Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 143:11 - ಕನ್ನಡ ಸತ್ಯವೇದವು C.L. Bible (BSI)

11 ಜೀವಿಸಮಾಡೆನ್ನನು ಪ್ರಭು, ನಿನ್ನ ನಾಮದ ನಿಮಿತ್ತ I ನಿನ್ನ ನೀತಿಗನುಸಾರ ಬಿಡಿಸೆನ್ನ ಪ್ರಾಣವನು ಆಪತ್ತಿನಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು; ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನೇ, ನಿನ್ನ ಹೆಸರಿನ ನಿವಿುತ್ತ ನನ್ನನ್ನು ಉಜ್ಜೀವಿಸಮಾಡು; ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನೇ, ನನ್ನನ್ನು ಉಜ್ಜೀವಿಸಮಾಡು. ಆಗ ಜನರು ನಿನ್ನ ಹೆಸರನ್ನು ಕೊಂಡಾಡುವರು. ನೀನು ನಿಜವಾಗಿಯೂ ಒಳ್ಳೆಯವನೆಂಬುದನ್ನು ನನಗೆ ತೋರಿಸಿಕೊಡು. ನನ್ನನ್ನು ಶತ್ರುಗಳಿಂದ ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರೇ, ನಿಮ್ಮ ಹೆಸರಿನ ನಿಮಿತ್ತ ನನ್ನನ್ನು ಜೀವಿಸಮಾಡಿರಿ, ನಿಮ್ಮ ನೀತಿಗನುಸಾರ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಬಿಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 143:11
19 ತಿಳಿವುಗಳ ಹೋಲಿಕೆ  

ಎನ್ನನುದ್ಧರಿಸು ಪ್ರಭು, ನಿನ್ನ ನೀತಿಗನುಸಾರ I ನಿನ್ನ ಶರಣನಾದೆ, ನನಗಾಗದಿರಲಿ ತಾತ್ಸಾರ II


ನನ್ನ ಪ್ರಾಣ ಸೊರಗಿ ಸುಣ್ಣವಾಗಿದೆಯಯ್ಯಾ I ನಿನ್ನ ವಾಕ್ಯಾನುಸಾರ ಉಜ್ಜೀವಗೊಳಿಸಯ್ಯಾ II


ವ್ಯರ್ಥವಾದವುಗಳು ನಾಟದಿರಲಿ ಕಣ್ಗೆ I ಚೇತನ ನೀಡು ನಿನ್ನ ಮಾರ್ಗದಲಿ ನನಗೆ II


ಸತ್ಯಸ್ವರೂಪನೆ, ನನ್ನ ಬಿಡಿಸಿ ರಕ್ಷಿಸಯ್ಯಾ I ನನಗೆ ಕಿವಿಗೊಟ್ಟು ಪ್ರಭು ನನ್ನನುದ್ಧರಿಸಯ್ಯಾ II


ಮರಳಿ ಮಾಡು ನಮ್ಮೀಕಾಲದಲಿ ಅವುಗಳನು ಪ್ರಚುರಪಡಿಸು ಪ್ರಸ್ತುತಕಾಲದಲಿ ಅವುಗಳನು ರೋಷಗೊಂಡರೂ ಮರೆಯದಿರು ಕರುಣೆಯನು


ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II


ನಿನ್ನಚಲ ಪ್ರೀತಿಗನುಸಾರ ಚೈತನ್ಯಗೊಳಿಸೆನ್ನನು I ಕೈಗೊಳ್ಳುವೆನಾಗ ನಿನ್ನ ಬಾಯುಸುರಿದ ಕಟ್ಟಳೆಗಳನು II


ನವಜೀವವನು ತುಂಬಿಸಲಾರೆಯಾ ನಮ್ಮಲಿ? I ಆಗ ನಿನ್ನ ಜನರು ಆನಂದಿಸುವರು ನಿನ್ನಲಿ II


ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ನಿನ್ನ ನಾಮದ ನಿಮಿತ್ತ ನನ್ನನು ಈಕ್ಷಿಸು I ಎನ್ನ ಘೋರ ಪಾಪವನು ಪ್ರಭು ಕ್ಷಮಿಸು II


ಆಲಿಸು ಪ್ರಭು ನನ್ನ ಪ್ರಾರ್ಥನೆ ಸೇರಲಿ ನಿನಗೀ ಬಿನ್ನಹ I ನಿನ್ನ ನೀತಿಸತ್ಯತೆಗಳನುಸಾರ ಪಾಲಿಸೆನಗೆ ಸದುತ್ತರ II


ಕುಗ್ಗಿಹೋಗಿರುವೆನು ಪ್ರಭು ಅತ್ಯಧಿಕವಾಗಿ I ಚೇತನಗೊಳಿಸು ನಿನ್ನ ವಾಕ್ಯಾನುಸಾರವಾಗಿ II


ನಿನ್ನ ನಿಬಂಧನೆಗಳ ಅಭಿಮಾನಿಯು ನಾನು I ನೀತಿಗನುಸಾರ ಚೇತನಗೊಳಿಸೆನ್ನ ನೀನು II


ನಿವಾರಿಸೆನ್ನ ಮನಕ್ಲೇಶವನು I ಪರಿಹರಿಸೆನ್ನ ದುಃಖದುಗುಡವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು