Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 143:10 - ಕನ್ನಡ ಸತ್ಯವೇದವು C.L. Bible (BSI)

10 ನೀನೆನ್ನ ದೇವರು; ಕಲಿಸೆನಗೆ ನಡೆಯಲು ನಿನ್ನ ಚಿತ್ತದಂತೆ I ನಿನ್ನ ಶುಭಾತ್ಮ ನೆರವಾಗಲಿ ನಾ ಸಮಹಾದಿಯಲಿ ನಡೆವಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ಚಿತ್ತದಂತೆ ನಡಕೊಳ್ಳುವದನ್ನು ನನಗೆ ಕಲಿಸು; ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಮಟ್ಟನೆಲದಲ್ಲಿ ನಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನ್ನ ಇಚ್ಛೆಗನುಸಾರವಾಗಿ ನಾನು ಮಾಡಬೇಕಾದುದನ್ನು ನನಗೆ ತೋರಿಸಿಕೊಡು. ನೀನೇ ನನ್ನ ದೇವರು. ನನಗೆ ಒಳ್ಳೆಯವನಾಗಿದ್ದು ಸುರಕ್ಷಿತವಾದ ದಾರಿಯಲ್ಲಿ ನಡೆಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ಚಿತ್ತದಂತೆ ಮಾಡುವುದಕ್ಕೆ ನನಗೆ ಬೋಧಿಸಿರಿ, ಏಕೆಂದರೆ ನೀವು ನನ್ನ ದೇವರು; ನಿಮ್ಮ ಒಳ್ಳೆಯ ಆತ್ಮವು ನನ್ನನ್ನು ಸಮಹಾದಿಯಲ್ಲಿ ನಡೆಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 143:10
36 ತಿಳಿವುಗಳ ಹೋಲಿಕೆ  

ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II


ಸ್ತುತಿ ಸಲ್ಲಲಿ ಪ್ರಭು ನಿನಗೆ I ನಿನ್ನ ಆಜ್ಞೆಗಳನು ಕಲಿಸು ಎನಗೆ II


ಅವರಿಗಿತ್ತಿರಿ ಉಪದೇಶಿಸಲು ಸತ್ಯಾತ್ಮವನು ಅವರ ಬಾಯಿಂದ ಹಿಂದೆಗೆಯಲಿಲ್ಲ ಮನ್ನವನು ಬಾಯಾರಿದ್ದಾಗ ಕುಡಿಯಲಿತ್ತಿರಿ ಅವರಿಗೆ ನೀರನು.


ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ.


ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


“ನೀನೆ ನನ್ನ ದೇವರು” ಎಂದೆ ಪ್ರಭುವಿಗೆ I ಕಿವಿಗೊಡೆಂದು ಕೇಳಿದೆ, ನನ್ನ ವಿಜ್ಞಾಪನೆಗೆ II


ನಾನಾದರೋ ಪ್ರಭೂ, ನಿನ್ನಲೆ ಭರವಸೆಯಿಟ್ಟಿರುವೆ I ನೀನೆ ನನ್ನ ದೇವರೆಂದು ಪ್ರಭು ಸಾರುವೆ II


ಅಂತೆಯೇ ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಆತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ಎನ್ನ ನಡೆಸು ನಿನ್ನ ಆಜ್ಞಾಮಾರ್ಗದಲಿ I ಪಡೆಯುವೆ ಹರ್ಷಾನಂದವನು ಅದರಲಿ II


ದೇವರ ಪವಿತ್ರಾತ್ಮರನ್ನು ನೋಯಿಸದಿರಿ; ವಿಮೋಚನೆಯ ದಿನದಂದು ನೀವು ದೇವರಿಗೆ ಸೇರಿದವರು ಎಂಬುದನ್ನು ತೋರಿಸಲು ನಿಮ್ಮ ಮೇಲೆ ಒತ್ತಲಾಗಿರುವ ಮುದ್ರೆಯು ಅವರೇ.


ತಪ್ಪಲಿಗೆ ಇಳಿದ ದನಕರುಗಳಂತೆ ಆ ಜನರನ್ನು ಕರೆತಂದಿತು ಸ್ವಾಮಿಯ ಆತ್ಮ ಶಾಂತಿ ನಿಲಯಕೆ. ಹೀಗೆ, ಆ ಜನರಿಗೆ ಮಾರ್ಗದರ್ಶಕರಾಗಿ ತಮ್ಮ ನಾಮವನ್ನು ಘನಪಡಿಸಿಕೊಂಡರು ಸ್ವಾಮಿ.


ಪ್ರಭುವಿನ ಭಯಭಕುತಿಯುಳ್ಳವನಿಗೆ I ಲಭಿಪುದು ಖಚಿತ ಋಜುಮಾರ್ಗದ ಕಲಿಕೆ II


ಕಾರಣ -ಸಚ್ಚರಿತೆ, ಸದಾಚಾರ ಮತ್ತು ಸತ್ಯಸಂಧತೆ ಇವೆಲ್ಲವೂ ಬೆಳಕಿನ ಕುಡಿಗಳು.


ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.


ಕೇಡಿದೆಯೇ ನೋಡು ನನ್ನ ಮಾರ್ಗದಲಿ I ನಡೆಸೆನ್ನನು ಆ ಸನಾತನ ಪಥದಲಿ II


ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲೂ ಪವಿತ್ರಾತ್ಮ ಪ್ರೇರಿತವಾದ ಪ್ರೀತಿಯಿಂದಲೂ ನಾನು ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ: ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ ನನ್ನ ಹೋರಾಟದಲ್ಲಿ ಸಹಕರಿಸಿರಿ.


ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ II


ದೇವಾ, ಓ ಎನ್ನ ದೇವಾ, ಏಕೆನ್ನ ಕೈಬಿಟ್ಟೆ? I ಕಿವಿಗೊಡದೆ ಏಕೆ ದೂರವಾಗಿಬಿಟ್ಟೆ? II


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.


ದೇವದರ್ಶನದ ಗುಡಾರದ ಮೇಲೆ ಆ ಮೇಘ ನಿಲ್ಲುವುದು ಎರಡು ದಿನವಾದರೂ ತಿಂಗಳಾದರೂ ಒಂದು ವರ್ಷವಾದರೂ ಸರಿಯೇ ಅಲ್ಲಿಯತನಕ ಇಸ್ರಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಅದು ಮೇಲೆದ್ದಾಗ ಅವರು ಹೊರಡುತ್ತಿದ್ದರು.


ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು I ಶತ್ರುರಹಿತ ಹಾದಿಯಲಿ ನಡೆಸು ಎನ್ನನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು