ಕೀರ್ತನೆಗಳು 143:2 - ಕನ್ನಡ ಸತ್ಯವೇದವು C.L. Bible (BSI)2 ಗುರಿಮಾಡಬೇಡ ನಿನ್ನ ದಾಸನನು ನ್ಯಾಯ ವಿಚಾರಣೆಗೆ I ಯಾವ ಜೀವಾತ್ಮನೂ ನಿರ್ದೋಷಿಯಲ್ಲ ನಿನ್ನ ಲೆಕ್ಕಕೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಿನ್ನ ಸೇವಕನಾದ ನನಗೆ ತೀರ್ಪುಮಾಡಬೇಡ. ನನ್ನ ಇಡೀ ಜೀವಮಾನದಲ್ಲಿ ನಿರಪರಾಧಿಯೆಂಬ ತೀರ್ಪನ್ನು ಹೊಂದಲು ನನಗೆ ಸಾಧ್ಯವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ, ಏಕೆಂದರೆ ಜೀವಿಸುವರಲ್ಲಿ ಒಬ್ಬರೂ ನಿಮ್ಮ ಮುಂದೆ ನೀತಿವಂತರಲ್ಲ. ಅಧ್ಯಾಯವನ್ನು ನೋಡಿ |
ಆದರೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲ್ಲ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಡುವುದರಿಂದ ಮಾತ್ರ ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆಂದು ಬಲ್ಲೆವು. ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಸಲುವಾಗಿ ನಾವೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಬಿಟ್ಟು, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿದ್ದೇವೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲೆ ಯಾರೂ ದೇವರೊಡನೆ ಸತ್ಸಂಬಂಧಿಕರಾಗಿ ಕಂಡುಬರುವುದಿಲ್ಲ.