Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 142:5 - ಕನ್ನಡ ಸತ್ಯವೇದವು C.L. Bible (BSI)

5 ಪ್ರಭುವೇ, ನನಗಾಶ್ರಯ ನೀನೇ I ನನ್ನ ಬಾಳಿನ ಸೊತ್ತು ನೀನೇ I ಕೂಗಿ ನಿನಗೆ ಮೊರೆಯಿಡುತ್ತೇನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನೇ, ನಾನು ನಿನಗೆ - ನೀನೇ ನನ್ನ ಶರಣನೂ ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದೀ ಎಂದು ಕೂಗಿ ಮೊರೆಯಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ಯೆಹೋವನನ್ನು ಕೂಗಿಕೊಳ್ಳುವೆನು. ನನ್ನ ಆಶ್ರಯಸ್ಥಾನವೂ ನೀನೇ, ನನ್ನನ್ನು ಬದುಕಿಸಬಲ್ಲಾತನೂ ನೀನೇ ಎಂದು ಆತನಿಗೆ ಮೊರೆಯಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರೇ, ನಿಮಗೆ ಹೀಗೆಂದು ಮೊರೆಯಿಡುತ್ತೇನೆ: “ನೀವು ನನ್ನ ಆಶ್ರಯವೂ, ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 142:5
16 ತಿಳಿವುಗಳ ಹೋಲಿಕೆ  

ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ I ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ II


“ನನ್ನ ಪಾಲಿನ ಸೊತ್ತು ಸರ್ವೇಶ್ವರನೇ, ನಿರೀಕ್ಷಿಸುತ್ತಿರುವೆನು ನಾನು ಆತನನ್ನೇ” ಇಂತೆಂದುಕೊಳ್ಳುತ್ತದೆ ನನ್ನ ಅಂತರಾತ್ಮ.


ಹೇ ಪ್ರಭು, ನೀನೇ ನನ್ನ ಪಾಲಿನ ಸ್ವಾಸ್ತ್ಯ I ನಿನ್ನ ವಾಕ್ಯದ ಪಾಲನೆಯೆ ನಾಗೈದ ನಿರ್ಣಯ II


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ನಾನಾತನಿಗೆ, ‘ನೀನೇ ನನ್ನ ರಕ್ಷಕನೂ I ದುರ್ಗವೂ ನಾ ನಂಬಿದ ದೇವನು’ ಎನ್ನುವೆನು II


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು I ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು II


ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮನಿಮ್ಮ ಮನೆಗೆ ಚದರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ.


ನನ್ನ ತನುಮನಗಳೆಲ್ಲವೂ ಸೊರಗಿಹೋದರೂ I ನನ್ನಾತ್ಮದ ಶಕ್ತಿ, ಶಾಶ್ವತ ಸೊತ್ತು ದೇವರು II


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ಎಸಗುತಿಹರು ಉಪಕಾರಕೆ ಅಪಕಾರ I ಮಾಡಿಹರೆನ್ನನು ನಿರ್ಗತಿಕ ಪಿಂಜಾರ II


ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು