ಮಾರ್ಗದಲೆ I ನಾ ಮನಗುಂದಿರೆ, ಪರಿಹಾರವನು ನೀ ಬಲ್ಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ಆತ್ಮವು ಕುಂದಿಹೋದಾಗ, ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ, ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನ ಆತ್ಮವು ಕುಂದಿಹೋಗಿದೆ; ನೀನೇ ನನ್ನ ಮಾರ್ಗವನ್ನು ಬಲ್ಲವನು; ನಾನು ಹೋಗಬೇಕಾದ ದಾರಿಯಲ್ಲಿ ಉರುಲನ್ನೊಡ್ಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ವೈರಿಗಳು ನನಗೆ ಉರುಲನ್ನು ಒಡ್ಡಿದ್ದಾರೆ. ನನ್ನ ಆತ್ಮವು ಕುಂದಿಹೋಗಿದೆ. ನನ್ನ ಮಾರ್ಗವನ್ನು ತಿಳಿದಿರುವಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ, ದೇವರೇ ನೀವು ನನ್ನ ದಾರಿಯನ್ನು ಕಾಯುತ್ತೀರಿ; ನಾನು ನಡೆಯುವ ದಾರಿಯಲ್ಲಿ ವೈರಿಗಳು ಗುಪ್ತವಾಗಿ ನನಗೆ ಉರುಲನ್ನು ಒಡ್ಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 142:3
20 ತಿಳಿವುಗಳ ಹೋಲಿಕೆ  

ಕಾಪಾಡು ಕೆಡುಕರೊಡ್ಡಿದ ಉರುಲಿನಿಂದ I ತಪ್ಪಿಸೆನ್ನನು ಅವರಿಟ್ಟ ಬೋನಿನಿಂದ II


ಒಡ್ಡಿದರು ಗರ್ವಿಗಳು ಗುಪ್ತವಾಗಿ I ಉರುಲನು, ಪಾಶಗಳನು ನನಗಾಗಿ I ಬಲೆಹಾಸಿದರು ದಾರಿಗೆ ಅಡ್ಡವಾಗಿ II


ಕಳ್ಳಕಾಕರ ಗುಂಪು ಫಕ್ಕನೆ ಅವರ ಮೇಲೆ ಬೀಳಲಿ. ಅವರ ಮನೆಮಠಗಳಿಂದ ಕಿರಿಚಾಟ ಕೇಳಿಬರಲಿ. ಅವರು ನನ್ನನ್ನು ಕೆಡವಲು ಗುಂಡಿಯನ್ನು ತೋಡಿದ್ದಾರೆ. ನನ್ನ ಕಾಲುಗಳಿಗೆ ಉರುಲನ್ನು ಗುಟ್ಟಾಗಿ ಒಡ್ಡಿದ್ದಾರೆ.


ಸೊರಗಿಹೋಗಿದೆ ನನ್ನ ಚೈತನ್ಯ I ನಿಬ್ಬೆರಗಾಗಿದೆ ನನ್ನ ಹೃದಯ II


ಎದೆಗುಂದಿ ಮೊರೆಯಿಡುತ್ತಿರುವೆ ಜಗದೆಲ್ಲೆಯಿಂದ I ಹತ್ತಲಾಗದ ಆಶ್ರಯಗಿರಿಗೆ ಹತ್ತಿಸೆನ್ನ II


ಬಿಸಿಲಿಗೆ ಬಾಡಿದ ಹುಲ್ಲಿನಂತಿದೆ ಎನ್ನೆದೆ I ತಿಂಡಿತೀರ್ಥವನುಣ್ಣಲೂ ನಾ ಮರೆತುಹೋದೆ II


ದೇವರನು ಸ್ಮರಿಸಿ ನಿಟ್ಟುಸಿರಿಡುತಿಹೆನು I ಹಂಬಲಿಸಿ ಮನದಲೇ ನಾ ಮರುಗುತಿಹೆನು II


ಒಟ್ಟುಗೂಡಿ ಹೊಂಚುಹಾಕುತಿಹರು I ಹೆಜ್ಜೆಹಿಡಿದು ಕೊಲ್ಲ ಬರುತಿಹರು II


ವೈರಿಗಳ ಉರುಲುಬಂಡೆಯಿಂದೆನ್ನನು ರಕ್ಷಿಸು I ಅದರಲಿ ನಾ ಸಿಕ್ಕಿ ಬೀಳುವುದನು ತಪ್ಪಿಸು II


ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II


ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


ಅನಂತರ ಫರಿಸಾಯರು ಒಟ್ಟುಗೂಡಿ ಯೇಸುವನ್ನು ಹೇಗೆ ಮಾತಿನಲ್ಲಿ ಸಿಕ್ಕಿಸುವುದೆಂದು ಸಮಾಲೋಚನೆ ಮಾಡಿಕೊಂಡರು.


ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು I ನಾ ದೋಷರಹಿತ, ಮಾತಲಿ ತಪ್ಪದವ, ಎಂದಾಗ ತೀರ್ಮಾನಿಸು II


ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II


ಕಿವಿಗೊಡು ಪ್ರಭು, ನನ್ನ ಪ್ರಾರ್ಥನೆಗೆ I ನನ್ನ ಕೂಗು ಸೇರಲಿ ನಿನ್ನ ಬಳಿಗೆ II


ರಾತ್ರಿಯ ಒಂದೊಂದು ಜಾವದಲ್ಲೂ ಎದ್ದು ಗೋಳಾಡಿರಿ. ನಿಮ್ಮ ಹೃದಯ ಕರಗಿ, ನೀರಾಗಿ ಸ್ವಾಮಿಯ ಮುಂದೆ ಹರಿಯಲಿ. ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈ ಮುಗಿದು ಪ್ರಾರ್ಥನೆಮಾಡಿ. ಹಸಿವಿನಿಂದ ಅವು ಮೂರ್ಛೆಹೋಗಿವೆ, ಬೀದಿಯ ಮೂಲೆಮೂಲೆಗಳಲ್ಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು