Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 142:7 - ಕನ್ನಡ ಸತ್ಯವೇದವು C.L. Bible (BSI)

7 ಬಿಡಿಸು ಸೆರೆಯಿಂದೆನ್ನನು, ಭಜಿಸುವೆನು ನಿನ್ನ ನಾಮವನು I ಸಜ್ಜನರ ಸಭೆಯಲಿ ಕೊಂಡಾಡುವೆನು ನಿನ್ನ ಉಪಕಾರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸೆರೆಯಿಂದ ನನ್ನನ್ನು ಬಿಡಿಸು, ನಿನ್ನ ನಾಮವನ್ನು ಕೀರ್ತಿಸುವೆನು. ನೀತಿವಂತರು ನಿನ್ನ ಮಹೋಪಕಾರಕ್ಕಾಗಿ, ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸೆರೆಯಿಂದ ನನ್ನನ್ನು ಬಿಡಿಸು; ನಿನ್ನ ನಾಮವನ್ನು ಕೀರ್ತಿಸುವೆನು. ನೀತಿವಂತರು ನಿನ್ನ ಮಹೋಪಕಾರಕ್ಕಾಗಿ ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಉರುಲಿನಿಂದ ಪಾರಾಗಲು ನನಗೆ ಸಹಾಯಮಾಡು. ಯೆಹೋವನೇ, ಆಗ ನಾನು ನಿನ್ನ ಹೆಸರನ್ನು ಕೊಂಡಾಡುವೆನು. ನೀನು ನನ್ನನ್ನು ಕಾಪಾಡಿದ್ದರಿಂದ ನೀತಿವಂತರು ನನ್ನೊಂದಿಗೆ ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಹೆಸರನ್ನು ಕೊಂಡಾಡುವ ಹಾಗೆ ನನ್ನ ಸೆರೆಯಿಂದ ನನ್ನನ್ನು ಬಿಡಿಸಿರಿ; ಆಗ ನೀವು ನನಗೆ ಮಾಡಿದ ಉಪಕಾರವನ್ನು ಕಂಡು ನೀತಿವಂತರು ನನ್ನ ಹತ್ತಿರ ಸೇರಿಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 142:7
20 ತಿಳಿವುಗಳ ಹೋಲಿಕೆ  

ಜೀವಿಸಮಾಡೆನ್ನನು ಪ್ರಭು, ನಿನ್ನ ನಾಮದ ನಿಮಿತ್ತ I ನಿನ್ನ ನೀತಿಗನುಸಾರ ಬಿಡಿಸೆನ್ನ ಪ್ರಾಣವನು ಆಪತ್ತಿನಿಂದ II


ದೊರಕಿಸುವನು ನ್ಯಾಯ ದಲಿತರಿಗೆ I ಒದಗಿಸುವನು ಆಹಾರ ಹಸಿದವರಿಗೆ I ನೀಡುವನು ಬಿಡುಗಡೆ ಬಂಧಿತರಿಗೆ II


ಪ್ರಭು ಮಾಡಿದ ಮಹೋಪಕಾರಗಳಿಗಾಗಿ I ಹಾಡುವೆ ಗೀತವನು ಮನಃಪೂರ್ವಕವಾಗಿ II


ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.


ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಆಗ ಸಿಯೋನ್ ನಗರಿಯ ದ್ವಾರದಲೆ ನಿಲ್ಲುವೆನು I ನಿನ್ನ ಗುಣಾತಿಶಯಗಳನು ಪ್ರಸಿದ್ಧಪಡಿಸುವೆನು I ನೀನಿತ್ತ ಮುಕ್ತಿಗಾಗಿ ಆನಂದಗೊಳ್ಳುವೆನು II


ಮೊರೆಯಿಡುವೆನು ನಾನು ಪ್ರಭುವಿಗೆ I ಸ್ವರವೆತ್ತಿ ಬೇಡುವೆನು ಆತನಿಗೆ II


ನಿನ್ನ ನುಡಿಯ ಕೇಳಿ ಬಾಳುವಂತೆ I ತೋರು ದಾಸನೆನಗೆ ಪ್ರಸನ್ನತೆ II


ಹಿಂತಿರುಗು ನನ್ನ ಮನವೆ, ವಿಶ್ರಾಂತಿ ನೆಲೆಗೆ II ಮಹೋಪಕಾರಗಳನ್ನು ಎಸಗಿಹನು ಪ್ರಭು ನಿನಗೆ II


ನಿನ್ನಾ ವಾಕ್ಯದಲಿ ನಾನಿತ್ತ ನಿರೀಕ್ಷೆಯಿಂದ I ಭಯಭಕ್ತಿಯುಳ್ಳವನು ನೋಡಿ ಪಡೆದನು ಆನಂದ II


ಪ್ರಭುವಿನಲ್ಲಿದೆ ನನ್ನ ಮನದಭಿಮಾನ I ದೀನರಿದನು ಕೇಳಿ, ಪಡೆಯಲಿ ಸುಮ್ಮಾನ I


ವಿರೋಧಿಗಳ ವಶಕ್ಕೆ ಎನ್ನನು ನೀ ಬಿಟ್ಟುಬಿಡಲಿಲ್ಲ I ನಿರಾತಂಕದೆಡೆಯಲಿ ನನ್ನ ನಿಲ್ಲಿಸಿದೆಯಲ್ಲಾ II


ನಿನ್ನ ಕಂಡು ನನ್ನ ವೈರಿಗಳು ಗೈದರು ಪಲಾಯನ I ಎದ್ದು ಬಿದ್ದು ಅವರೆಲ್ಲರೂ ಹೊಂದಿದರು ವಿನಾಶನ II


ಎಸಗಿಹರು ಉಪಕಾರಕೆ ಪ್ರತಿಯಾಗಿ ಅಪಕಾರ I ಎದುರಿಸುತಿಹರೀಗ ನಾ ಹಿಡಿದಿರುವ ಸನ್ಮಾರ್ಗ II


ಶತ್ರುಗಳಿಂದ ಪ್ರಭು ಮುಕ್ತಗೊಳಿಸೆನ್ನನು I ನಿನ್ನನೇ ಮೊರೆಹೊಕ್ಕು ನಾ ಬಂದಿರುವೆನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು