Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 142:6 - ಕನ್ನಡ ಸತ್ಯವೇದವು C.L. Bible (BSI)

6 ಕುಗ್ಗಿ ಹೋಗಿರುವೆ, ನನ್ನ ಕೂಗಿಗೆ ಪ್ರಭು ಕಿವಿಗೊಡು I ಬಲಿಷ್ಠ ಹಿಂಸಾತ್ಮಕರಿಂದ ನನ್ನನು ಪಾರುಮಾಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು, ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನೀನು ನನಗೆ ಬೇಕೇಬೇಕು. ನನ್ನನ್ನು ಬೆನ್ನಟ್ಟುತ್ತಿರುವ ಜನರಿಂದ ನನ್ನನ್ನು ರಕ್ಷಿಸು. ಅವರು ನನಗಿಂತ ಬಹು ಬಲಿಷ್ಠರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಕೂಗನ್ನು ಆಲೈಸಿರಿ, ಏಕೆಂದರೆ ನಾನು ಬಹಳ ಕುಂದಿಹೋಗಿದ್ದೇನೆ; ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸಿರಿ, ಏಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 142:6
18 ತಿಳಿವುಗಳ ಹೋಲಿಕೆ  

ಹೊರಿಸಬೇಡ ಪೂರ್ವಿಕರ ತಪ್ಪುಗಳನು ನಮ್ಮ ಮೇಲೆ I ಉರಿಸಂಕಟದಲ್ಲಿರುವೆವು, ತೋರೆಮಗೆ ಕರುಣೆಯನೀಗಲೆ II


ಕಾಪಾಡುವನು ಪ್ರಭು ಸರಳ ಜೀವಿಗಳನು I ರಕ್ಷಿಸಿದನು ಕುಗ್ಗಿದವನಾಗಿದ್ದ ಎನ್ನನು II


ಹೀನ ಸ್ಥಿತಿಯಲ್ಲಿದ್ದ ನಮ್ಮನ್ನು ಜ್ಞಾಪಿಸಿಕೊಂಡಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಲಕ್ಷ್ಯವಿಡು, ಓ ಪ್ರಭು, ಎನ್ನ ನ್ಯಾಯವಾದ ಮೊರೆಗೆ I ಕಿವಿಗೊಡು, ನಿಷ್ಕಪಟ ಬಾಯಿಂದ ಬಂದ ಪ್ರಾರ್ಥನೆಗೆ II


ನಮ್ಮನ್ನು ಪ್ರೀತಿಸಿದ ಯೇಸುಕ್ರಿಸ್ತರ ಮುಖಾಂತರ ಇವೆಲ್ಲವುಗಳಲ್ಲಿಯೂ ನಾವು ಪೂರ್ಣ ಜಯಶಾಲಿಗಳಾಗುತ್ತೇವೆ.


ದೇವರೇ ಆರಿಸಿಕೊಂಡವರ ಮೇಲೆ ಯಾರು ತಾನೇ ದೋಷಾರೋಪಣೆ ಮಾಡಬಲ್ಲರು? ದೇವರೇ ಅವರನ್ನು ನಿರ್ದೋಷಿಗಳೆಂದು ನಿರ್ಣಯಿಸಿರುವಾಗ ಅವರನ್ನು ದೋಷಿಗಳೆಂದು ನಿರ್ಣಯಿಸುವವರು ಯಾರು? ಪ್ರಾಣತ್ಯಾಗ ಮಾಡಿದ್ದಲ್ಲದೆ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವೇ ದೇವರ ಬಲಪಾರ್ಶ್ವದಲ್ಲಿದ್ದುಕೊಂಡು ನಮ್ಮ ಪರವಾಗಿ ಬಿನ್ನಯಿಸುತ್ತಿದ್ದಾರೆ.


ಸದುತ್ತರ ಪಾಲಿಸು ಪ್ರಭೂ, ಸೊರಗಿದೆ ಎನ್ನ ಚೇತನ I ನೀ ವಿಮುಖನಾದರೆ ನಾ ನರಕಹೊಕ್ಕವರಿಗೆ ಸಮಾನ II


ಇಗೋ ನನ್ನ ಪ್ರಾಣಕ್ಕವರು ಹೂಡಿರುವ ಹೊಂಚು I ನನ್ನ ಮೇಲೆರಗಲು ಹೂಡಿರುವ ಕ್ರೂರಿಗಳ ಸಂಚು II


ಬಲಿಷ್ಠ ವೈರಿಗಳು ವಿರೋಧಿಸುತಿಹರು ನಿಷ್ಕಾರಣವಾಗಿ I ಶತ್ರುಗಳನೇಕರು ದ್ವೇಷಿಸುತಿಹರು ಅನ್ಯಾಯವಾಗಿ II


ಬಿಡಿಸಿ ರಕ್ಷಿಸಿದನೆನ್ನಾ ಶತ್ರುಗಳಿಂದ I ನನಗಿಂತ ಪುಷ್ಟ, ಬಲಿಷ್ಟ ಹಗೆಗಳಿಂದ II


ಪ್ರಭೂ, ನನಗೆ ವಿರೋಧಿಗಳು ಅನೇಕ I ನನಗೆದುರಾಗಿ ನಿಂತವರು ಅತ್ಯಧಿಕ II


ಇಸ್ರಯೇಲರ ಅರಸರೇ, ಯಾರನ್ನು ಹಿಂದಟ್ಟಿ ಹೊರಟಿದ್ದೀರಿ? ಯಾರನ್ನು ಹಿಡಿಯಬೇಕೆಂದಿರುತ್ತೀರಿ? ಸತ್ತ ನಾಯಿಯನ್ನೇ? ಒಂದು ಬಡ ಸೊಳ್ಳೆಯನ್ನೇ?


ಮಾಡಿಹನು ನನ್ನ ಪ್ರಾಣ ನೆಲಕಚ್ಚುವಂತೆ ಬೆನ್ನಟ್ಟಿಹಾ ವೈರಿ I ದೂಡಿಹನು ಎಂದೊ ಸತ್ತ ಶವದಂತೆ ಕಾರ್ಗತ್ತಲೆಗಾ ದ್ರೋಹಿ II


ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು I ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು II


ಕಡಲಲ್ಲಿ ಗುಡ್ಡಗಳು ಮುಳುಗಿದರೂ ದಿಗಿಲಿಲ್ಲ I ಪೊಡವಿ ಕಂಪಿಸಿದರು ನಮಗೇನು ಭಯವಿಲ್ಲ II


ನಾನಾತನಿಗೆ, ‘ನೀನೇ ನನ್ನ ರಕ್ಷಕನೂ I ದುರ್ಗವೂ ನಾ ನಂಬಿದ ದೇವನು’ ಎನ್ನುವೆನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು