Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 142:4 - ಕನ್ನಡ ಸತ್ಯವೇದವು C.L. Bible (BSI)

4 ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಬಲಗಡೆಗೆ ನೋಡಿ ಪರಾಂಬರಿಸು; ಅಲ್ಲಿ ಸಹಾಯಕರು ಯಾರೂ ಇಲ್ಲ. ಆಶ್ರಯವು ನಾಶವಾಯಿತು; ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಸುತ್ತಮುತ್ತ ನೋಡಿದರೂ ನನ್ನ ಸ್ನೇಹಿತರಲ್ಲಿ ಯಾರೂ ಕಾಣುತ್ತಿಲ್ಲ. ಓಡಿಹೋಗಲು ನನಗೆ ಯಾವ ಸ್ಥಳವೂ ಇಲ್ಲ. ನನ್ನನ್ನು ರಕ್ಷಿಸಲು ಯಾರೂ ಪ್ರಯತ್ನಿಸುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೋಡಿರಿ ನನ್ನ ಬಲಗಡೆಯಲ್ಲಿ, ನನ್ನ ಪರವಾಗಿ ಯಾರೂ ಇಲ್ಲ; ಆಶ್ರಯವು ನನಗೆ ಇಲ್ಲ; ನನಗಾಗಿ ಚಿಂತಿಸುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 142:4
19 ತಿಳಿವುಗಳ ಹೋಲಿಕೆ  

‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.


ಬಂಧುಮಿತ್ರರನು ನನ್ನಿಂದ ದೂರ ಮಾಡಿರುವೆ I ಅಂಧಕಾರದೊಡನೆ ಸಂಗಾತಿಯನ್ನಾಗಿಸಿರುವೆ II


ಶತ್ರುಗಳ ದೂಷಣೆಗೆ ಗುರಿಯಾದೆ, ನೆರೆಯವರಿಗೆ ನಿಂದಾಸ್ಪದನಾದೆ I ಮಿತ್ರರೂ ಬೆದರುವಂತಾದೆ; ದಾರಿಹೋಕರು ದೂರವಾಗುವಂತಾದೆ II


ಆದರೆ ಪವಿತ್ರಗ್ರಂಥದ ಪ್ರವಾದನೆಗಳು ಈಡೇರಲೆಂದೇ ಇದೆಲ್ಲಾ ಜರುಗಿದೆ,” ಎಂದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನಮಾಡಿದರು.


ಆಪ್ತರೂ ಹೇಸಿ ದೂರಸರಿವಂತೆ ಮಾಡಿರುವೆ I ಬಂಧಿತನಾದ ನಾನು ಬಿಡಿಸಿಕೊಳ್ಳಲಾಗದಿರುವೆ II


ನಿಂದೆಯಿಂದ ಮನನೊಂದು ಹತಾಶನಾಗಿರುವೆನಯ್ಯಾ I ಹಾತೊರೆದರೂ ದಯೆತೋರುವನಾರೂ ಸಿಗಲಿಲ್ಲ I ಅರಸಿದರೂ ಸಾಂತ್ವನನೀಡುವವನು ದೊರಕಲಿಲ್ಲ II


ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ.


ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.


ಕುರಿಗಾಹಿಗಳು ಓಡಿಹೋಗುವುದಕ್ಕೆ ದಾರಿ ಸಿಕ್ಕದು ಮೇಷಪಾಲರು ತಲೆತಪ್ಪಿಸಿಕೊಳ್ಳಲಿಕ್ಕೆ ಆಸ್ಪದ ದೊರಕದು.


ದುರ್ಜನರು ನಿರಾಶೆಯಿಂದ ಕಂಗೆಡುವರು ಪ್ರಾಣಬಿಡಬೇಕೆಂಬುದೇ ಅವರ ಆಶೆಯಾಗಿರುವುದು.”


ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II


“ನೀನೆ ನನ್ನ ದೇವರು” ಎಂದೆ ಪ್ರಭುವಿಗೆ I ಕಿವಿಗೊಡೆಂದು ಕೇಳಿದೆ, ನನ್ನ ವಿಜ್ಞಾಪನೆಗೆ II


ಕಾಪಾಡು ಕೆಡುಕರೊಡ್ಡಿದ ಉರುಲಿನಿಂದ I ತಪ್ಪಿಸೆನ್ನನು ಅವರಿಟ್ಟ ಬೋನಿನಿಂದ II


ಸೊರಗಿಹೋಗಿದೆ ನನ್ನ ಚೈತನ್ಯ I ನಿಬ್ಬೆರಗಾಗಿದೆ ನನ್ನ ಹೃದಯ II


ಕಳ್ಳಕಾಕರ ಗುಂಪು ಫಕ್ಕನೆ ಅವರ ಮೇಲೆ ಬೀಳಲಿ. ಅವರ ಮನೆಮಠಗಳಿಂದ ಕಿರಿಚಾಟ ಕೇಳಿಬರಲಿ. ಅವರು ನನ್ನನ್ನು ಕೆಡವಲು ಗುಂಡಿಯನ್ನು ತೋಡಿದ್ದಾರೆ. ನನ್ನ ಕಾಲುಗಳಿಗೆ ಉರುಲನ್ನು ಗುಟ್ಟಾಗಿ ಒಡ್ಡಿದ್ದಾರೆ.


ನಿರರ್ಥಕ ವಿಗ್ರಹಗಳನಾರಾಧಿಪ ಜನರು ತೊರೆದಿಹರು ಹಾರ್ದಿಕ ಭಕ್ತಿಯನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು